ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ ಆಸ್ಪತ್ರೆಗೆ ದಾಖಲು: ಬದಲಿ ಸೊಂಟದ ಶಸ್ತ್ರಚಿಕಿತ್ಸೆಗೆ ವೈದ್ಯರ ಶಿಫಾರಸ್ಸು

Date:

ಸ್ನಾನದ ಕೋಣೆಯಲ್ಲಿ ಬಿದ್ದು ಸೊಂಟಕ್ಕೆ ತೀವ್ರ ಪೆಟ್ಟು ಮಾಡಿಕೊಂಡಿರುವ ತೆಲಂಗಾಣ ಮಾಜಿ ಸಿಎಂ ಕೆ ಚಂದ್ರಶೇಖರ್ ರಾವ್ ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದ್ದು, ಗುಣಮುಖರಾಗಲು 6 ರಿಂದ 8 ವಾರಗಳ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಗುರುವಾರ ಮಧ್ಯರಾತ್ರಿ ತಮ್ಮ ನಿವಾಸದ ಸ್ನಾನದ ಕೋಣೆಯಲ್ಲಿ ಬಿದ್ದು ಸೊಂಟಕ್ಕೆ ತೀವ್ರ ಪೆಟ್ಟು ಮಾಡಿಕೊಂಡಿದ್ದರು. ಗಾಯಗೊಂಡ ಅವರನ್ನು ಹೈದರಾಬಾದ್‌ನ ಸೋಮಾಜಿಗುಡದ ಯಶೋದಾ ಆಸ್ಪತ್ರೆಗೆ ದಾಖಲಿಸಲಾಗಿದೆ.

“ಸಿಟಿ ಸ್ಕ್ಯಾನ್‌ಗಳನ್ನು ಒಳಗೊಂಡ ಮೌಲ್ಯಮಾಪನದಲ್ಲಿ, ಅವರು ಸೊಂಟದ ಮುರಿತವಾಗಿರುವುದು ಕಂಡುಬಂದಿದೆ [ಎಲುಬು ಮುರಿತ]. ಅವರಿಗೆ ಬದಲಿ ಎಡ ಸೊಂಟದ ಅಗತ್ಯವಿರುತ್ತದೆ ಮತ್ತು ಅಂತಹ ಪ್ರಕರಣಗಳಿಗೆ ಸಾಮಾನ್ಯ ಚೇತರಿಕೆಯ ಚಿಕಿತ್ಸೆ ಆರರಿಂದ ಎಂಟು ವಾರಗಳವರೆಗೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ” ಎಂದು ಆಸ್ಪತ್ರೆಯ ಆಡಳಿತ ಮಂಡಳಿ ನೀಡಿರುವ ಆರೋಗ್ಯ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂಚೆ- ಪಾರ್ಸೆಲುಗಳ ತೆರೆಯುವ ನಿರಂಕುಶ ಅಧಿಕಾರ ಅಪಾಯಕರ

ಆರ್ಥೋಪೆಡಿಕ್, ಅರಿವಳಿಕೆ, ಜನರಲ್ ಮೆಡಿಸಿನ್ ಮತ್ತು ನೋವು ಔಷಧಿ ಸೇರಿದಂತೆ ವೈದ್ಯಕೀಯ ತಂಡವು ಅವರನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ.

ಇತ್ತೀಚಿಗೆ ನಡೆದ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್‌ಎಸ್ ಪಕ್ಷ 39 ಸ್ಥಾನಗಳನ್ನು ಪಡೆಯುವುದರ ಮೂಲಕ ಚುನಾವಣೆಯಲ್ಲಿ ಸೋಲು ಅನುಭವಿಸಿತು. 64 ಕ್ಷೇತ್ರಗಳನ್ನು ಗೆದ್ದ ಕಾಂಗ್ರೆಸ್‌ನಿಂದ ರೇವಂತ್‌ ರೆಡ್ಡಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...