ಅತ್ತೆ, ಗಂಡನ ಸ್ನೇಹಿತರೊಂದಿಗೆ ಲೈಂಗಿಕ ಸಂಬಂಧಕ್ಕೆ ಬಲವಂತ; ಪ್ರಕರಣ ದಾಖಲು

Date:

ತನ್ನ ಅತ್ತೆಯೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ನಿರಾಕರಿಸಿದ್ದಕ್ಕಾಗಿ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮಹಿಳೆಯೊಬ್ಬರು ದೂರು ನೀಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ತನ್ನ ತೋಳುಗಳನ್ನು ಅತ್ತೆ ಬ್ಲೇಡ್‌ನಿಂದ ಕೊಯ್ದಿದ್ದಾಳೆ ಎಂದು ಮಹಿಳೆ ಆರೋಪಿಸಿದ್ದಾರೆ. ಆಕೆಯ ದೂರಿನ ಆಧಾರದ ಮೇಲೆ ಆಕೆಯ ಪತಿ, ಅತ್ತೆ, ನಾದಿನಿ ಹಾಗೂ ಇತರ ಸಂಬಂಧಿಕರ ವಿರುದ್ಧ ಹಲ್ಲೆ, ವರದಕ್ಷಿಣೆ ಬೇಡಿಕೆ ಹಾಗೂ ವಿಶ್ವಾಸದ್ರೋಹದ ಪ್ರಕರಣ ದಾಖಲಿಸಿದ್ದಾರೆ.

ಆಗ್ರಾದ ಅಂಜಲಿ ಚತುರ್ವೇದಿ 2022ರಲ್ಲಿ ವಿವಾಹವಾಗಿದ್ದರು. ತನ್ನ ಪತಿ ಮತ್ತು ಆತನ ಕುಟುಂಬಸ್ಥರೊಂದಿಗೆ ಗಾಜಿಪುರದಲ್ಲಿ ವಾಸಿಸುತ್ತಿದ್ದರು. ಆಕೆ ಗಾಜಿಪುರಕ್ಕೆ ತೆರಳಿದ ಕೆಲವೇ ದಿನಗಳಲ್ಲಿ ಆಕೆಗೆ ಪತಿಯ ಕುಟುಂಬದವರು ಕಿರುಕುಳ ನೀಡಲು ಆರಂಭಿಸಿದ್ದರು ಎಂದು ಆರೋಪಿಸಲಾಗಿದೆ.

ಎಫ್‌ಐಆರ್ ಪ್ರಕಾರ, ದೂರುದಾರ ಮಹಿಳೆಯ ಮೇಲೆ ಆಕೆಯ ಅತ್ತೆಗೆ ಲೈಂಗಿಕ ಆಕರ್ಷಣೆ ಇತ್ತು. ಆಕೆಯನ್ನು ತನ್ನ ಕಾಮತೃಷೆಗಾಗಿ ಒತ್ತಾಯಿಸುತ್ತಿದ್ದಳು. ಕೃತ್ಯಕ್ಕೆ ದೂರುದಾರ ಮಹಿಳೆ ನಿರಾಕರಿಸಿದಾಗ ಆಕೆಯ ಮೇಲೆ ಅತ್ತೆ ಬ್ಲೇಡ್‌ನಿಂದ ಹಲ್ಲೆ ನಡೆಸಿದ್ದಾಳೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನ್ನ ಅತ್ತೆ ಎಸಗುತ್ತಿದ್ದ ಕೃತ್ಯದ ಬಗ್ಗೆ ತನ್ನ ಪತಿಯ ಬಳಿ ಹೇಳಿಕೊಂಡಿದ್ದಾರೆ. ಆದರೆ, ಆಕೆಯ ಮಾತನ್ನು ಪತಿ ನಿರಾಕರಿಸಿದ್ದಾನೆ. ಬಳಿಕ, ಆಕೆಯನ್ನು ಅತ್ತೆ ಹಿಂಸಿಸಲು ಆರಂಭಿಸಿದ್ದಳು ಎಂದು ಎಫ್‌ಐಆರ್‌ನಲ್ಲಿ ವಿವರಿಸಲಾಗಿದೆ.

ಮಹಿಳೆಗೆ ನಾನಾ ರೀತಿಯಲ್ಲಿ ಕಿರುಕುಳ ನೀಡಲು ಆರಂಭಿಸಿದ ಅತ್ತೆ, ಪದೇ ಪದೇ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದಾರೆ. ಆಕೆಯನ್ನು ನಿರಂತರವಾಗಿ ನಿಂದಿಸುವುದು, ಹಲ್ಲೆ ನಡೆಸುವುದು ಮಾಡಿದ್ದಾರೆ. ವರದಕ್ಷಿಣೆ ತರಲಾಗದಿದ್ದಾಗ, ತನ್ನ ಅತ್ತೆ, ನಾದಿನಿ ಹಾಗೂ ಪತಿ – ಆತನ ಸ್ನೇಹಿತರೊಂದಿಗೆ ಲೈಂಗಿಕ ಸಂಬಂಧ ಬೆಳೆಸುವಂತೆ ಬಲವಂತ ಮಾಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ವಿವರಿಸಿದ್ದಾರೆ.

ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...