ಹಿಮಾಚಲ ಪ್ರದೇಶ | ಕಂದಕಕ್ಕೆ ಉರುಳಿದ ಕಾರು; ಒಂದೇ ಕುಟುಂಬದ ಐವರು ಸೇರಿ ಆರು ಮಂದಿ ಸಾವು

Date:

ಕಾರೊಂದು ಸುಮಾರು 500 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದು ಒಂದೇ ಕುಟುಂಬದ ಐವರು ಸೇರಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಟಿಸ್ಸಾ ಉಪವಿಭಾಗದ ಚಾನ್ವಾಸ್ ಬಳಿ ನಡೆದಿದೆ. ಕುಟುಂಬವು ತಮ್ಮ ಮನೆಯಿಂದ ಒಂದು ಕಿಲೋ ಮೀಟರ್ ದೂರದಲ್ಲಿರುವಾಗ ಈ ಕಾರು ಅಪಘಾತ ಸಂಭವಿಸಿದೆ.

ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ತಮ್ಮ ಕುಟುಂಬ ಸದಸ್ಯರೊಂದಿಗೆ ಬನಿಖೇತ್‌ನಿಂದ ಮನೆಗೆ ಹಿಂತಿರುಗುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ. ಬಂಡೆ ಬಿದ್ದ ಪರಿಣಾಮ ವಾಹನ ಕಂದಕಕ್ಕೆ ಉರುಳಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಛತ್ತೀಸ್‌ಗಢ | ಭೀಕರ ಅಪಘಾತ: ಮೂವರ ಸಾವು, ಆರು ಮಂದಿಗೆ ಗಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮಸ್ಥರು ಕೂಡಲೇ ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿ ತಾವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ ಎನ್ನಲಾಗಿದೆ.

ಮೃತರನ್ನು ಬನಿಖೇತ್‌ನ ಶಿಕ್ಷಕ ರಾಜೇಶ್, ಅವರ ಪತ್ನಿ ಹನ್ಸೊ (36), ಅವರ ಮಗ ದೀಪಕ್ (15), ಮತ್ತು ಮಗಳು ಆರತಿ (17), ಸೋದರ ಮಾವ ಹೇಮರಾಜ್ ಮತ್ತು ತನ್ನ ಕಾರಿನಲ್ಲಿ ಕರೆದೊಯ್ದ ಇನ್ನೋರ್ವ ಸಂಬಂಧಿಕ ಎಂದು ಗುರುತಿಸಲಾಗಿದೆ.

ಗುರುವಾರ ರಾತ್ರಿ 9:30ರ ಸುಮಾರಿಗೆ ಈ ಅಪಘಾತ ನಡೆದಿದ್ದು, ಮೃತದೇಹಗಳನ್ನು ಹೊರತೆಗೆಯಲು ಸುಮಾರು ಆರು ಗಂಟೆಗಳು ತಗುಲಿದೆ. ಸದ್ಯ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...