ಗೋವಾ| ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ, 15 ಮಂದಿ ವಶಕ್ಕೆ

Date:

ದಕ್ಷಿಣ ಗೋವಾದಲ್ಲಿ ಶುಕ್ರವಾರ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಕನಿಷ್ಠ 15 ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೃತಪಟ್ಟ ಅಪ್ರಾಪ್ತ ಬಾಲಕಿಯನ್ನು ಮುಂಜಾನೆ 3 ಗಂಟೆಗೆ ಘಟನೆ ಸಮಯದಲ್ಲಿ ಆಸ್ಪತ್ರೆಗೆ ಕರೆತರಲಾಗಿದ್ದು ಈ ಬಗ್ಗೆ ಆಸ್ಪತ್ರೆಯು ಪೊಲೀಸರಿಗೆ ಮಾಹಿತಿ ನೀಡಿದರು. ಸಂತ್ರಸ್ತೆಯ ಪೋಷಕರು ಪಶ್ಚಿಮ ಬಂಗಾಳದಿಂದ ವಲಸೆ ಬಂದ ಕಾರ್ಮಿಕರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ದಕ್ಷಿಣ ಗೋವಾ ಎಸ್‌ಪಿ ಸುನೀತಾ ಸಾವಂತ್, “ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ನಂತರ ಕೊಚ್ಚಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಘಟನೆಯ ಸಮಯದಲ್ಲಿ ನಿರ್ಮಾಣ ಹಂತದ ಕಟ್ಟಡದ ಸುತ್ತಮುತ್ತ ಕೆಲಸ ಮಾಡುತ್ತಿದ್ದ 15ರಿಂದ 20 ಕಾರ್ಮಿಕರನ್ನು ಬಂಧಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ), 302 (ಕೊಲೆ), ಪೋಕ್ಸೋ ಕಾಯ್ದೆ ಮತ್ತು ಗೋವಾ ಮಕ್ಕಳ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನು ಓದಿದ್ದೀರಾ?   ಬೆಂಗಳೂರು | ಕಾರ್ಮಿಕ ಮಹಿಳೆ ಮೇಲೆ ಅತ್ಯಾಚಾರವೆಸಗಿ ಭೀಕರ ಹತ್ಯೆ

“ಶುಕ್ರವಾರ ರಾತ್ರಿ ಬಾಲಕಿಯ ತಂದೆ ಕೆಲಸ ಮಾಡುತ್ತಿದ್ದಾಗ, ಅವರ ಐದು ವರ್ಷದ ಮಗಳು ಅವರೊಂದಿಗೆ ಇದ್ದಳು. 12.15 ರ ಸುಮಾರಿಗೆ, ಅವರು ತಮ್ಮ ಮಗಳನ್ನು ತಮ್ಮ ಮನೆಗೆ ಹೋಗಲು ತಿಳಿಸಿದ್ದಾರೆ” ಎಂದು ವರದಿಯಾಗಿದೆ.

“ಪೋಷಕರಿಗೆ ತಮ್ಮ ಮನೆಯ ಸಮೀಪವಿರುವ ಕಟ್ಟಡದ ಹಿಂದೆ ಬಾಲಕಿಯ ಮೃತದೇಹ ಕಂಡಿದ್ದು ಆಸ್ಪತ್ರೆಗೆ ಕರೆತಂದಿದ್ದಾರೆ. ಆಸ್ಪತ್ರೆಯಲ್ಲಿ ಬಾಲಕಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಬಾಲಕಿಯ ಮುಖ ಮತ್ತು ಕುತ್ತಿಗೆಯ ಮೇಲೆ ಕೆಲವು ಗಾಯದ ಗುರುತುಗಳಿವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...