ಜಮ್ಮು ಕಾಶ್ಮೀರ| ಭಯೋತ್ಪಾದಕ ದಾಳಿ; ಬಿಜೆಪಿಯ ಮಾಜಿ ಸರಪಂಚ ಹತ್ಯೆ, ಪ್ರವಾಸಿಗರಿಗೆ ಗಾಯ

Date:

ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಎರಡು ಪ್ರತ್ಯೇಕ ಭಯೋತ್ಪಾದಕ ದಾಳಿ ನಡೆದಿದ್ದು ಶೋಪಿಯಾನ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಬಿಜೆಪಿಯ ಮಾಜಿ ಸರಪಂಚ ಸಾವನ್ನಪ್ಪಿದ್ದಾರೆ. ಅನಂತನಾಗ್ ಜಿಲ್ಲೆಯಲ್ಲಿ ಜೈಪುರದ ಪ್ರವಾಸಿಗ ದಂಪತಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಶ್ಮೀರ ವಲಯ ಪೊಲೀಸರ ಪ್ರಕಾರ, ಮೃತ ಮಾಜಿ ಸರಪಂಚನನ್ನು ಐಜಾಜ್ ಅಹ್ಮದ್ ಎಂದು ಗುರುತಿಸಲಾಗಿದೆ. ಶೋಪಿಯಾನ್ ಜಿಲ್ಲೆಯ ಹೀರ್ಪೋರಾದಲ್ಲಿ ಐಜಾಜ್ ಅಹ್ಮದ್ ಶೇಖ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಶೀಘ್ರದಲ್ಲೇ ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಪ್ರಧಾನಿ ಮೋದಿ

ಪ್ರದೇಶವನ್ನು ಈಗ ಸುತ್ತುವರಿಯಲಾಗಿದೆ. ಐಜಾಜ್ ಅಹ್ಮದ್‌ರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.


ಎರಡನೇ ಘಟನೆಯಲ್ಲಿ, ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಯನ್ನಾರ್ ಪ್ರದೇಶದಲ್ಲಿ ಜೈಪುರದ ದಂಪತಿ ಗಾಯಗೊಂಡಿದ್ದಾರೆ.

“ಅನಂತ್‌ನಾಗ್‌ನ ಯನ್ನಾರ್‌ನಲ್ಲಿ ಜೈಪುರ ನಿವಾಸಿ ಫರ್ಹಾ ಎಂಬ ಮಹಿಳೆ ಮತ್ತು ಆಕೆಯ ಸಂಗಾತಿ ತಬ್ರೇಜ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಗಾಯಗೊಳಿಸಿದ್ದಾರೆ. ಗಾಯಾಳುಗಳನ್ನು ಸ್ಥಳಾಂತರಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಗಾಯಗೊಂಡ ದಂಪತಿಗಳ ಸ್ಥಿತಿ ಸ್ಥಿರವಾಗಿದೆ.

ಇದನ್ನು ಓದಿದ್ದೀರಾ?  ಜಮ್ಮು ಕಾಶ್ಮೀರ : ಲೋಕಸಭೆ ಜೊತೆಯಲ್ಲೇ ವಿಧಾನಸಭಾ ಚುನಾವಣಾ ಸಾಧ್ಯತೆ!

ಉಗ್ರರ ದಾಳಿಯನ್ನು ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಖಂಡಿಸಿದ್ದಾರೆ. “ಇಬ್ಬರು ಪ್ರವಾಸಿಗರ ಮೇಲೆ ಮತ್ತು ಮಾಜಿ ಸರಪಂಚರ ಮೇಲೆ ನಡೆದಿರುವ ದಾಳಿಯನ್ನು ಖಂಡಿಸುತ್ತೇವೆ. ಚುನಾವಣೆಯ ಸಂದರ್ಭದಲ್ಲಿ ಈ ದಾಳಿಯು ಆತಂಕಕ್ಕೆ ಕಾರಣವಾಗಿದೆ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...