₹210 ಕೋಟಿ ದಂಡ ವಿಧಿಸಿ ಕಾಂಗ್ರೆಸ್ ವಿರುದ್ಧ ಕ್ರಿಮಿನಲ್‌ ಕ್ರಮ ತೆಗೆದುಕೊಳ್ಳಲಾಗಿದೆ: ರಾಹುಲ್ ಗಾಂಧಿ

Date:

“ಲೋಕಸಭಾ ಚುನಾವಣೆಯ ಹೊತ್ತಿನಲ್ಲೇ ಕಾಂಗ್ರೆಸ್‌ನ ಖಾತೆಯಲ್ಲಿರುವ ಹಣವನ್ನು ಕಿತ್ತುಕೊಳ್ಳಲಾಗುತ್ತಿದೆ. ನಮಗೆ ₹210 ಕೋಟಿ ದಂಡ ವಿಧಿಸಲಾಗಿದೆ. ನಮ್ಮನ್ನು ಆರ್ಥಿಕವಾಗಿ ಸೋಲಿಸಲಾಗುತ್ತಿದೆ. ಆ ಮೂಲಕ ಕೇಂದ್ರ ಸರ್ಕಾರವು ಕಾಂಗ್ರೆಸ್ ವಿರುದ್ಧ ಕ್ರಿಮಿನಲ್‌ ಕ್ರಮ ತೆಗೆದುಕೊಂಡಿದೆ” ಎಂದು ಕಾಂಗ್ರೆಸ್‌ನ ಮುಖಂಡ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

ದೆಹಲಿಯ ಕಾಂಗ್ರೆಸ್‌ನ ಕೇಂದ್ರ ಕಚೇರಿಯಲ್ಲಿ ಕರೆಯಲಾಗಿದ್ದ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಇದು ಬಹಳಷ್ಟು ಗಂಭೀರ ವಿಷಯ. ನಮ್ಮ ಖಾತೆಯಲ್ಲಿರುವ ಹಣವನ್ನು ಬಳಸದಂತೆ ನಿರ್ಬಂಧ ಹೇರಲಾಗಿದೆ. ಕಳೆದ ಒಂದು ತಿಂಗಳಿಂದ ನಮ್ಮ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ. ಚುನಾವಣೆಯ ಹೊತ್ತಲ್ಲೇ ಖಾತೆ ನಿರ್ಬಂಧ ಮಾಡಿರುವುದರಿಂದ ಪಕ್ಷದ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ಈಗಾಗಲೇ ಒಂದು ತಿಂಗಳು ನಮಗೆ ನಷ್ಟವಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ಕಾಂಗ್ರೆಸ್ ಪಕ್ಷದ ಮೇಲಿನ ಕ್ರಿಮಿನಲ್ ಕ್ರಮ. ಪ್ರಧಾನಿ ಮತ್ತು ಗೃಹ ಸಚಿವರು ಮಾಡಿದ ಕ್ರಿಮಿನಲ್ ಕ್ರಮ. ಹಾಗಾಗಿ, ಭಾರತದಲ್ಲಿ ಈಗ ಪ್ರಜಾಪ್ರಭುತ್ವ ಇದೆ ಎಂಬುದು ಸುಳ್ಳು. ಇಂದು ಭಾರತದಲ್ಲಿ ಪ್ರಜಾಪ್ರಭುತ್ವವೇ ಇಲ್ಲ. ನಮ್ಮ ದೇಶ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಎಂಬ ಕಲ್ಪನೆಯು ಸುಳ್ಳು, ಸಂಪೂರ್ಣ ಸುಳ್ಳು. ದೇಶದ 20% ನಮಗೆ ಮತ ಹಾಕುತ್ತಾರೆ. ನಾವು ಯಾವುದಕ್ಕೂ 2 ರೂಪಾಯಿ ಪಾವತಿಸಲು ಸಾಧ್ಯವಾಗುತ್ತಿಲ್ಲ. ಚುನಾವಣೆಯಲ್ಲಿ ನಮ್ಮನ್ನು ಕುಗ್ಗಿಸಲು ಸಂಚು ರೂಪಿಸಲಾಗಿದೆ. ಇಂದು ನಮ್ಮ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದರೂ ಸಹ, ಪ್ರಜಾಪ್ರಭುತ್ವದ ಚೌಕಟ್ಟನ್ನು ರಕ್ಷಿಸಬೇಕಾದ ಚುನಾವಣಾ ಆಯೋಗವಿದೆ. ಆದರೆ, ಈ ಬಗ್ಗೆ ಯಾವುದೇ ಚಕಾರ ಎತ್ತಿಲ್ಲ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ಹೊರಹಾಕಿದ್ದಾರೆ.

“ಇದು ಕೇವಲ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುತ್ತಿಲ್ಲ, ಇದು ಭಾರತೀಯ ಪ್ರಜಾಪ್ರಭುತ್ವವನ್ನೇ ಸ್ಥಗಿತಗೊಳಿಸಿದಂತಿದೆ. ಅತಿದೊಡ್ಡ ವಿರೋಧ ಪಕ್ಷವಾಗಿ, ನಾವು ಯಾವುದೇ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ನಾವು ಪತ್ರಿಕೆ, ಎಲೆಕ್ಟ್ರಾನಿಕ್ ಮಾಧ್ಯಮ ಸೇರಿದಂತೆ ಯಾವುದರಲ್ಲೂ ಜಾಹೀರಾತುಗಳನ್ನು ಬುಕ್ ಮಾಡಲು ಹಾಗೂ ನಮ್ಮ ನಾಯಕರನ್ನ ವಿಮಾನ ಬಿಡಿ, ರೈಲಿನಲ್ಲೂ ಕಳುಹಿಸಲು ಸಾಧ್ಯವಾಗುತ್ತಿಲ್ಲ. ಯಾವುದಕ್ಕೂ 2 ರೂಪಾಯಿ ಪಾವತಿಸಲು ಸಾಧ್ಯವಾಗುತ್ತಿಲ್ಲ. ಇದು ಪ್ರಜಾಪ್ರಭುತ್ವದ ಮೇಲಿನ ಆಕ್ರಮಣವಾಗಿದೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

“ಆದಾಯ ತೆರಿಗೆಯ ನಿಯಮದ ಪ್ರಕಾರ, ಆದಾಯ ತೆರಿಗೆ ಕಟ್ಟುವಲ್ಲಿ ತಡವಾದರೆ ಗರಿಷ್ಠ ಎಂದರೆ 10 ಸಾವಿರ ಮಾತ್ರವಷ್ಟೇ ದಂಡ ವಿಧಿಸಬಹುದು ಎಂಬ ನಿಯಮವಿದೆ. ಆದರೆ ನಮಗೆ 210 ಕೋಟಿ ದಂಡ ವಿಧಿಸಲಾಗಿದೆ. ಕಳೆದ ಒಂದು ತಿಂಗಳಿಂದ ನಮ್ಮ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ. 1994-95 ಸಮಯದ ಲೆಕ್ಕಪತ್ರವನ್ನು ಕಳೆದ ವಾರ ಕೇಳಿದ್ದಾರೆ. ದೇಶದಲ್ಲಿ ಈ ಮೊದಲು ಈ ರೀತಿಯ ಬೆಳವಣಿಗೆ ಆಗಿಲ್ಲ. ಚುನಾವಣೆಯ ಸಂದರ್ಭದಲ್ಲಿ ಈ ಮಾಡುವ ಮೂಲಕ ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವವನ್ನೇ ಕಗ್ಗೊಲೆ ಮಾಡಿದೆ” ಎಂದು ರಾಹುಲ್ ಗಾಂಧಿ ಕಿಡಿಕಾರಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ನ ಹಿರಿಯ ವರಿಷ್ಠೆ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್, ಕಾಂಗ್ರೆಸ್‌ನ ಕೋಶಾಧಿಕಾರಿ ಅಜಯ್ ಮಾಕನ್, ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...