ಹಿಮಾಚಲ ಹೆದ್ದಾರಿಯಲ್ಲಿ ಹಠಾತ್ ಪ್ರವಾಹ; ಸಾವಿನ ಸಂಖ್ಯೆ 261ಕ್ಕೆ ಏರಿಕೆ

Date:

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಪನಾರ್ಸಾ, ಟಕೋಲಿ ಹಾಗೂ ನಾಗವೈನ್ ಪ್ರದೇಶಗಳಲ್ಲಿ ಭಾನುವಾರ ಭಾರೀ ಮಳೆಯಾಗಿದ್ದು, ಚಂಡೀಗಢ-ಮನಾಲಿ ರಾಷ್ಟ್ರೀಯ ಹೆದ್ದಾರಿಯ ಮಂಡಿ-ಕುಲ್ಲು ಬಳಿ ಭಾರೀ ಪ್ರವಾಹ ಉಂಟಾಗಿದೆ. ಪ್ರವಾಹದಿಂದ ಭೀಕರ ಅನಾಹುತಗಳು ಸಂಭವಿಸಿವೆ. ಮಳೆ-ಪ್ರವಾಹದಿಂದಾಗಿ ಕಳೆದ ಎರಡೂವರೆ ತಿಂಗಳಲ್ಲಿ 261 ಮಂದಿ ಸಾವನ್ನಪ್ಪಿದ್ದಾರೆ.

ಭಾನುವಾರದ ಪ್ರವಾಹದ್ಲಿ ಯಾವುದೇ ಸಾವುಗಳು ಸಂಭವಿಸಿಲ್ಲ ಎಂದು ಮಂಡಿಯ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಸಚಿನ್ ಹಿರೇಮಠ್ ತಿಳಿಸಿದ್ದಾರೆ. ಹಾನಿಗೊಳಗಾದ ಸ್ಥಳಗಳಲ್ಲಿ ಪೊಲೀಸ್‌ ಸಿಬ್ಬಂದಿ ಕಣ್ಗಾವಲು ಕಾಯುತ್ತಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸದಂತೆ ಎಚ್ಚರಿಕೆ ವಹಿಸಲು ಮತ್ತು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಹಿಮಾಚಲ ಪ್ರದೇಶದ ಹಲವಾರು ಸ್ಥಳಗಳು ಮಾನ್ಸೂನ್ ಮಳೆ ಅಬ್ಬರ ಹೆಚ್ಚಾಗಿದೆ. ಹಿಮಾಚಲ ಪ್ರದೇಶ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (HPSDMA) ಪ್ರಕಾರ, ಜೂನ್ 20ರಿಂದ ಆಗಸ್ಟ್ 16 ರವರೆಗೆ ರಾಜ್ಯದಲ್ಲಿ 261 ಸಾವುಗಳು ಸಂಭವಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಳೆಯಿಂದಾಗಿ ರಾಜ್ಯದಲ್ಲಿ ಭೂಕುಸಿತ, ಹಠಾತ್ ಪ್ರವಾಹ, ಮುಳುಗಡೆ, ವಿದ್ಯುತ್ ಆಘಾತ ಹಾಗೂ ಮನೆ ಕುಸಿತ ಸಂಭವಿಸುತ್ತಿವೆ. ಈ ಘಟನೆಗಳಲ್ಲಿ 136 ಜನರು ಸಾವನ್ನಪ್ಪಿದ್ದಾರೆ. ರಸ್ತೆ ಅಪಘಾತಗಳಲ್ಲಿ 125 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಕಾಂಗ್ರಾ ಜಿಲ್ಲೆ ಒಂದರಲ್ಲೇ ಮಳೆಯಿಂದಾಗಿ 28 ಸಾವುಗಳು ಸಂಭವಿಸಿವೆ. ಮಂಡಿ ಜಿಲ್ಲೆಯಲ್ಲಿ 26 ಸಾವುಗಳು, ಚಂಬಾ ಜಿಲ್ಲೆಯಲ್ಲಿ 10 ಹಾಗೂ ಕುಲ್ಲು ಜಿಲ್ಲೆಯಲ್ಲಿ 11 ಸಾವುಗಳು ಸಂಭವಿಸಿವೆ.

ಮಳೆ ಪರಿಣಾಮದಿಂದ ಹಿಮಾಚಲದಲ್ಲಿ 2,14,457 ಕೋಟಿ ರೂ. ಮೌಲ್ಯದ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳು ನಾಶವಾಗಿವೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...