ಸಿಂಧು ಜಲ ಒಪ್ಪಂದ ಸ್ಥಗಿತಗೊಳಿಸುವುದು ಕಾನೂನುಬಾಹಿರವಲ್ಲ: ಪಾಕ್ ಹೇಳಿಕೆ ತಿರಸ್ಕರಿಸಿದ ಭಾರತ

Date:

ಸಿಂಧು ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಭಾರತದ ನಿರ್ಧಾರವು ‘ಕಾನೂನುಬಾಹಿರ’ ಎಂಬ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರ ಆರೋಪವನ್ನು ಭಾರತ ತಿರಸ್ಕರಿಸಿದೆ. “ಈ ನಿರ್ಧಾರವು ಅಂತಾರಾಷ್ಟ್ರೀಯ ಕಾನೂನುಗಳ ಪ್ರಕಾರ ಕಾನೂನುಬದ್ಧವಾಗಿದೆ” ಎಂದು ಭಾರತ ಹೇಳಿದೆ.

ಶುಕ್ರವಾರ, ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅಂತಾರಾಷ್ಟ್ರೀಯ ಸಮ್ಮೇಳನವೊಂದರಲ್ಲಿ ಸಿಂಧು ಜಲ ಒಪ್ಪಂದವನ್ನು ಮುರಿದು ಲಕ್ಷಾಂತರ ಜನರ ಜೀವಕ್ಕೆ ಅಪಾಯವನ್ನುಂಟುಮಾಡುವ ಮೂಲಕ ಭಾರತ ಕೆಂಪು ರೇಖೆಯನ್ನು ದಾಟಲು ಪ್ರಯತ್ನಿಸುತ್ತಿದೆ. ಆದರೆ ನಾವು ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಶಿಮ್ಲಾ ಒಪ್ಪಂದದತ್ತ ಕಣ್ಣು ಹಾಯಿಸಬೇಕಿದೆ ಭಾರತ-ಪಾಕ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಜಲಶಕ್ತಿ ಸಚಿವಾಲಯದ ಸಿಂಧು ಜಲ ಒಪ್ಪಂದದ ಸಲಹೆಗಾರ ಮತ್ತು ಮಾಜಿ ಆಯುಕ್ತ(ಸಿಂಧು) ಕುಶ್ವಿಂದರ್ ವೋಹ್ರಾ ಎನ್‌ಡಿಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ. “ಸಿಂಧು ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಭಾರತದ ನಿರ್ಧಾರವು ಚಾಲ್ತಿಯಲ್ಲಿರುವ ಅಂತಾರಾಷ್ಟ್ರೀಯ ಕಾನೂನುಗಳ ಪ್ರಕಾರ ಕಾನೂನುಬದ್ಧವಾಗಿ ಮಾನ್ಯವಾಗಿದೆ” ಎಂದರು.

“ಅಂತಾರಾಷ್ಟ್ರೀಯ ಒಪ್ಪಂದಗಳ ಮೇಲಿನ ವಿಯೆನ್ನಾ ಸಮಾವೇಶವು ಸಿಂಧು ಜಲ ಒಪ್ಪಂದದ ಮೇಲೆ ಕಟ್ಟುನಿಟ್ಟಾಗಿ ಅನ್ವಯಿಸುವುದಿಲ್ಲ. ಏಕೆಂದರೆ ಅದು 1980ರಲ್ಲಿ ಮಾತ್ರ ಜಾರಿಗೆ ಬಂದಿದೆ. 1980ರ ಮೊದಲು ಮಾಡಲಾದ ಒಪ್ಪಂದಗಳು ಅದರ ವ್ಯಾಪ್ತಿಗೆ ಬರುವುದಿಲ್ಲ. ಸಿಂಧು ಜಲ ಒಪ್ಪಂದಕ್ಕೆ 1960ರಲ್ಲಿ ಸಹಿ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಮೂಲಭೂತ ಸಂದರ್ಭಗಳು ಬದಲಾದಾಗ, ಪರಿಸ್ಥಿತಿ ಬಂದಾಗ ಸಿಂಧು ಜಲ ಒಪ್ಪಂದವನ್ನು ಅಮಾನತುಗೊಳಿಸಬಹುದು ಅಥವಾ ರದ್ದುಗೊಳಿಸಬಹುದು ಎಂದೂ ಹೇಳಿದರು. “ಸಿಂಧು ಜಲ ಒಪ್ಪಂದದ ಮೂಲಾಧಾರವಾಗಿದ್ದ ಸೌಹಾರ್ದತೆ ಮತ್ತು ಸ್ನೇಹದ ಮನೋಭಾವಕ್ಕೆ ವಿರುದ್ಧವಾಗಿ ಪಾಕಿಸ್ತಾನ ನಿರಂತರವಾಗಿ ವರ್ತಿಸುತ್ತಿರುವುದರಿಂದ ಭಾರತ ತನ್ನ ಹಕ್ಕು ಬಳಸಿಕೊಂಡು ಒಪ್ಪಂದವನ್ನು ಸ್ಥಗಿತಗೊಳಿಸಿದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಸಿಂಧು ನದಿ ನೀರು ಹರಿಸಲೇಬೇಕು – ಇಲ್ಲದಿದ್ದರೆ ಭಾರತಕ್ಕೇ ಗಂಭೀರ ಸಮಸ್ಯೆ!

“ಭಾರತದ ನಿರ್ಧಾರವನ್ನು ಪ್ರಶ್ನಿಸಲು ಪಾಕಿಸ್ತಾನ ಅಂತಾರಾಷ್ಟ್ರೀಯ ವೇದಿಕೆಗಳಿಗೆ ಹೋದರೂ, ಇಂದಿನ ಸನ್ನಿವೇಶಗಳು ಬದಲಾಗಿವೆ. ವಿಶೇಷವಾಗಿ ಇಸ್ಲಾಮಾಬಾದ್ ಸೌಹಾರ್ದತೆ ಮತ್ತು ಸ್ನೇಹದ ಮನೋಭಾವಕ್ಕೆ ವಿರುದ್ಧವಾಗಿ ವರ್ತಿಸುವುದು, ತಾಂತ್ರಿಕ ಬದಲಾವಣೆಗಳು, ಹವಾಮಾನ ಬದಲಾವಣೆಯ ಪರಿಣಾಮಗಳು ಸೇರಿದಂತೆ ಇತರವುಗಳಿವೆ” ಎಂದಿದ್ದಾರೆ.

1960ರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದಿರುವ ಸಿಂಧು ಜಲ ನೀರಿನ ಒಪ್ಪಂದವು ಎರಡೂ ದೇಶಗಳ ನಡುವೆ ಸಿಂಧು ನದಿ ವ್ಯವಸ್ಥೆಯ ನೀರಿನ ಹಂಚಿಕೆಗೆ ಸಂಬಂಧಿಸಿದೆ. ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ಪಾಕಿಸ್ತಾನ ಮೂಲಕ ಭಯೋತ್ಪಾದನಾ ಸಂಘಟನೆ ಪ್ರವಾಸಿಗರ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಕೊಂದ ಬಳಿಕ ಈ ಒಪ್ಪಂದವನ್ನು ಭಾರತ ಸ್ಥಗಿತಗೊಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...