ಕಾಂಗ್ರೆಸ್ ತೊರೆದ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್

Date:

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಕಾಂಗ್ರೆಸ್ ತೊರೆದಿದ್ದು, ಇಂದು ಸ್ಪೀಕರ್ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಮಹಾರಾಷ್ಟ್ರದ ಕಾಂಗ್ರೆಸ್‌ ನಾಯಕರಾದ ಬಾಬಾ ಸಿದ್ದಿಕಿ ಹಾಗೂ ಮಿಲಿಂದ್‌ ದಿಯೋರಾ ಅವರು ಪಕ್ಷ ತೊರೆದ ನಂತರ 65 ವರ್ಷದ ಹಿರಿಯ ನಾಯಕ ಕೂಡ ಪಕ್ಷ ತೊರೆದಿದ್ದಾರೆ.

ಇದೇ ಬೆಳವಣಿಗೆ ಹಿನ್ನೆಲೆ ಭಾನುವಾರದಂದು (ಫೆ.12) ಮಹಾರಾಷ್ಟ್ರದ ಕಾಂಗ್ರೆಸ್ ಉಸ್ತುವಾರಿ ರಮೇಶ್ ಚೆನ್ನಿತಾಲಾ ಅವರು ಚವಾಣ್ ಅವರೊಂದಿಗೆ ಚರ್ಚಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಊಹಾಪೋಹಗಳ ನಡುವೆ ಚವಾಣ್ ಮುಂದಿನ ನಡೆಗಳು ಏನು ಎಂಬುದರ ಬಗ್ಗೆ ಬಿಜೆಪಿ ನಾಯಕ ಹಾಗೂ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಕಾದು ನೋಡುವ ತಂತ್ರ ಅನುಸರಿಸುವುದಾಗಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಚುನಾವಣಾ ಬಾಂಡ್ ಮತ್ತು ಕಾರ್ಪೊರೇಟ್ ಕಪ್ಪು ಹಣ

“ಮಾಧ್ಯಮಗಳಿಂದ ಈ ಬಗ್ಗೆ ತಿಳಿದುಕೊಂಡೆ. ಕಾಂಗ್ರೆಸ್‌ನ ಹಲವು ಒಳ್ಳೆಯ ನಾಯಕರು ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ. ಜನಸಾಮಾನ್ಯರೊಂದಿಗೆ ಸಂಪರ್ಕ ಹೊಂದಿರುವ ಈ ನಾಯಕರಿಗೆ ಕಾಂಗ್ರೆಸ್‌ನಲ್ಲಿ ಉಸಿರುಕಟ್ಟುವ ವಾತಾವರಣವಿದೆ. ದೊಡ್ಡ ಮುಖಗಳು ಬಿಜೆಪಿ ಸೇರುವ ಬಗ್ಗೆ ನನಗೆ ಆತ್ಮವಿಶ್ವಾಸವಿದೆ. ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡೋಣ” ಎಂದು ದೇವೇಂದ್ರ ಫಡ್ನವಿಸ್ ಹೇಳಿದರು.

ಚವಾಣ್‌ ಅವರು 2008 ಡಿಸೆಂಬರ್‌ನಿಂದ 2010ರ ನವೆಂಬರ್‌ವರೆಗೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದರು. ಇವರು ಮಹಾರಾಷ್ಟ್ರ ಕಾಂಗ್ರೆಸ್‌ನ ಅತೀ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದರು ಎಂದು ಪರಿಗಣಿಸಲಾಗಿತ್ತು. ಇವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶಂಕರ್‌ರಾವ್ ಚವಾಣ್ ಅವರ ಪುತ್ರ. ಮುಖ್ಯಮಂತ್ರಿ ಅಲ್ಲದೆ ಮಹಾರಾಷ್ಟ್ರ ಕಾಂಗ್ರೆಸ್‌ನಲ್ಲಿ ಹಲವು ಹುದ್ದೆಗಳನ್ನು ನಿಭಾಯಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...