ಜೈಪುರ – ಮುಂಬೈ ರೈಲಿನಲ್ಲಿ ಗುಂಡು ಹಾರಿಸಿ ನಾಲ್ವರನ್ನು ಕೊಂದ ಆರ್‌ಪಿಎಫ್‌ ಸಿಬ್ಬಂದಿ

Date:

ಮಹಾರಾಷ್ಟ್ರದ ಪಾಲ್ಘರ್ ರೈಲ್ವೆ ನಿಲ್ದಾಣದ ಬಳಿ ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್‌) ಸಿಬ್ಬಂದಿ ಸೋಮವಾರ ಬೆಳಗ್ಗೆ ರೈಲಿನಲ್ಲಿದ್ದ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ನಾಲ್ವರನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜೈಪುರ – ಮುಂಬೈ ರೈಲಿನ (12956) ಬಿ5 ಎಸಿ ಕೋಚ್‌ನಲ್ಲಿ ಈ ಘಟನೆ ನಡೆದಿದೆ. ಗುಂಡು ಹಾರಿಸಿದ ಕಾನ್‌ಸ್ಟೆಬಲ್‌ ಭಾಯಂದರ್‌ನಲ್ಲಿ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಚೇತನ್‌ ಸಿಂಗ್‌
ಬಂಧಿತ ಆರೋಪಿ ಚೇತನ್‌ ಸಿಂಗ್‌

ಆರೋಪಿ, ಆರ್‌ಪಿಎಫ್‌ ಕಾನ್‌ಸ್ಟೆಬಲ್‌ ಚೇತನ್ ಸಿಂಗ್, ಬೆಳಗ್ಗೆ 5 ಗಂಟೆಯ ಸುಮಾರಿಗೆ ತನ್ನ ಸ್ವಯಂಚಾಲಿತ ಶಸ್ತ್ರಾಸ್ತ್ರದಿಂದ ಗುಂಡು ಹಾರಿಸಿದ್ದು, ಮತ್ತೊಬ್ಬ ಆರ್‌ಪಿಎಫ್ ಸಹೋದ್ಯೋಗಿ, ಅವರ ಎಸ್ಕಾರ್ಟ್ ಡ್ಯೂಟಿ ಇನ್ ಚಾರ್ಜ್ ಎಎಸ್‌ಐ ಟಿಕಾ ರಾಮ್ ಮೀನಾ ಹಾಗೂ ರೈಲಿನಲ್ಲಿ ಮುಂಬೈಗೆ ತೆರಳುತ್ತಿದ್ದ ಮೂವರು ಪ್ರಯಾಣಿಕರನ್ನು ಕೊಂದಿದ್ದಾನೆ. ಆರೋಪಿಯನ್ನು ಶಸ್ತಾಸ್ತ್ರ ಸಮೇತ ಬಂಧಿಸಲಾಗಿದೆ ಎಂದು ಜೈಪುರದಿಂದ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನ್ನ ಹಿರಿಯ ಅಧಿಕಾರಿಯನ್ನು ಕೊಂದ ನಂತರ, ಕಾನ್‌ಸ್ಟೆಬಲ್‌ ಮತ್ತೊಂದು ಬೋಗಿಗೆ ಹೋಗಿ ಮೂವರು ಪ್ರಯಾಣಿಕರನ್ನು ಗುಂಡಿಕ್ಕಿ ಕೊಂದಿದ್ದಾನೆ.

ಪಾಲ್ಘರ್ ನಿಲ್ದಾಣವನ್ನು ದಾಟಿದ ನಂತರ ಚಲಿಸುತ್ತಿರುವ ರೈಲಿನೊಳಗೆ ಆರ್‌ಪಿಎಫ್ ಕಾನ್‌ಸ್ಟೆಬಲ್‌ ಗುಂಡು ಹಾರಿಸಿ ನಾಲ್ವರನ್ನು ಗುಂಡಿಕ್ಕಿ ಕೊಂದ ನಂತರ ರೈಲಿನ ಚೈನ್ ಎಳೆದು ದಹಿಸರ್ ನಿಲ್ದಾಣದ ಬಳಿ ರೈಲಿನಿಂದ ಜಿಗಿದಿದ್ದಾನೆ ಎಂದು ಪಶ್ಚಿಮ ರೈಲ್ವೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಣಿಪುರ ಹಿಂಸಾಚಾರ ನಿಲ್ಲಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಬೋರಿವಲಿ ನಿಲ್ದಾಣದಲ್ಲಿ ಎಲ್ಲ ನಾಲ್ಕು ಮೃತದೇಹಗಳನ್ನು ರೈಲಿನಿಂದ ಹೊರತೆಗೆಯಲಾಗಿದ್ದು, ಕಾಂದಿವಲಿಯ ಬಾಬಾಸಾಹೇಬ್ ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದೆ.

ರೈಲ್ವೆ ಪೊಲೀಸರು ಮತ್ತು ಆರ್ ಪಿಎಫ್ ಅಧಿಕಾರಿಗಳ ಸಹಾಯದಿಂದ ಮೀರಾ ರೋಡ್ ನಲ್ಲಿ ಪೊಲೀಸರು ಚೇತನ್ ಸಿಂಗ್ ನ್ನು ಸೆರೆ ಹಿಡಿದಿದ್ದಾರೆ. ಆರೋಪಿ ಚೇತನ್ ಸಿಂಗ್ ಉತ್ತರಪ್ರದೇಶದ ಹತ್ರಾಸ್ ನಿವಾಸಿಯಾಗಿದ್ದಾನೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...