ನಿವೃತ್ತಿ ಘೋಷಿಸಿದ ಫುಟ್‌ಬಾಲ್‌ ದಂತಕಥೆ ಸುನಿಲ್ ಛೆಟ್ರಿ

Date:

ಭಾರತದ ಫುಟ್‌ಬಾಲ್‌ ದಂತಕಥೆ ಸುನಿಲ್ ಛೆಟ್ರಿ ಅವರು ಅಂತಾರಾಷ್ಟ್ರೀಯ ಫುಟ್‌ಬಾಲ್‌ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಜೂನ್‌ 6ರಂದು ಕುವೈತ್ ವಿರುದ್ಧ ನಡೆಯಲಿರುವ ಫಿಫಾ ವಶ್ವಿಕಪ್‌ನ ಅರ್ಹತಾ ಪಂದ್ಯವು ತಮ್ಮ ಕೊನೆಯ ಪಂದ್ಯವಾಗಲಿದೆ. ಆ ಪಂದ್ಯದ ಬಳಿಕ ನಿವೃತ್ತರಾಗುವುದಾಗಿ ತಿಳಿಸಿದ್ದಾರೆ. ಆ ಮೂಲಕ ತಮ್ಮ ಅಭೂತಪೂರ್ವ ಮತ್ತು ಸಾಟಿ ಇಲಲ್ದ ಅದ್ಭುತ ವೃತ್ತಿಜೀವನಕ್ಕೆ ತೆರೆ ಎಳೆಯಲಿದ್ದಾರೆ.

39ರ ಹರೆಯದ ಛೆಟ್ರಿ ಅವರು 19 ವರ್ಷಗಳ ಕಾಲ ಭಾರತೀಯ ತಂಡಕ್ಕಾಗಿ ಆಡಿದ್ದಾರೆ. ತಂಡದ ನಾಯಕನ ಜವಬ್ದಾರಿಯನ್ನೂ ಹೊತ್ತು, ತಂಡವನ್ನು ಮುನ್ನಡೆಸಿದ್ದಾರೆ. ಛೆಟ್ರಿ 2005ರಲ್ಲಿ ಫುಟ್‌ಬಾಲ್ ಆಟಕ್ಕೆ ಪದಾರ್ಪಣೆ ಮಾಡಿದ್ದರು. ದೇಶಕ್ಕಾಗಿ ಅವರು ಒಟ್ಟು 94 ಗೋಲುಗಳನ್ನು ಗಳಿಸಿದ್ದಾರೆ. ಭಾರತದ ಸಾರ್ವಕಾಲಿಕ ಟಾಪ್ ಸ್ಕೋರರ್ ಮತ್ತು ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರನಾಗಿ ಛೆಟ್ರಿ ದಾಖಲೆ ಬರೆದಿದ್ದಾರೆ.

ಹೆಚ್ಚು ಗೋಲುಗಳನ್ನು ಗಳಿಸಿದ ಆಟಗಾರರಲ್ಲಿ ಛಟ್ರಿ ಮೂರನೇ ಸ್ಥಾನದಲ್ಲಿದ್ದಾರೆ. ಕ್ರಿಸ್ಟಿಯಾನೊ ರೊನಾಲ್ಡೊ ಮತ್ತು ಲಿಯೋನೆಲ್ ಮೆಸ್ಸಿಯ ನಂತರದ ಸ್ಥಾನದಲ್ಲಿ ಛೆಟ್ರಿ ಇದ್ದಾರೆ. ಪ್ರಸ್ತುತ ಅಂತರರಾಷ್ಟ್ರೀಯ ಗೋಲ್-ಸ್ಕೋರರ್‌ಗಳ ಸಾರ್ವಕಾಲಿಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುವೈತ್ ವಿರುದ್ಧದ ಪಂದ್ಯದ ಬಳಿಕ ನಿವೃತ್ತಿ ಪಡೆಯುವುದಾಗಿ ಘೋಷಿಸಿದ ಛೆಟ್ರಿ ಅವರ ಅಂತಿಮ ಪಂದ್ಯವು ಕೋಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ನಡೆಯಲಿದೆ. ಅವರು ಪ್ರಬಲ ಸ್ಟ್ರೈಕರ್ ಆಗಿ ಸಾಕಷ್ಟು ಫುಟ್‌ಬಾಲ್ ಪಂದ್ಯಗಳನ್ನು ಆಡಿರುವ ನಗರದಲ್ಲಿಯೇ ಅವರ ಪ್ರಯಾಣ ಕೊನೆಯಾಗಲಿದೆ. ಭಾರತವು ಪ್ರಸ್ತುತ ಎ ಗುಂಪಿನಲ್ಲಿ ನಾಲ್ಕು ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಅಗ್ರಸ್ಥಾನದಲ್ಲಿ ತಕಾರ್ ತಂಡವಿದೆ.

ಛೆಟ್ರಿ ಮಾರ್ಚ್‌ನಲ್ಲಿ ತಮ್ಮ 150ನೇ ಪಂದ್ಯವನ್ನು ಆಡಿದ್ದರು. ಗುವಾಹಟಿಯಲ್ಲಿ ನಡೆದ ಆ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಗೋಲು ಗಳಿಸಿದ್ದರು. ಆದರೆ, ಆ ಪಂದ್ಯದಲ್ಲಿ ಭಾರತ 1-2 ಅಂತರದಲ್ಲಿ ಸೋಲು ಕಂಡಿತ್ತು.

2005ರಲ್ಲಿ ಪಾಕಿಸ್ತಾನದ ವಿರುದ್ಧದ ನಡೆದ ಅಂತಾರಾಷ್ಟ್ರೀಯ ಪಂದ್ಯವು ಅವರ ಚೊಚ್ಚಲ ಪಂದ್ಯವಾಗಿತ್ತು. ಅದೇ ಪಂದ್ಯದಲ್ಲಿ ಚೊಚ್ಚಲ ಗೋಲನ್ನೂ ಅವರು ಗಳಿಸಿದ್ದರು. ಅಲ್ಲದೆ, ಆಟದ ಅತ್ಯಂತ ಬಿರುಸಿನ ಸ್ಟ್ರೈಕರ್‌ಗಳಲ್ಲಿ ಒಬ್ಬರೆಂದು ಗಮನ ಸೆಳೆದಿದ್ದರು. ಆ ಪಂದ್ಯವನ್ನು ಅವರು ತಮ್ಮ ಅತ್ಯುತ್ತಮ ಕ್ಷಣವೆಂದು ಬಣ್ಣಿಸಿದ್ದಾರೆ.

“ನಾನು ಎಂದಿಗೂ ಮರೆಯದ ಒಂದು ದಿನವಿದೆ. ಆ ದಿನವನ್ನು ಆಗಾಗ್ಗೆ ನೆನಪಿಸಿಕೊಳ್ಳುತ್ತೇನೆ. ನನ್ನ ದೇಶಕ್ಕಾಗಿ ನಾನು ಮೊದಲ ಬಾರಿಗೆ ಆಡಿದ್ದ ದಿನವದು” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...