ಕನ್ಯತ್ವ ಪರೀಕ್ಷೆ ಮಾಡಿಸಲು ಮಹಿಳೆಯನ್ನು ಒತ್ತಾಯಿಸುವುದು ಘನತೆಯ ಹಕ್ಕಿನ ಉಲ್ಲಂಘನೆ: ಛತ್ತೀಸ್‌ಗಢ ಹೈಕೋರ್ಟ್

Date:

ಮಹಿಳೆಯನ್ನು ಕನ್ಯತ್ವ ಪರೀಕ್ಷೆಗೆ ಒಳಗಾಗಲು ಒತ್ತಾಯಿಸಬಾರದು, ಅದು ಘನತೆಯ ಹಕ್ಕಿನ ಉಲ್ಲಂಘನೆಯಾಗುತ್ತದೆ. ಜೊತೆಗೆ ಜೀವನ ಮತ್ತು ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಖಾತರಿಪಡಿಸುವ ಸಂವಿಧಾನದ 21 ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಛತ್ತೀಸ್‌ಗಢ ಹೈಕೋರ್ಟ್ ಹೇಳಿದೆ.

ಕನ್ಯತ್ವ ಪರೀಕ್ಷೆಗೆ ಅನುಮತಿ ನೀಡುವುದು ಮೂಲಭೂತ ಹಕ್ಕುಗಳು, ಮಹಿಳೆಯ ಗೌಪ್ಯತೆಗೆ ವಿರುದ್ಧವಾಗಿದೆ. ‘ಮೂಲಭೂತ ಹಕ್ಕುಗಳ ಹೃದಯ’ವಾದ 21ನೇ ವಿಧಿ ಉಲ್ಲಂಘನೆಯಾಗುತ್ತದೆ ಎಂದು ಹೈಕೋರ್ಟ್ ಒತ್ತಿ ಹೇಳಿದೆ.

ಇದನ್ನು ಓದಿದ್ದೀರಾ? ಮೃತದೇಹದೊಂದಿಗೆ ಸಂಭೋಗ ಅತ್ಯಾಚಾರವಲ್ಲ: ಛತ್ತೀಸ್‌ಗಢ ಹೈಕೋರ್ಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನ್ನ ಪತ್ನಿ ಇನ್ನೊಬ್ಬ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಆಕೆಯ ಕನ್ಯತ್ವ ಪರೀಕ್ಷೆಗೆ ಒತ್ತಾಯಿಸಿ ವ್ಯಕ್ತಿಯೊಬ್ಬರು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಮಧ್ಯಂತರ ಅರ್ಜಿಯನ್ನು ಕೋರ್ಟ್ ಅಕ್ಟೋಬರ್ 15, 2024 ರಂದು ತಿರಸ್ಕರಿಸಿದೆ.

ಕೌಟುಂಬಿಕ ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಛತ್ತೀಸ್‌ಗಢ ಹೈಕೋರ್ಟ್‌ ಅರ್ಜಿ ಸಲ್ಲಿಸಲಾಗಿದೆ. ಈ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಅರವಿಂದ್ ಕುಮಾರ್ ವರ್ಮಾ ಅವರ ಪೀಠ ನಡೆಸಿದೆ.

ಪತ್ನಿ ತನ್ನ ಪತಿ ಲೈಂಗಿಕ ದೌರ್ಬಲ್ಯ ಹೊಂದಿದ್ದಾರೆ ಎಂದು ಆರೋಪಿಸಿದ್ದರು. ಆದ್ದರಿಂದ ಜೊತೆಗೆ ಜೀವಿಸಲಾಗದು ಎಂದು ಹೇಳಿದ್ದರು. ಅರ್ಜಿದಾರರು ತನ್ನ ವಿರುದ್ಧವಿರುವ ಆರೋಪಗಳು ಆಧಾರರಹಿತವೆಂದು ಸಾಬೀತುಪಡಿಸಲು ಬಯಸಿದರೆ, ಅವರು ಸಂಬಂಧಿತ ವೈದ್ಯಕೀಯ ಪರೀಕ್ಷೆಗೆ ಒಳಗಾಗಬಹುದು ಅಥವಾ ಯಾವುದೇ ಇತರ ಪುರಾವೆಗಳನ್ನು ನೀಡಬಹುದು ಎಂದು ಹೈಕೋರ್ಟ್ ಹೇಳಿದೆ.

“ಪತ್ನಿಯನ್ನು ಕನ್ಯತ್ವ ಪರೀಕ್ಷೆಗೆ ಒಳಪಡಿಸಲು ಸಾಧ್ಯವಿಲ್ಲ. ತನ್ನ ಪತ್ನಿಯ ಕನ್ಯತ್ವ ಪರೀಕ್ಷೆಗೆ ಒತ್ತಾಯಿಸುವ ಅರ್ಜಿದಾರರ ವಾದವು ಸಂವಿಧಾನಬಾಹಿರವಾಗಿದೆ. ಮಹಿಳೆಯರ ಘನತೆಯ ಹಕ್ಕನ್ನು ಒಳಗೊಂಡಿರುವ ಸಂವಿಧಾನದ 21ನೇ ವಿಧಿಯನ್ನು ಉಲ್ಲಂಘಿಸುತ್ತದೆ” ಎಂದು ಹೈಕೋರ್ಟ್ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...