ನಕಲಿ ವರ್ಚುವಲ್ ಕೋರ್ಟ್‌ | ಸಿಜೆಐ ಸೋಗಿನಲ್ಲಿ ಉದ್ಯಮಿಗೆ 7 ಕೋಟಿ ರೂ. ವಂಚನೆ

Date:

ಜವಳಿ ಕೈಗಾರಿಕೋದ್ಯಮಿ ಮತ್ತು ವರ್ಧಮಾನ್ ಗ್ರೂಪ್‌ನ ಅಧ್ಯಕ್ಷ ಎಸ್‌ಪಿ ಓಸ್ವಾಲ್ ಅವರಿಗೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಸೋಗಿನಲ್ಲಿ 7 ಕೋಟಿ ರೂ. ವಂಚನೆ ಮಾಡಲಾಗಿದೆ. ನಕಲಿ ವರ್ಚುವಲ್ ಕೋರ್ಟ್ ರೂಂ ಸೃಷ್ಟಿಸಿ ಈ ವಂಚನೆ ಮಾಡಲಾಗಿದೆ ಎಂದು ವರದಿಯಾಗಿದೆ.

ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಪ್ರಕಾರ ವಂಚಕರು ಸಿಬಿಐ ಅಧಿಕಾರಿಗಳೆಂದು ಹೇಳಿಕೊಂಡಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್‌ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಓಸ್ವಾಲ್ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದರು. ಬಳಿಕ ನಕಲಿ ಕೋರ್ಟ್ ರೂಂ ಸೃಷ್ಟಿಸಿ ದಂಡವೆಂಬಂತೆ 7 ಕೋಟಿ ರೂ. ವಸೂಲಿ ಮಾಡಿದ್ದಾರೆ.

ನಕಲಿ ಪಾಸ್‌ಪೋರ್ಟ್‌ಗಳು ಮತ್ತು ಡೆಬಿಟ್ ಕಾರ್ಡ್‌ಗಳೊಂದಿಗೆ ಮಲೇಷ್ಯಾಕ್ಕೆ ಪಾರ್ಸೆಲ್ ಕಳುಹಿಸಲು ಓಸ್ವಾಲ್ ತಮ್ಮ ಆಧಾರ್ ಅನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ನಕಲಿ ಬಂಧನ ವಾರಂಟ್‌ಗಳೊಂದಿಗೆ ಬೆದರಿಕೆ ಹಾಕಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬೆಂಗಳೂರು | ಆನ್‌ಲೈನ್ ಉದ್ಯೋಗದ ಹೆಸರಲ್ಲಿ 6 ಕೋಟಿ ವಂಚನೆ: 10 ಮಂದಿ ಆರೋಪಿಗಳ ಬಂಧನ

ಇಂಡಿಯನ್ ಎಕ್ಸ್‌ಪ್ರೆಸ್ ಮತ್ತು ರಾಯಿಟರ್ಸ್ ವರದಿ ಪ್ರಕಾರ ವಂಚಕರು ಸ್ಕೈಪ್ ಕರೆ ಮೂಲಕ ನಕಲಿ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಸಿಜೆಐನಂತೆ ವ್ಯಕ್ತಿಯೊಬ್ಬರು ನಟಿಸಿದ್ದಾರೆ. ಬಳಿಕ ಮುದ್ರೆ ಒತ್ತಿರುವ ಸುಪ್ರೀಂ ಕೋರ್ಟ್ ಆದೇಶ ಪ್ರತಿಯಂತೆ ನಕಲಿ ಪ್ರತಿಯನ್ನು ಕಳುಹಿಸಿದ್ದಾರೆ. ದಂಡವಾಗಿ 7 ಕೋಟಿ ರೂಪಾಯಿ ಪಾವತಿಸಲು ನಿರ್ದೇಶನ ನೀಡಿದ್ದಾರೆ.

“ಸ್ಕೈಪ್ ಮೂಲಕ ನಕಲಿ ಸುಪ್ರೀಂ ಕೋರ್ಟ್ ವಿಚಾರಣೆಯ ನಡೆಸಲಾಗಿದೆ. ಈ ವೇಳೆ ನ್ಯಾಯಾಧೀಶರನ್ನು ನ್ಯಾಯಮೂರ್ತಿ ಚಂದ್ರಚೂಡ್ ಎಂದು ಪರಿಚಯಿಸಿಕೊಂಡಿದ್ದಾರೆ. ನಾನು ಅವರ ಮುಖವನ್ನು ನೋಡಲಿಲ್ಲ. ಆದರೆ ಅವರು ಮಾತನಾಡುವುದು ಮತ್ತು ಮೇಜಿನ ಮೇಲೆ ಸುತ್ತಿಗೆಯಿಂದ ಬಡಿಯುವುದು ಮಾತ್ರ ನನಗೆ ಕೇಳಿಸಿದೆ. ಅದಾದ ಬಳಿಕ ಲಿಖಿತ ಆದೇಶದ ಪ್ರತಿ ಬಂದಿದೆ. ಅದು ನಿಜವಾದ ಆದೇಶ ಪ್ರತಿಯಂತೆಯೇ ಇತ್ತು. ಅದನ್ನು ನಂಬಿ ನಾನು ಹಣ ವರ್ಗಾಯಿಸಿದೆ” ಎಂದು ಓಸ್ವಾಲ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಮಂಡ್ಯ | ಅಮಾಯಕರ ಹೆಸರಿನಲ್ಲಿ ₹1 ಕೋಟಿಗೂ ಹೆಚ್ಚು ಸಾಲ ಪಡೆದು ತಾಯಿ-ಮಗಳು ವಂಚನೆ; ಪರಾರಿ

ಇದು ನಕಲಿ ಎಂದು ತಿಳಿದ ಬಳಿಕ ಓಸ್ವಾಲ್ ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ. ವರದಿಗಳ ಪ್ರಕಾರ ಈವರೆಗೆ 5.25 ಕೋಟಿ ರೂಪಾಯಿ ಓಸ್ವಾಲ್ ಖಾತೆಗೆ ಮರಳಿಸಲಾಗಿದೆ ಮತ್ತು ಗುವಾಹಟಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ. 7 ಮಂದಿ ಶಂಕಿತರ ಹುಡುಕಾಟ ಮುಂದುವರೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...