ನವದೆಹಲಿಯಲ್ಲಿ ಭಾರಿ ಮಳೆ: 200 ವಿಮಾನ ಸಂಚಾರಗಳ ವ್ಯತ್ಯಯ

Date:

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ಮುಂಜಾನೆ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, 200ಕ್ಕೂ ಅಧಿಕ ವಿಮಾನಗಳಲ್ಲಿ ಸಂಚಾರ ವ್ಯತ್ಯಯಗೊಂಡಿದೆ.

ವಿಮಾನ ನಿಲ್ದಾಣ ಅಧಿಕಾರಿಗಳ ಪ್ರಕಾರ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ಕನಿಷ್ಠ 200 ವಿಮಾನಗಳನ್ನು ಸಂಚಾರಗಳಲ್ಲಿ ವ್ಯತ್ಯಯವುಂಟಾಗಿದೆ. ಪ್ರತಿಕೂಲ ಪರಿಸ್ಥಿತಿಗಳು ಹಲವಾರು ವಿಮಾನಯಾನ ಸಂಸ್ಥೆಗಳಲ್ಲಿ ವಿಳಂಬ ಮತ್ತು ರದ್ದತಿಗೆ ಕಾರಣವಾಗಿವೆ. ಮಾಧ್ಯಮಗಳ ವರದಿ ಪ್ರಕಾರ, ಪ್ರಯಾಣಿಕರು ಸರಾಸರಿ 30 ನಿಮಿಷಗಳಿಗಿಂತ ಹೆಚ್ಚು ನಿರ್ಗಮನ ವಿಳಂಬವನ್ನು ಅನುಭವಿಸಿದ್ದಾರೆ.

ಈ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ದೆಹಲಿ ವಿಮಾನ ನಿಲ್ದಾಣ, ಕಳೆದ ರಾತ್ರಿ ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ, ಕೆಲವು ವಿಮಾನಗಳ ಮೇಲೆ ಪರಿಣಾಮ ಬೀರಿದೆ. ಪ್ರಯಾಣಿಕರು ತಮ್ಮ ಹಾರಾಟದ ಸ್ಥಿತಿಯನ್ನು ನಿಯಮಿತವಾಗಿ ಪರಿಶೀಲಿಸಲು ಮತ್ತು ಬದಲಾದ ಕಾಲಸ್ಥಿತಿಗೆ ವಿಮಾನಯಾನ ಸಿಬ್ಬಂದಿಯೊಂದಿಗೆ ಸಂಪರ್ಕದಲ್ಲಿರಲು ಸೂಚಿಸಲಾಗಿದೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಲೆ ಕೃತ್ಯಗಳಲ್ಲಿ ಮಕ್ಕಳ ಭಾಗವಹಿಸುವಿಕೆ ಗಂಭೀರ ಮತ್ತು ಆಘಾತಕಾರಿ!

ಭಾರೀ ಮಳೆಯಿಂದಾಗಿ ಮೋತಿ ಬಾಗ್, ಮಿಂಟೋ ರಸ್ತೆ, ದೆಹಲಿ ಕಂಟೋನ್ಮೆಂಟ್ ಮತ್ತು ದೀನ್ ದಯಾಳ್ ಉಪಾಧ್ಯಾಯ ಮಾರ್ಗ ಪ್ರದೇಶಗಳಲ್ಲಿ ನೀರು ನಿಲ್ಲುವ ಸ್ಥಿತಿ ನಿರ್ಮಾಣವಾಯಿತು. ವಿಶೇಷವಾಗಿ ಧೌಲಾ ಕುವಾನ್ ಸುತ್ತಮುತ್ತ, ಪ್ರಮುಖ ಸಂಚಾರ ದಟ್ಟಣೆ ಉಂಟಾಗಿದೆ. ನಾನಕ್‌ಪುರ ಕೆಳ ಸೇತುವೆ ತೀವ್ರವಾಗಿ ಜಲಾವೃತವಾಗಿದ್ದು, ಸಂಚಾರ ದಟ್ಟಣೆ ಸಮಸ್ಯೆ ಹೆಚ್ಚಾಗಿದೆ. ಹಲವು ಪ್ರದೇಶಗಳಲ್ಲಿ ಮರಗಳು ಧರೆಗುರುಳಿವೆ.

ಉತ್ತರಾಖಂಡ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿಯೂ ಭಾರೀ ಮಳೆಯಾಗಿದೆ. ಭಾರತ ಹವಾಮಾನ ಇಲಾಖೆ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ರೆಡ್ ಅಲರ್ಟ್ ಘೋಷಿಸಿತ್ತು. ಗುಡುಗು ಸಹಿತ ಮಳೆ ಮತ್ತು ಅತಿ ವೇಗದ ಗಾಳಿ ಬೀಸುವ ಮುನ್ಸೂಚನೆ ನೀಡಿತ್ತು.

ಪಶ್ಚಿಮ ಮತ್ತು ವಾಯುವ್ಯದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯನ್ನು ಐಎಂಡಿ ಉಲ್ಲೇಖಿಸಿದೆ. ರಾಜಧಾನಿಯ ಕೆಲವು ಭಾಗಗಳಲ್ಲಿ ತೀವ್ರವಾದ ಗುಡುಗು ಸಹಿತ ಚಟುವಟಿಕೆ, ಆಗಾಗ್ಗೆ ಮಿಂಚು ಮತ್ತು ಗಂಟೆಗೆ 40-60 ಕಿಮೀ ಅಥವಾ ಅದಕ್ಕಿಂತ ಹೆಚ್ಚಿನ ವೇಗದ ಗಾಳಿ ಬೀಸಬಹುದು ಎಂದು ಐಎಂಡಿ ಎಚ್ಚರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...