ತೆಲಂಗಾಣ, ಆಂಧ್ರಪ್ರದೇಶದಲ್ಲಿ ಪ್ರವಾಹ; 30ಕ್ಕೂ ಹೆಚ್ಚು ಜೀವ ಬಲಿ

Date:

ಕಳೆದ ಎರಡು ದಿನಗಳಿಂದ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ನಾನಾ ಜಿಲ್ಲೆಗಳಲ್ಲಿ ಪ್ರವಾಹಕ್ಕೆ ಸಿಲುಕಿದ್ದು, ಈವರೆಗೆ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಪ್ರವಾಹ ಸಂಬಂಧ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಮತ್ತು ತೆಲಂಗಾಣ ಸಿಎಂ ಎ ರೇವಂತ್ ರೆಡ್ಡಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಮಾಹಿತಿ ಪಡೆದುಕೊಂಡಿದ್ದಾರೆ. ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ 26 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ನಿಯೋಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೆಲಂಗಾಣದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ 16 ಜನರು ಪ್ರಾಣ ಕಳೆದುಕೊಂಡಿದ್ದರೆ, ಆಂಧ್ರಪ್ರದೇಶದಲ್ಲಿ 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಆಂಧ್ರ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಪ್ರವಾಹ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಪವರ್ ಬೋಟ್‌ಗಳು ಮತ್ತು ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡಗಳನ್ನು ಕಳುಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಭಾನುವಾರ ಮನವಿ ಮಾಡಿದ್ದಾರೆ.

ಎರಡೂ ರಾಜ್ಯಗಳಲ್ಲಿ ಒಟ್ಟು ಸುಮಾರು 2,76,000 ಜನರು ಪ್ರವಾಹದಿಂದ ಬಾಧಿತರಾಗಿದ್ದಾರೆ. ಉಭಯ ರಾಜ್ಯಗಳಿಗೆ ಸಂಚರಿಸುವ 140ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದೆ. ಹಲವು ರೈಲುಗಳ ಸಂಚಾರ ಮಾರ್ಗವನ್ನು ಬದಲಿಸಲಾಗಿದೆ.

ಸೋಮವಾರ ಮತ್ತು ಮುಂದಿನ ದಿನಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲು ಹೈದರಾಬಾದ್ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ತೆಲಂಗಾಣ ರಾಜ್ಯ ಸರ್ಕಾರದ ಪ್ರಕಾರ, ತೆಲಂಗಾಣದಾದ್ಯಂತ 115ಕ್ಕೂ ಹೆಚ್ಚು ಹಳ್ಳಿಗಳಿಗೆ ಹೋಗುವ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿವೆ. ಹಳ್ಳಿಗಳು ಹೊರ ಜಗತ್ತಿನೊಂದಿಗೆ ಸಂಪರ್ಕ ಕಳೆದುಕೊಂಡಿದೆ. ಖಮ್ಮಂ, ವಾರಂಗಲ್, ತಿರುಮಲಯಪಾಲೆಂ ಜಿಲ್ಲೆಗಳಲ್ಲಿ ಭಾನುವಾರ 52.2 ಸೆಂ.ಮೀ ಮಳೆಯಾಗಿದೆ.

ಖಮ್ಮಂ ಜಿಲ್ಲೆಯಲ್ಲಿ 30 ವರ್ಷಗಳ ಬಳಿಕ ಮುನ್ನೇರು ನದಿ ಸಂಪೂರ್ಣ ಉಕ್ಕಿ ಹರಿಯುತ್ತಿದೆ. ಹಲವಾರು ಜನರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದು, ಅವರ ಮನೆಗಳು ನೀರಿನಲ್ಲಿ ಮುಳುಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...