ದೆಹಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿಜೆಪಿಗೆ ಸೇರ್ಪಡೆ

Date:

ದೆಹಲಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಅರ್ವಿಂದರ್‌ ಸಿಂಗ್‌ ಲವ್ಲಿ ಅವರು ಇಂದು ಕೆಲವು ನಾಯಕರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು. ಕೇಸರಿ ಪಕ್ಷಕ್ಕೆ ಸೇರ್ಪಡೆಯಾದವರಲ್ಲಿ ಮಾಜಿ ಸಚಿವ ರಾಜ್‌ ಕುಮಾರ್‌ ಚೌಹಾಣ್‌ ಹಾಗೂ ಮಾಜಿ ಶಾಸಕರಾದ ನೀರಜ್‌ ಬಸೋಯಾ ಹಾಗೂ ನಸೀಬ್‌ ಸಿಂಗ್‌ ಕೂಡ ಸೇರಿದ್ದಾರೆ.

ದೆಹಲಿ ಲೋಕಸಭಾ ಚುನಾವಣೆಯಲ್ಲಿ ಎಎಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವುದನ್ನು ಖಂಡಿಸಿದ ಈ ನಾಯಕರು ಕೇಂದ್ರ ಸಚಿವ ಹರ್‌ದೀಪ್‌ ಸಿಂಗ್‌ ಪೂರಿ ಹಾಗೂ ಪ್ರಧಾನ ಕಾರ್ಯದರ್ಶಿ ವಿನೋದ್‌ ತಾವ್ಡೆ ಉಪಸ್ಥಿತಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಕಮಲ ಪಕ್ಷವನ್ನು ಹೊಗಳಿದ ಅರ್ವಿಂದರ್‌ ಸಿಂಗ್‌ ಲವ್ಲಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅತೀ ಹೆಚ್ಚು ಬಹುಮತದಿಂದ ಪುನಃ ಅಧಿಕಾರಕ್ಕೆ ಬರುತ್ತಾರೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಯನ್ನಾಗಿಸಿದ ಹಾಸನಕ್ಕೆ ಗೌಡರು ಕೊಟ್ಟ ಉಜ್ವಲ ಕೊಡುಗೆ ಈ ಪ್ರಜ್ವಲ

ಎಎಪಿಯೊಂದಿಗಿನ ಮೈತ್ರಿಯನ್ನು ವಿರೋಧಿಸಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಷ್ಟ್ರ ರಾಜಧಾನಿಯಲ್ಲಿ ಕನ್ಹಯ್ಯ ಕುಮಾರ್‌ ಹಾಗೂ ಉದಿತ್‌ ರಾಜ್‌ ಅವರಿಗೆ ಟಿಕೆಟ್‌ ನೀಡಿರುವುದನ್ನು ವಿರೋಧಿಸಿ ಪಕ್ಷದಿಂದ ಹೊರಬಂದಿದ್ದರು.

ಅರ್ವಿಂದರ್‌ ಸಿಂಗ್‌ ಲವ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವುದು ಇದು ಎರಡನೇ ಬಾರಿಯಾಗಿದೆ. 2017ಕ್ಕೂ ಮುನ್ನ ಕೆಲ ಕಾಲ ಬಿಜೆಪಿಯಲ್ಲಿದ್ದ ಲವ್ಲಿ 2018ರಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...