ಅಕ್ಕಿ ಗಿರಣಿಯಲ್ಲಿ ವಿಷಾನಿಲ ಸೇವಿಸಿ ಐವರು ಕಾರ್ಮಿಕರು ಸಾವು

Date:

ಅಕ್ಕಿ ಗಿರಣಿಯಲ್ಲಿ ಹೊರಸೂಸಿದ ಹೊಗೆಯನ್ನು ಉಸಿರಾಡಿದ ಪರಿಣಾಮ ಐವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ನಡೆದಿದೆ.

ವಿಷಾನಿಲವನ್ನು ಉಸಿರಾಡಿದ ನಂತರ ಹಲವು ಕಾರ್ಮಿಕರು ಮೂರ್ಛೆ ಹೋಗಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿಮ, ಐವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ಬಹ್ರೈಚ್‌ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಮಾನಂದ ಪ್ರಸಾದ್ ಕುಶ್ವಾಹ ಪಿಟಿಐಗೆ ತಿಳಿಸಿದ್ದಾರೆ.

ಬಹ್ರೈಚ್‌ನಲ್ಲಿರುವ ರಾಜ್‌ಗರಿಯಾ ಅಕ್ಕಿ ಗಿರಣಿಯಲ್ಲಿ ಈ ಘಟನೆ ನಡೆದಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಹಲವಾರು ಕಾರ್ಮಿಕರು ಶುಕ್ರವಾರ ಬೆಳಿಗ್ಗೆ ಕೆಲಸಕ್ಕಾಗಿ ಗಿರಣಿಗೆ ಬಂದಿದ್ದಾರೆ. ಈ ವೇಳೆ, ಡ್ರೈಯರ್‌ನಿಂದ ಹೊರಹೊಮ್ಮುತ್ತಿದ್ದ ಹೊಗೆಯನ್ನು ಪರಿಶೀಲಿಸಲು ಹೋಗಿದ್ದಾರೆ. ಆದರೆ, ಇಡೀ ಗಿರಣಿಯನ್ನು ಹೊಗೆ ಆವರಿಸಿದ್ದರಿಂದ ಎಲ್ಲ ಕಾರ್ಮಿಕರು ಮೂರ್ಛೆ ಹೋಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ತಂಡವು ಧಾವಿಸಿದ್ದು, ಮೂರ್ಛೆ ಹೋಗಿದ್ದ ಕಾರ್ಮಿಕರನ್ನು ಆಸ್ಪತ್ರೆಗೆ ಸಾಗಿಸಿತು. ಆದರೂ, ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೂವರು ಕಾರ್ಮಿಕರ ಆರೋಗ್ಯ ಸುಧಾರಿಸುತ್ತದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ರಮಾನಂದ ಪ್ರಸಾದ್ ತಿಳಿಸಿದ್ದಾರೆ.

ಘಟನೆಗೆ ಕಾರಣವಾದ ವಿಷಯಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...