ಟಿ-ಶರ್ಟ್‌ಗಳಲ್ಲಿ ಲಾರೆನ್ಸ್ ಬಿಷ್ಣೋಯಿ, ದಾವೂದ್‌ ಚಿತ್ರ ಬಳಕೆ: ಫ್ಲಿಪ್‌ಕಾರ್ಟ್‌ ವಿರುದ್ಧ ಎಫ್‌ಐಆರ್‌ ದಾಖಲು

Date:

ಟಿ-ಶರ್ಟ್‌ಗಳಲ್ಲಿ ಭೂಗತ ಪಾತಕಿಗಳಾದ ಲಾರೆನ್ಸ್‌ ಬಿಷ್ಣೋಯಿ ಹಾಗೂ ದಾವೂದ್‌ ಇಬ್ರಾಹಿಂ ಭಾವಚಿತ್ರ ಬಳಸಿ ಮಾರಾಟ ಮಾಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇ ಕಾಮರ್ಸ್‌ ಕಂಪನಿಗಳಾದ ಫ್ಲಿಪ್‌ಕಾರ್ಟ್, ಅಲಿ ಎಕ್ಸ್‌ಪ್ರೆಸ್, ಟೀಶಾಪರ್‌ ಹಾಗೂ ಎಟ್‌ಸೇ ಕಂಪನಿಗಳ ವಿರುದ್ಧ ಮಹಾರಾಷ್ಟ್ರ ಸೈಬರ್‌ ಪೊಲೀಸ್ ಎಫ್‌ಐಆರ್‌ ದಾಖಲಿಸಿದೆ.

ಟಿ-ಶರ್ಟ್‌ಗಳಲ್ಲಿ ಬಳಸಲಾಗಿರುವ ಈ ಇಬ್ಬರು ಪಾತಕಿಗಳು ದೇಶದ ವಿವಿಧ ರಾಜ್ಯಗಳಲ್ಲಿ ಕೊಲೆ, ಭಯೋತ್ಪಾದಕ ಚಟುವಟಿಕೆ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಇಬ್ಬರು ಅಪರಾಧಿಗಳ ಭಾವಚಿತ್ರಗಳನ್ನು ಉತ್ಪನ್ನಗಳಲ್ಲಿ ಬಳಸುವುದರಿಂದ ಯುವ ಸಮೂಗದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾರಾಷ್ಟ್ರ ರಾಜ್ಯ ಸೈಬರ್‌ ಇಲಾಖೆಯ ಐಜಿಪಿ ಕಚೇರಿ ಪ್ರಕಟಣೆ ಹೊರಡಿಸಿದ್ದು,ಆಕ್ಷೇಪಾರ್ಹ ಉತ್ಪನ್ನಗಳನ್ನು ಬಳಸಿದ ಇ ಕಾಮರ್ಸ್‌ ಮಾರಾಟಗಾರ ಕಂಪನಿಗಳಾದ ಫ್ಲಿಪ್‌ಕಾರ್ಟ್‌, ಅಲಿ ಎಕ್ಸ್‌ಪ್ರೆಸ್,ಟೀಶಾಪರ್ ಹಾಗೂ ಎಟ್ಸೆ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಕ್ಫ್ ಧರಣಿಗೂ, ಬಿಜೆಪಿ ಬಂಡಾಯಕ್ಕೂ ಶೋಭಾ ನಾಯಕಿಯಾಗಿದ್ದೇಕೆ?

“ಈ ಕ್ರಮವು ಡಿಜಿಟಲ್‌ ನಿರ್ವಹಣಾ ಸುರಕ್ಷತಾ ನಿರ್ವಹಣೆಗೆ ಕಾಪಾಡಿಕೊಳ್ಳಲು ಹಾಗೂ ಸಾರ್ವಜನಿಕ ಸ್ಥಳದಲ್ಲಿ ಪ್ರಚೋದಕ ವಿಷಯಗಳನ್ನು ಅಸ್ಥಿರಗೊಳಿಸುವುದನ್ನು ತಡೆಯುವುದಕ್ಕೆ ಮಹಾರಾಷ್ಟ್ರ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ” ಎಂದು ಪೊಲೀಸ್ ಪ್ರಕಟಣೆಯಲ್ಲಿ ಹೇಳಲಾಗಿದೆ.

“ಇಂತಹ ಉತ್ಪನ್ನಗಳು ಅಪರಾಧ ವ್ಯಕ್ತಿತ್ವವುಳ್ಳವರನ್ನು ಆರಾಧಿಸಲಾಗಿದ್ದು, ಈ ರೀತಿ ಪ್ರಚಾರ ಮಾಡುವುದು ಸಮಾಜಕ್ಕೆ ಹಾನಿಕಾರಕವಾಗಿದ್ದು, ಯುವಕರ ಮನಸ್ಸುಗಳ ಮೇಲೆ ನಕಾರಾತ್ಮಕ ಪ್ರಭಾವ ಬೀರಿ ಅವರ ವ್ಯಕ್ತತ್ವವನ್ನು ಹಾಳು ಮಾಡುತ್ತದೆ. ಮಹಾರಾಷ್ಟ್ರ ಸೈಬರ್‌ ಇಲಾಖೆ ಇದನ್ನು ಹಾನಿಕಾರಕ ವಸ್ತು ಎಂದು ಪರಿಗಣಿಸಿದ್ದು, ಯುವಕರನ್ನು ತಪ್ಪುದಾರಿಗೆಳೆಯಲು ಉಡುಪುಗಳಂತಹ ಉತ್ಪನ್ನಗಳಲ್ಲಿ ಕ್ರಿಮಿನಲ್‌ ವ್ಯಕ್ತಿಗಳನ್ನು ಅನಾವರಣಗೊಳಿಸಲಾಗುತ್ತಿದೆ” ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಕಂಪನಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಅಡಿಗಳಲ್ಲಿ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಡಿಗಳಲ್ಲಿ ಎಫ್‌ಐಆರ್‌ ದಾಖಲಿಸಲಾದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

T shirt Larnce bishnoyi and dawood 2
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...