ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸೋಮವಾರ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಜನವರಿ 10 ರಂದು ಶೌಚಾಲಯಕ್ಕೆ ಹೋದಾಗ ಎರಡು ಬಾರಿ ಪ್ರಜ್ಞಾಹೀನರಾಗಿದ್ದರು ಎಂದು ತಿಳಿದು ಬಂದಿದೆ.
74 ವರ್ಷದ ಧನಕರ್ ಅವರನ್ನು ‘ಎಂಆರ್‌ಐ’ ಸ್ಕ್ಯಾನ್ ಗೆ ಒಳಪಡಿಸಲಾಗುವುದು. ಮಂಗಳವಾರ ಇತರ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
ಕಳೆದ ವರ್ಷ ಜುಲೈ 21ರಂದು ಜಗದೀಪ್ ಧನಕರ್ ಅವರು ಆರೋಗ್ಯ ಕಾರಣ ನೀಡಿ ಉಪರಾಷ್ಟ್ರಪತಿ ಸ್ಥಾನಕ್ಕೆ ಧಿಡೀರನೆ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆ ರಾಜಕೀಯವಾಗಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.





