ನೇಪಾಳ | ಸುಶೀಲಾ ಕರ್ಕಿ ಮಧ್ಯಂತರ ಪ್ರಧಾನಿಯಾಗಿ ಇಂದು ರಾತ್ರಿ ಪದಗ್ರಹಣ

Date:

ನೇಪಾಳದ ಯುವಕರ ನೇತೃತ್ವದ ಜನರೇಷನ್ ಝೆಡ್‌ ಪ್ರತಿಭಟನೆಗಳು ದೇಶದ ರಾಜಕೀಯವನ್ನು ಬದಲಾಯಿಸಿದ್ದು, ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕಾರ್ಕಿ ಇಂದು ರಾತ್ರಿ ಮಧ್ಯಂತರ ಪ್ರಧಾನಿಯಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ರಾಷ್ಟ್ರಪತಿ ರಾಮ್ ಚಂದ್ರ ಪೌಡೆಲ್ ಅವರ ಅಧಿಕೃತ ನಿವಾಸದಲ್ಲಿ ರಾತ್ರಿ 8.45ಕ್ಕೆ ಈ ಅಧಿಕಾರ ಗ್ರಹಣ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಇದು ನೇಪಾಳದ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳೆಯೊಬ್ಬರು ಪ್ರಧಾನಿಯಾಗಲಿದ್ದಾರೆ.

ನಾಲ್ಕು ದಿನಗಳ ಹಿಂದಷ್ಟೇ, ಪ್ರಧಾನಿ ಕೆ ಪಿ ಶರ್ಮಾ ಓಲಿ ಅವರು ಭ್ರಷ್ಟಾಚಾರ ವಿರುದ್ಧದ ದೊಡ್ಡ ಪ್ರತಿಭಟನೆಯಿಂದಾಗಿ ರಾಜೀನಾಮೆ ನೀಡಿದ್ದರು. ಸಾಮಾಜಿಕ ಮಾಧ್ಯಮ ನಿಷೇಧದಿಂದ ಆರಂಭವಾದ ಈ ಪ್ರತಿಭಟನೆಗಳು ದೇಶದಲ್ಲಿ ದೊಡ್ಡ ಹಿಂಸಾಚಾರಗಳಾಗಿ ಬದಲಾದವು. ಒಂದು ವಾರದಲ್ಲಿ 51 ಜನರು ಮೃತಪಟ್ಟು, 1,300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಸಾಮಾಜಿಕ ಮಾಧ್ಯಮ ನಿಷೇಧವನ್ನು ರದ್ದುಗೊಳಿದರೂ, ಓಲಿ ಅವರ ರಾಜೀನಾಮೆಯ ನಂತರ ಮಾತ್ರ ಹೋರಾಟದ ಕಿಚ್ಚು ಒಂದಿಷ್ಟು ಕಡಿಮೆಯಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಧರ್ಮಸ್ಥಳ, ದಸರಾ, ಗಣೇಶ ಮತ್ತು ಅಶೋಕ್ ಮೋಚಿ

ನೇಪಾಳದ ಜೆನ್ ಜೆಡ್‌ ಗುಂಪು ಸುಶೀಲಾ ಕಾರ್ಕಿ ಅವರ ನಾಯಕತ್ವವನ್ನು ಸ್ವೀಕರಿಸುವುದಾಗಿ ಘೋಷಿಸಿದೆ. “ನಾವು ಸಂವಿಧಾನವನ್ನು ಬದಲಾಯಿಸುವ ಉದ್ದೇಶವಿಲ್ಲ” ಎಂದು ಜೆನ್ ಝೆಡ್‌ ನಾಯಕ ಸುದನ್ ಗುರುಂಗ್ ಹೇಳಿದ್ದಾರೆ.

73 ವರ್ಷದ ಕಾರ್ಕಿ ಅವರು ನೇಪಾಳದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿದ್ದು, 2016ರಲ್ಲಿ ಈ ಹುದ್ದೆಯನ್ನು ಅಲಂಕರಿಸಿದ್ದರು. ಭ್ರಷ್ಟಾಚಾರ ವಿರುದ್ಧದ ಅವರ ನಿಲುವು ಮತ್ತು ನಿಷ್ಕಲಂಕ ವ್ಯಕ್ತತ್ವದಿಂದ ಅವರನ್ನು ಪ್ರಧಾನಿ ಹುದ್ದೆಗೆ ಆಯ್ಕೆ ಮಾಡಲಾಗಿದೆ. ಈ ಮಧ್ಯಂತರ ಸರ್ಕಾರದ ಅವಧಿ 6 ತಿಂಗಳುಗಳ ಕಾಲ ಇರಲಿದೆ. ಈ ಅವಧಿಯಲ್ಲಿ ಚುನಾವಣೆಗಳು ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...