ದೆಹಲಿ | ಐದು ಶಾಲೆಗಳಿಗೆ ಬಾಂಬ್ ಬೆದರಿಕೆ: ಮೂರು ದಿನಗಳಲ್ಲಿ ಹತ್ತನೇ ಘಟನೆ

Date:

ದೆಹಲಿಯ ಐದು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಕೂಡಲೇ ಅಧಿಕಾರಿಗಳು ಆವರಣವನ್ನು ತೆರವುಗೊಳಿಸಿದ್ದು ಸಂಪೂರ್ಣ ಪರಿಶೀಲನೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂರು ದಿನಗಳಲ್ಲಿ ಹೀಗೆಯೇ ಹತ್ತು ಬಾರಿ ಬಾಂಬ್ ಬೆದರಿಕೆ ಇಮೇಲ್, ಕರೆ ಬಂದಿದೆ ಎಂದು ವರದಿಯಾಗಿದೆ.

ದ್ವಾರಕಾದ ಸೇಂಟ್ ಥಾಮಸ್ ಶಾಲೆಯನ್ನು ಸ್ಫೋಟಿಸುವುದಾಗಿ ಇಮೇಲ್ ಬಂದಿದ್ದು ಈ ಬಗ್ಗೆ ಬೆಳಿಗ್ಗೆ 5:26ಕ್ಕೆ ಅಗ್ನಿಶಾಮಕ ದಳಕ್ಕೆ ಕರೆ ಬಂದಿದೆ. ವಸಂತ್ ಕುಂಜ್‌ನ ವಸಂತ್ ವ್ಯಾಲಿ ಶಾಲೆಯಲ್ಲಿ ಬೆಳಿಗ್ಗೆ 6.30ಕ್ಕೆ, ಹೌಜ್ ಖಾಸ್‌ನಲ್ಲಿರುವ ಮದರ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಬೆಳಿಗ್ಗೆ 8.12ಕ್ಕೆ ಮತ್ತು ಪಶ್ಚಿಮ ವಿಹಾರ್‌ನಲ್ಲಿರುವ ರಿಚ್‌ಮಂಡ್ ಗ್ಲೋಬಲ್ ಶಾಲೆಯಲ್ಲಿ ಬೆಳಿಗ್ಗೆ 8.11ಕ್ಕೆ ಬೆದರಿಕೆ ಇಮೇಲ್‌ಗಳು ಬಂದಿವೆ ಎಂದು ಅಗ್ನಿಶಾಮಕ ಸೇವಾ ಅಧಿಕಾರಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ವಾರಣಾಸಿ-ಬೆಂಗಳೂರು ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ಕೆನಡಾ ಪ್ರಜೆ ವಶಕ್ಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೋಧಿ ಎಸ್ಟೇಟ್‌ನಲ್ಲಿರುವ ಸರ್ದಾರ್ ಪಟೇಲ್ ವಿದ್ಯಾಲಯಕ್ಕೂ ಬೆದರಿಕೆ ಇಮೇಲ್ ಬಂದಿದೆ. ಶಾಲೆಯನ್ನು ಸಂಪೂರ್ಣ ಪರಿಶೀಲಿಸಲಾಗಿದ್ದು, ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ ಎನ್ನಲಾಗಿದೆ. ಸದ್ಯ ಬಾಂಬ್ ಬೆದರಿಕೆ ಹಿನ್ನೆಲೆ ಈ ಶಾಲೆಗಳನ್ನು ಮುಚ್ಚಲಾಗಿದೆ.

ಸೇಂಟ್ ಥಾಮಸ್ ಶಾಲೆಗೆ 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಎರಡು ಬಾರಿ ಬಾಂಬ್ ಬೆದರಿಕೆ ಬಂದಿದೆ. ಒಟ್ಟಾರೆಯಾಗಿ, ನಗರದ ಒಂಬತ್ತು ಶಾಲೆಗಳಿಗೆ 10 ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿವೆ. ಸದ್ಯ ಹುಸಿ ಬಾಂಬ್ ಬೆದರಿಕೆಯೇ ಎಂಬುದು ಸ್ಪಷ್ಟವಾಗಿಲ್ಲ, ಸ್ಥಳದ ಪರಿಶೀಲನೆ, ತನಿಖೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...