ಪತ್ನಿ ಮತ್ತು ಅತ್ತೆಯನ್ನು ವಿವಸ್ತ್ರಗೊಳಿಸಿ ಮಾಟಮಂತ್ರ; ವಿಡಿಯೋ ಹರಿಬಿಟ್ಟ ಮೂಢ ಆರೋಪಿ

Date:

ಮೂಢ, ವಿಕೃತ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಅತ್ತೆಯನ್ನು ವಿವಸ್ತ್ರಗೊಳಿಸಿ ಮಾಟಮಂತ್ರ ಮಾಡಿ, ಕೃತ್ಯದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಘಟನೆ ನವಿ ಮುಂಬೈನಲ್ಲಿ ನಡೆದಿದೆ. ತನ್ನ ಸೋದರ ಅಳಿಯನಿಗೆ ಮದುವೆಗೆ ದುಷ್ಟಶಕ್ತಿಗಳು ಅಡ್ಡಿಯಾಗಿವೆ ಎಂದು ಮೂಢನಂಬಿಕೆಗೆ ಒಳಗಾಗಿದ್ದ ವ್ಯಕ್ತಿ, ಈ ಕೃತ್ಯ ಎಸಗಿದ್ದಾನೆ ಎಂದು ವರದಿಯಾಗಿದೆ.

ಘಟನೆ ಸಂಬಂಧ ವಾಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ.

ಆರೋಪಿ ಮತ್ತು ಸಂತ್ರಸ್ತರು ಉತ್ತರ ಪ್ರದೇಶದ ದೇವ್ರಿಯಾ ಮೂಲದವರು. ಅವರೆಲ್ಲರೂ ನವಿ ಮುಂಬೈನಲ್ಲಿ ನೆಲೆಸಿದ್ದರು. ಏಪ್ರಿಲ್ 15 ರಂದು, ಆರೋಪಿಯು ತನ್ನ ಪತ್ನಿ ಮತ್ತು ಆಕೆಯ ತಾಯಿಯನ್ನು ವಿವಸ್ತ್ರಗೊಳಿಸಿ, ಕೆಲವು ಆಚರಣೆಗಳನ್ನು ನಡೆಸುವಂತೆ ಒತ್ತಾಯಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಬಳಸುವುದರಿಂದ ಉಂಟಾಗುವ ಬಿಕ್ಕಟ್ಟುಗಳೇನು ಬಲ್ಲಿರಾ?

“ಆರೋಪಿಯು ಸಂತ್ರಸ್ತೆಯರ ನಗ್ನ ಚಿತ್ರಗಳನ್ನು ತೆಗೆದುಕೊಂಡಿದ್ದು, ಅವುಗಳನ್ನು ತನ್ನ ಸಂಬಂಧಿಗಳಿಗೆ ವಾಟ್ಸ್‌ಆ್ಯಪ್‌ ಮೂಲಕ ಕಳಿಸಿದ್ದಾನೆ” ಎಂದು ಎಫ್‌ಐಆರ್‌ನಲ್ಲಿ ವಿವರಿಸಲಾಗಿದೆ.

ಪೊಲೀಸರು ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 351(2), 352 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಮಾಟಮಂತ್ರಗಳ ತಡೆಗಟ್ಟುವಿಕೆ ಮತ್ತು ನಿರ್ಮೂಲನೆ ಕಾಯ್ದೆ-2013 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...