ಮುಂಬೈ | ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವಾಗ ಐವರು ಕಾರ್ಮಿಕರು ಉಸಿರುಗಟ್ಟಿ ಸಾವು

Date:

ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವಾಗ ಐವರು ಸಿಬ್ಬಂದಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಭಾನುವಾರ ಮುಂಬೈನ ನಾಗಪಾಡಾ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ನಾಗಪಾಡಾದ ಮಿಂಟ್ ರಸ್ತೆಯ ಗುಡ್ ಲಕ್ ಮೋಟಾರ್ ತರಬೇತಿ ಶಾಲೆಯ ಬಳಿಯ ಡಿಮ್ಟಿಮ್ಕರ್ ರಸ್ತೆಯಲ್ಲಿರುವ ಬಿಸ್ಮಿಲ್ಲಾ ಸ್ಪೇಸ್ ಬಿಲ್ಡಿಂಗ್ ಎಂಬ ನಿರ್ಮಾಣ ಹಂತದಲ್ಲಿರುವ ಕಟ್ಟದ ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವಾಗ ಮಧ್ಯಾಹ್ನ 1:30 ಸುಮಾರಿಗೆ ಈ ಘಟನೆ ಸಂಭವಿಸಿದೆ.

ಇದನ್ನು ಓದಿದ್ದೀರಾ? ಮುಂಬೈನ ಭಾಷೆ ಮರಾಠಿ, ಇತರರೂ ಅರ್ಥಮಾಡಿಕೊಳ್ಳಬೇಕು: ಆರ್‌ಎಸ್‌ಎಸ್‌ ನಾಯಕ ಯೂಟರ್ನ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂಬೈ ಅಗ್ನಿಶಾಮಕ ದಳದ ತಂಡಗಳು ಕಾರ್ಮಿಕರನ್ನು ಟ್ಯಾಂಕ್‌ನಿಂದ ಹೊರತೆಗೆದು ಸರ್ ಜೆಜೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಲ್ಲಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಮುಂಬೈ ಪೊಲೀಸ್ ಅಧಿಕಾರಿಗಳು ಐವರು ಕಾರ್ಮಿಕರು ಸಾವನ್ನಪ್ಪಿರುವುದಾಗಿ ದೃಢಪಡಿಸಿದ್ದಾರೆ.

ಯಾವುದೇ ದೊಡ್ಡ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವಾಗ ಕಾರ್ಮಿಕರ ಸುರಕ್ಷತೆಗೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ. ಆದರೆ ದೇಶದಲ್ಲಿ ಹಲವೆಡೆ ಕಾರ್ಮಿಕರ ಪ್ರಾಣಕ್ಕೆ ಬೆಲೆ ಇಲ್ಲದಂತಾಗಿದೆ. ಯಾವುದೇ ಸುರಕ್ಷತೆ ಇಲ್ಲದೆಯೇ ಕಾರ್ಮಿಕರನ್ನು ನೀರಿನ ಟ್ಯಾಂಕ್‌ಗೆ ಇಳಿಸಲಾಗುತ್ತದೆ. ದುಡಿಮೆಯೇ ಹೊಟ್ಟೆ ತುಂಬಿಸುವಾಗ ಕಾರ್ಮಿಕರು ತಮ್ಮ ಪ್ರಾಣ ಪಣಕ್ಕಿಟ್ಟು ಕೆಲಸ ಮಾಡುತ್ತಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...