ಮುಂಬೈನಲ್ಲಿ ಭೀಕರ ಅಪಘಾತ | ಮೃತರ ಸಂಖ್ಯೆ 6ಕ್ಕೆ ಏರಿಕೆ, 29 ಮಂದಿಗೆ ಗಾಯ

Date:

ಮುಂಬೈನ ಕುರ್ಲಾ ರೈಲು ನಿಲ್ದಾಣದ ಬಳಿ ಸೋಮವಾರ ರಾತ್ರಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. 29 ಮಂದಿ ಗಾಯಗೊಂಡಿದ್ದಾರೆ.

ಜನದಟ್ಟಣೆಯ ಮಾರುಕಟ್ಟೆಯ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬೆಸ್ಟ್ ಬಸ್ ಫುಟ್‌ಪಾತ್‌ಗೆ ನುಗ್ಗಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಮೇಲ್ನೋಟಕ್ಕೆ ಬಸ್ ಬ್ರೇಕ್ ಫೇಲ್ ಆಗಿ ಈ ದುರ್ಘಟನೆ ಸಂಭವಿಸಿರಬಹುದು ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಮುಂಬೈ ಪೊಲೀಸ್ ಸೋಗಿನಲ್ಲಿ ಪೊಲೀಸ್‌ಗೆ ಕರೆ ಮಾಡಿ ಸಿಕ್ಕಿಬಿದ್ದ ವಂಚಕ; ವಿಡಿಯೋ ವೈರಲ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತರನ್ನು ಶಿವಂ ಕಶಪ್ (18), ಕಾನಿಸ್ ಫಾತಿಮಾ ಗುಲಾಮ್ ಕಾಜಿ (55) ಮತ್ತು ಅಫೀಲ್ ಅಬ್ದುಲ್ ಸಲೀಮ್ ಶಾ (19) ಎಂದು ಗುರುತಿಸಲಾಗಿದೆ. ನಾಲ್ಕನೇ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಇನ್ನು ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುರ್ಲಾ ವೆಸ್ಟ್‌ನ ಎಸ್‌ಜಿ ಬರ್ವೆ ಮಾರ್ಗದಲ್ಲಿರುವ ಅಂಜುಮನ್-ಎ-ಇಸ್ಲಾಂ ಶಾಲೆಯ ಎದುರು ರಾತ್ರಿ 9.50ರ ಸುಮಾರಿಗೆ ಈ ಘಟನೆ ನಡೆದಿದೆ. ಎಲೆಕ್ಟ್ರಿಕ್ ಬಸ್ ಕುರ್ಲಾ ಮತ್ತು ಅಂಧೇರಿ ನಿಲ್ದಾಣಗಳ ನಡುವೆ ಮಾರ್ಗ ಸಂಖ್ಯೆ 332ರಲ್ಲಿ ಸಂಚರಿಸುತ್ತಿತ್ತು.

ಬಸ್ ಚಾಲಕ ಪರಾರಿಯಾಗಲು ಯತ್ನಿಸಿದ್ದು, ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಚಾಲಕ ಸಂಜಯ್ ಮೋರೆ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಸತ್ಯನಾರಾಯಣ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...