ದೇಶ ಸಂಭ್ರಮದಲ್ಲಿದೆ, ಮತಾಂಧರಿಂದ ಮಾತ್ರ ವಿರೋಧ: ಸುಬ್ರಮಣಿಯನ್ ಸ್ವಾಮಿ

Date:

ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳದೆ ಆಹ್ವಾನ ತಿರಸ್ಕರಿಸಿರುವ ವಿಪಕ್ಷಗಳ ನಡೆಗೆ ರಾಜ್ಯಸಭೆಯ ಮಾಜಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟೀಕಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ವಿಪಕ್ಷದವರಿಗೆ ಅಸೂಯೆ ಉಂಟಾಗಿದೆ. ರಾಮ ಮಂದಿರ ನಿರ್ಮಾಣವಾಗುತ್ತದೆಂದು ಅವರು ಎಂದಿಗೂ ಭಾವಿಸಿರಲಿಲ್ಲ. ಮಂದಿರ ನಿರ್ಮಾಣವಾಗುತ್ತಿರುವುದಕ್ಕೆ ಇಡೀ ದೇಶ ಸಂಭ್ರಮದಲ್ಲಿದೆ. ವಿಪಕ್ಷದವರು ಕಷ್ಟದ ಸ್ಥಿತಿಯಲ್ಲಿದ್ದಾರೆ. ಮಂದಿರ ನಿರ್ಮಾಣಕ್ಕೆ ಅಲ್ಪಸಂಖ್ಯಾತರಾದ ಕ್ರಿಶ್ಚಿಯನ್ನರು ಸೇರಿದಂತೆ ದೇಶದ ಶೇ.82 ಹಿಂದೂಗಳು ಪ್ರತಿಭಟಿಸಲಿಲ್ಲ. ಪಾರ್ಸಿಗಳು, ಯಹೂದಿಗಳೆಲ್ಲರೂ ಬೆಂಬಲಿಸಿದ್ದಾರೆ ಎಂದರು.

ಮುಸ್ಲಿಂ ಸಮುದಾಯದಲ್ಲಿಯೂ ಕೂಡ ಬಹತೇಕರು ನಾವು ಭಾರತದಲ್ಲಿ ವಾಸಿಸಲು ಆಯ್ಕೆ ಮಾಡಿಕೊಂಡಿದ್ದೇವೆ ಎಂದು ಹೇಳುತ್ತಾರೆ. ಆದ್ದರಿಂದ ನಾವು ಇದಕ್ಕೆ ಅವಕಾಶ ಕಲ್ಪಿಸಬೇಕು. ಹೊರಗಿನಿಂದ ಹಣ ಪಡೆಯುತ್ತಿರುವ ಮತಾಂಧರು ಮಾತ್ರ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಸುಬ್ರಮಣಿಯನ್ ಸ್ವಾಮಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾಲ್ದೀವ್ಸ್  ಮೋದಿ ನಿಂದನೆ ಖಂಡನೀಯ; ನಮ್ಮ ನಡವಳಿಕೆ ಶೋಚನೀಯ

ಭಾರತದ ಪ್ರಮುಖ ಸ್ವಾಮೀಜಿಗಳಾದ ಶಂಕರಾಚಾರ್ಯರು, ಒರಿಸ್ಸಾದ ಗೋವರ್ಧನ ಮಠದ ಸ್ವಾಮಿ ನಿಶ್ಚಲಾನಂದ ಸರಸ್ವತಿ ಮತ್ತು ಉತ್ತರಾಖಂಡದ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಅಯೋಧ್ಯೆಯ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಲು ನಿರಾಕರಿಸಿರುವುದನ್ನು ಸುಬ್ರಮಣಿಯನ್ ಸ್ವಾಮಿ ತಮ್ಮ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಶಂಕರಾಚಾರ್ಯರು ತಮ್ಮ ರಾಮ ಮಂದಿರಕ್ಕೆ ಆಹ್ವಾನದಿಂದ ಹೊರಗುಳಿಯಲು ಧಾರ್ಮಿಕ ಗ್ರಂಥಗಳನ್ನು ಉಲ್ಲೇಖಿಸಿದ್ದಾರೆ. ಅಪೂರ್ಣ ದೇವಾಲಯದಲ್ಲಿ ಪ್ರಾಣ ಪ್ರತಿಷ್ಠಾಪನಾ ಪೂಜೆಯನ್ನು ಮಾಡುವುದನ್ನು ಪ್ರಾಚೀನ ಗ್ರಂಥಗಳು ಅನುಮೋದಿಸುವುದಿಲ್ಲ ಎಂದು ತಿಳಿಸಿರುವುದನ್ನು ರಾಜ್ಯಸಭೆಯ ಮಾಜಿ ಸದಸ್ಯ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...