ಎಸ್‌ಬಿಐ ಚುನಾವಣಾ ಬಾಂಡ್‌ಗಳ ಮಾಹಿತಿ ನೀಡುವವರೆಗೂ ಚುನಾವಣೆ ಮುಂದೂಡಿ: ಆಯೋಗಕ್ಕೆ 79 ಮಾಜಿ ಅಧಿಕಾರಿಗಳ ಪತ್ರ

Date:

ಸುಪ್ರೀಂ ಕೋರ್ಟ್ ಆದೇಶದಂತೆ ಎಸ್‌ಬಿಐ ಚುನಾವಣಾ ಬಾಂಡ್‌ಗಳನ್ನು ಬಿಡುಗಡೆ ಮಾಡುವವರೆಗೂ ಕೇಂದ್ರ ಚುನಾವಣಾ ಆಯೋಗವು ಲೋಕಸಭಾ ಚುನಾವಣಾ ದಿನಾಂಕಗಳನ್ನು ಘೋಷಿಸಬಾರದು ಎಂದು 79ಕ್ಕೂ  ಮಾಜಿ ನಾಗರಿಕ ಸೇವಾ ಅಧಿಕಾರಿಗಳು ಮುಕ್ತ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಲೋಕಸಭಾ ಚುನಾವಣೆಗೂ ಮುನ್ನ ಮಾಹಿತಿಯನ್ನು ನೀಡಲು ಸಾಧ್ಯವಿಲ್ಲ ಎಂಬ ಎಸ್‌ಬಿಐನ ವಾದವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಮಾಜಿ ಅಧಿಕಾರಿಗಳು ತಿಳಿಸಿದ್ದಾರೆ.

“ಬಾಂಡ್‌ಗಳ ಮೂಲಕ ಕೊಟ್ಟು ತೆಗೆದುಕೊಂಡಿರುವುದು ಹಾಗೂ ಕೆಲವು ಕಾರ್ಪೊರೇಟ್ ಸಂಸ್ಥೆಗಳು ದಾಳಿಯನ್ನು ತಡೆಯುವ ಸಲುವಾಗಿ ಕೊಡುಗೆಯನ್ನು ನೀಡಿರುವ ಸಂಶಯಸ್ಪದ ವ್ಯವಹಾರಗಳಿಂದ ಮರೆ ಮಾಚಲು ಹಾಗೂ ಸರ್ಕಾರ ಟೀಕೆಗಳಿಂದ ರಕ್ಷಣೆ ಪಡೆಯಲು ಪ್ರಯತ್ನಿಸುತ್ತಿದೆ” ಎಂದು ಅಧಿಕಾರಿಗಳು ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಹಾಗೂ ಚುನಾವಣಾ ಆಯುಕ್ತ ಅರುಣ್ ಗೋಯಲ್‌ ಅವರಿಗೆ ಸಾಂವಿಧಾನಿಕ ನಡವಳಿಕೆ ಗುಂಪಿನ ಹೆಸರಿನ 79 ಮಾಜಿ ಅಧಿಕಾರಿಗಳ ಗುಂಪು ಬಹಿರಂಗ ಪತ್ರ ಬರೆದಿದ್ದಾರೆ.

“ಎಸ್‌ಬಿಐ ಈ ಮಾಹಿತಿಯನ್ನು ಬಿಡುಗಡೆ ಮಾಡುವವರೆಗೂ 2014ರ ಲೋಕಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗವು ಘೋಷಣೆ ಮಾಡಬಾರದು. ಒಂದು ವೇಳೆ ಆಯೋಗವು ತಟಸ್ಥ ನೀತಿ ಅನುಸರಿಸಿದರೆ ಭಾರತೀಯ ಮತದಾರರ ಮಾಹಿತಿ ಹಕ್ಕಿಗೆ ಗೌರವ ನೀಡುವ ಸಾಂವಿಧಾನಿಕ ನಿಯಮ ಅಳಿದು ಹೋಗುತ್ತದೆ ಹಾಗೂ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಯನ್ನು ನಡೆಸುವುದು ಸಾಧ್ಯವಾಗುವುದಿಲ್ಲ. ಇದರಿಂದ ಭಾರತದಲ್ಲಿ ಪ್ರಜಾಸತ್ತಾತ್ಮಕತೆಗೆ ಮರಣದ ಪೆಟ್ಟಾಗುತ್ತದೆ ಎಂದು ನಮಗೆ ತಿಳಿದಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಬಾಂಡ್ ಬಹಿರಂಗಗೊಳಿಸಲು ಎಸ್‌ಬಿಐ ಏಕೆ ಹಿಂಜರಿಯುತ್ತಿದೆ?

ಮುಕ್ತ ಪತ್ರ ಬರೆದು ಸಹಿ ಹಾಕಿದವರಲ್ಲಿ ಶಿವಶಂಕರ್‌ ಮೆನನ್, ಜಿ ಕೆ ಪಿಳ್ಳೈ, ಮೀರನ್ ಸಿ ಬೋರ್ವಾಂಕರ್, ವಜಾಹತ್ ಹಿಬಿಬುಲ್ಲಾ, ಕೆ ಪಿ ಫೈಬನ್, ಜುಲಿಯೊ ರಿಬಾರಿಯೊ ಹಾಗೂ ಕೆ ಸುಜಾತಾ ರಾವ್ ಒಳಗೊಂಡ ಅಧಿಕಾರಿಗಳು ಸೇರಿದ್ದಾರೆ.

ಪ್ರಸ್ತುತ ಲೋಕಸಭಾ ಅವಧಿಯು ಜೂನ್‌ 16 ಕ್ಕೆ ಕೊನೆಗೊಳ್ಳಲಿದ್ದು, ಚುನಾವಣೆ ಪ್ರಕ್ರಿಯೆ ಕೂಡ ಕೊನೆಗೊಳ್ಳಬೇಕಿದೆ.ಆಯೋಗವು ಮಾರ್ಚ್‌ 27ರೊಳಗೆ ಅಥವಾ ಮುಂಚೆ ವೇಳಾಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

“ಎಸ್‌ಬಿಐ ಚುನಾವಣಾ ಘೋಷಣೆಗೂ ಮುನ್ನ ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಒದಗಿಸಬೇಕು. ಚುನಾವಣಾ ಆಯೋಗವು ಸಂವಿಧಾನದ 324ನೇ ವಿಧಿಯಡಿಯ ಅಧಿಕಾರ ಬಳಸಿಕೊಂಡು ತಮ್ಮ ಘನತೆಯನ್ನು ಮರಳಿ ಪಡೆಯುವ ಸದಾವಕಾಶ ಇದಾಗಿದೆ” ಎಂದು ತಿಳಿಸಲಾಗಿದೆ.

“48 ಕೋಟಿ ಖಾತೆದಾರರೊಂದಿಗೆ ಉನ್ನತ ಮಟ್ಟದ ಡಿಜಿಟಲೀಕರಣ ಹೊಂದಿರುವ ಭಾರತದ ಅತ್ಯಂತ ದೊಡ್ಡ ಬ್ಯಾಂಕ್ ದಾಖಲೆಗಳನ್ನು ಹಸ್ತಚಾಲಿತವಾಗಿ ಇರಿಸಲಾಗಿದೆ ಹಾಗೂ ಮಾಹಿತಿ ಬಿಡುಗಡೆ ಮಾಡಲು ಜೂನ್‌ 30ರ ವರೆಗೂ ವಿಸ್ತರಣೆ ಸಮಯ ಕೇಳಿರುವುದು ದುಃಖದಾಯಕವಾಗಿದೆ” ಎಂದು ಮಾಜಿ ಅಧಿಕಾರಿಗಳು ಹೇಳಿದ್ದಾರೆ.

ಕೋರ್ಟ್‌ಗೆ ಮಾಹಿತಿ ನೀಡಲು ಹತ್ತು ನಿಮಿಷಗಳಿಗಿಂತ ಹೆಚ್ಚು ಅವಧಿ ಬೇಕಾಗಿಲ್ಲ ಎಂದು ಮಾಜಿ ಹಣಕಾಸು ಕಾರ್ಯ ಸುಭಾಷ್ ಚಂದ್ರ ಗಾರ್ಗ್ ಅವರ ಹೇಳಿಕೆಗಳನ್ನು ಅಧಿಕಾರಿಗಳು ಇಲ್ಲಿ ಉಲ್ಲೇಖಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...