ರಾಜಸ್ಥಾನ | ಮಣ್ಣು ಕುಸಿತ: ನಾಲ್ವರು ಕಾರ್ಮಿಕರ ಸಾವು, ಐವರು ಸಿಲುಕಿರುವ ಶಂಕೆ

Date:

ಪೈಪ್‌ಲೈನ್ ಅಗೆಯುವ ಕೆಲಸದ ಸಮಯದಲ್ಲಿ ಮಣ್ಣು ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಭರತ್‌ಪುರದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಇತರ ಐವರು ಮಣ್ಣಿನಡಿ ಸಿಲುಕಿರುವ ಶಂಕೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಂಗಿ ಕಾ ನಾಗ್ಲಾ ಗ್ರಾಮದ ಬಳಿ ಪೈಪ್‌ಲೈನ್ ಹಾಕಲು ಅಗೆದ 10 ಅಡಿ ಆಳದ ಕಂದಕವನ್ನು ಕಾರ್ಮಿಕರು ಮಣ್ಣಿನಿಂದ ತುಂಬುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಆರಂಭದಲ್ಲಿ ಹನ್ನೆರಡು ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಆರಂಭದಲ್ಲಿ ಇತರ ಕಾರ್ಮಿಕರು ಮತ್ತು ಯೋಜನಾ ಸಿಬ್ಬಂದಿ ರಕ್ಷಣಾ ಪ್ರಯತ್ನಗಳನ್ನು ನಡೆಸಿದರು.

ಇದನ್ನು ಓದಿದ್ದೀರಾ? ಗುಜರಾತ್ | ವಿಷಕಾರಿ ಅನಿಲ ಸೇವನೆ; ನಾಲ್ವರು ಕಾರ್ಮಿಕರ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಮಣ್ಣಿನ ಆಳದಿಂದಾಗಿ ರಕ್ಷಣೆ ಕಷ್ಟವಾದಾಗ ಜಿಲ್ಲಾಡಳಿತ, ಪೊಲೀಸ್ ಮತ್ತು ವಿಪತ್ತು ನಿರ್ವಹಣಾ ತಂಡಗಳು ಕೂಡಲೇ ಸ್ಥಳಕ್ಕೆ ಧಾವಿಸಿತು ಎಂದು ವರದಿಯಾಗಿದೆ. ರಕ್ಷಣಾ ತಂಡಗಳು ಮಣ್ಣು ತೆಗೆಯುವ ಯಂತ್ರಗಳನ್ನು ಬಳಸಿ ಮಣ್ಣನ್ನು ತೆಗೆದು ಸಿಲುಕಿದ್ದ ಕಾರ್ಮಿಕರನ್ನು ಹೊರತೆಗೆದಿದ್ದಾರೆ.

ಆರು ಕಾರ್ಮಿಕರನ್ನು ಮಣ್ಣಿನಿಂದ ಹೊರತೆಗೆಯಲಾಗಿದ್ದು ಈ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಐವರು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...