ಮಾಟಮಂತ್ರ ಮಾಡುತ್ತಿದ್ದ ಶಂಕೆ: ಒಂದೇ ಕುಟುಂಬದ ಐವರ ಸಜೀವ ದಹನ

Date:

ಮಾಟಮಂತ್ರ ಮಾಡಿರುವ ಶಂಕೆಯಿಂದ ಒಂದೇ ಕುಟುಂಬದ ಐವರ ಸಜೀವ ದಹನ ಮಾಡಿರುವ ಘಟನೆ ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಡಿಐಜಿ(ಪೂರ್ಣಿಯಾ) ಪ್ರಮೋದ್ ಕುಮಾರ್ ಮಂಡಲ್, “ಟೆಟ್ಮಾ ಗ್ರಾಮದ ಒಂದು ಕುಟುಂಬದ ಐವರ ಹತ್ಯೆ ನಡೆದಿದೆ. ಮಾಟಮಂತ್ರ ಮಾಡುತ್ತಿದ್ದರು ಎಂಬ ಶಂಕೆಯಿಂದ ಸ್ಥಳೀಯರು ಈ ಕುಟುಂಬದ ಸದಸ್ಯ ಮೇಲೆ ಹಲ್ಲೆ ನಡೆಸಿ ಪೊದೆಯಲ್ಲಿ ಸಜೀವ ದಹನ ಮಾಡಿರುವ ಶಂಕೆಯಿದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ವೃದ್ಧೆಗೆ ಬಲವಂತವಾಗಿ ಮೂತ್ರ ಕುಡಿಸಿ ವಿಕೃತಿ ಮೆರೆದ ಗ್ರಾಮಸ್ಥರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರ ಪ್ರಕಾರ, ಸದರ್ ಉಪವಿಭಾಗದ ವ್ಯಾಪ್ತಿಯ ಟೆಟ್ಮಾ ಗ್ರಾಮದಲ್ಲಿ ಭಾನುವಾರ ರಾತ್ರಿ ಕೊಲೆಗಳು ನಡೆದಿವೆ. ಸೋಮವಾರ ಮುಂಜಾನೆ ಸ್ಥಳೀಯ ಪೊಲೀಸರಿಗೆ ಈ ಕುಟುಂಬದ 16 ವರ್ಷದ ಸೋನು ಕುಮಾರ್ ಎಂಬ ಬಾಲಕ ಕರೆ ಮಾಡಿ ವಿಷಯ ತಿಳಿಸಿದ್ದು, ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಗ್ರಾಮದಲ್ಲಿ ಇತ್ತೀಚೆಗೆ ನಡೆದ ಮಗುವಿನ ಕೊಲೆಯಿಂದಾಗಿ ಈ ದಾಳಿ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ರಾಮ್‌ದೇವ್ ಒರಾನ್ ಎಂಬವರ ಮಗು ಮೂರು ದಿನಗಳ ಹಿಂದೆ ಮೃತಪಟ್ಟಿದ್ದು, ಸೋನು ಕುಮಾರ್‌ನ ಕುಟುಂಬಸ್ಥರು ಮಾಟಮಂತ್ರ ಮಾಡಿ ಮಗುವನ್ನು ಬಲಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಆರೋಪದಿಂದಾಗಿ ಮಗುವಿನ ಕುಟುಂಬಸ್ಥರು ಮತ್ತು ಸ್ಥಳೀಯರು ಸೋನು ಕುಮಾರ್‌ನ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿ ಸಜೀವ ದಹನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...