ವಿವಿಯ ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್’ ಎಂದು ಬರೆದ ವಿದ್ಯಾರ್ಥಿಗಳಿಗೆ ಶೇ.50 ರಷ್ಟು ಹೆಚ್ಚು ಅಂಕ

Date:

ಅಂಕಗಳನ್ನು ವಿದ್ಯಾರ್ಥಿ ಬರೆದ ಗುಣಮಟ್ಟದ ಉತ್ತರದ ಆಧಾರದ ಮೇಲೆ ನೀಡಲಾಗುತ್ತದೆ. ಆದರೆ ಉತ್ತರ ಪ್ರದೇಶದ ವಿವಿಯೊಂದರಲ್ಲಿ ವಿದ್ಯಾರ್ಥಿಗಳು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳಲ್ಲಿ ‘ಜೈ ಶ್ರೀರಾಮ್’ ಹಾಗೂ ಭಾರತೀಯ ಕ್ರಿಕೆಟ್ ಪಟುಗಳ ಹೆಸರನ್ನು ಬರೆದಿರುವುದಕ್ಕೆ ಮೌಲ್ಯಮಾಪಕರು ಶೇ.50 ರಷ್ಟು ಹೆಚ್ಚಿನ ಅಂಕಗಳನ್ನು ನೀಡಿದ್ದಾರೆ.

ಜುನಾಪುರ್‌ ನಗರದ ವೀರ್‌ ಬಹುದ್ದೂರ್‌ ಸಿಂಗ್‌ ಪೂರ್ವಾಂಚಲ್‌ ವಿವಿಯಲ್ಲಿ ಈ ಘಟನೆ ನಡೆದಿದೆ. ಮೂಲಗಳ ಪ್ರಕಾರ ಈ ರೀತಿ ಹೆಚ್ಚು ಅಂಕ ನೀಡಿ ಕೃತ್ಯವೆಸಗಿದ ಇಬ್ಬರು ಶಿಕ್ಷಕರನ್ನು ವಜಾಗೊಳಿಸಲು ವಿಶ್ವವಿದ್ಯಾಲಯ ಶಿಫಾರಸ್ಸು ಮಾಡಿದೆ.

ವೀರ್‌ ಬಹುದ್ದೂರ್‌ ಸಿಂಗ್‌ ಪೂರ್ವಾಂಚಲ್‌ ವಿವಿಯ ಮಾಜಿ ವಿದ್ಯಾರ್ಥಿಯಾದ ದಿವ್ಯಾನ್ಷು ಸಿಂಗ್‌ ಎಂಬುವವರು ಆರ್‌ಟಿಐ ಮೂಲಕ ಉತ್ತರ ಪತ್ರಿಕೆಗಳನ್ನು ಪುನರ್‌ ಪರಿಶೀಲಿಸುವ ಮಾಹಿತಿ ಕೇಳಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದ್ವೇಷ -ವಿರಸ- ವೈಷಮ್ಯಗಳ ಮೇಲೆ ಮತಯಾಚನೆ ಪರಮವಿಕೃತಿ

ಮೂಲಗಳ ಪ್ರಕಾರ ಫಾರ್ಮಸಿ ಕೋರ್ಸಿನ ನಾಲ್ವರು ವಿದ್ಯಾರ್ಥಿಗಳು ತಮ್ಮ ಡಿ ಫಾರ್ಮಾ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಯಲ್ಲಿ ಹಲವು ಕಡೆಗಳಲ್ಲಿ ‘ಜೈ ಶ್ರೀರಾಮ್’ ಹಾಗೂ ಭಾರತೀಯ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ರ್‌ಗಳ ಹೆಸರುಗಳನ್ನು ಬರೆದಿದ್ದರು.

ಈ ರೀತಿ ಉತ್ತರ ಬರೆದ ಕಾರಣಕ್ಕಾಗಿ ಈ ನಾಲ್ವರು ವಿದ್ಯಾರ್ಥಿಗಳು ಶೇ.50 ರಷ್ಟು ಹೆಚ್ಚಿನ ಅಂಕ ಪಡೆದಿದ್ದರು. ನಂತರ ಉತ್ತರ ಪತ್ರಿಕೆಗಳನ್ನು ಪುನಃ ಮರುಮೌಲ್ಯಮಾಪನಗೊಳಿಸಿದ ನಂತರ ಆ ನಾಲ್ವರು ವಿದ್ಯಾರ್ಥಿಗಳು ಶೂನ್ಯ ಅಂಕ ಪಡೆದಿದ್ದರು.

ಆರ್‌ಟಿಐ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಯು ಈ ಪ್ರಕರಣದ ವಿವರವನ್ನು ರಾಜ್ಯಪಾಲರು, ಉಪಕುಲಪತಿಯವರಿಗೆ ಕಳುಹಿಸಿದ್ದು, ತನಿಖೆ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ರಾಜಭವನ ಕೂಡ ವಿವಿಯ ಸಮಿತಿ ನೇತೃತ್ವದಲ್ಲಿ ತನಿಖೆ ಕೈಗೊಳ್ಳುವಂತೆ ಆದೇಶಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...