ಫ್ರೆಂಚ್ ರಾಯಭಾರಿ ಮೊಬೈಲನ್ನೇ ಕದ್ದ ಖದೀಮರು; ನಾಲ್ವರ ಬಂಧನ

Date:

ಭಾರತದ ಫ್ರೆಂಚ್ ರಾಯಭಾರಿ ಥಿಯೆರಿ ಮ್ಯಾಥೌ ಅವರ ಮೊಬೈಲ್ ಅನ್ನೇ ದೆಹಲಿಯ ಚಾಂದಿನಿ ಚೌಕ್‌ನ ಮಾರುಕಟ್ಟೆಯಲ್ಲಿ ಕಳ್ಳತನ ಮಾಡಲಾಗಿದೆ. ಫ್ರೆಂಚ್ ರಾಯಭಾರಿ ಅಕ್ಟೋಬರ್ 20ರಂದು ದೀಪಾವಳಿ ಶಾಪಿಂಗ್ ಮಾಡುತ್ತಿದ್ದ ವೇಳೆ ಕಳ್ಳತನ ನಡೆದಿದೆ.

ಜನಪ್ರಿಯ ಮಾರುಕಟ್ಟೆಯಾದ ಚಾಂದಿನಿ ಚೌಕ್‌ಗೆ ಹೋದಾಗ ಫ್ರೆಂಚ್ ರಾಯಭಾರಿ ಜೇಬಿನಲ್ಲಿದ್ದ ಮೊಬೈಲ್ ಫೋನ್ ಕಳ್ಳತನವಾಗಿದೆ. ಜೈನ ಮಂದಿರದ ಬಳಿ ತನ್ನ ಮೊಬೈಲ್ ಫೋನ್ ಕಾಣೆಯಾಗಿದೆ ಎಂದು ಥಿಯೆರಿ ಮ್ಯಾಥೌ ಇ-ದೂರು ದಾಖಲಿಸಿದ್ದರು. ಮರುದಿನವೇ ಈ ಬಗ್ಗೆ ತನಿಖೆ ನಡೆಸುವಂತೆ ರಾಯಭಾರ ಕಚೇರಿಯು ಅಧಿಕಾರಿಗಳಿಗೆ ಸೂಚನೆ ನೀಡಿತ್ತು.

ಕೂಡಲೇ ಕಾರ್ಯಪ್ರವೃತ್ತರಾದ ದೆಹಲಿ ಪೊಲೀಸರು ಕಾರ್ಯಾಚರಣೆಗಾಗಿ ತಂಡ ರಚಿಸಿ ಮೊಬೈಲ್ ಕಳ್ಳತನಕ್ಕೆ ಸಂಬಂಧಿಸಿದಂತೆ ಎಲ್ಲ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಲ್ಲಾ ನಾಲ್ವರು ಆರೋಪಿಗಳ ವಯಸ್ಸು 20 ರಿಂದ 25 ಎಂದು ವರದಿಯಾಗಿದೆ. ಕದ್ದ ಮೊಬೈಲ್ ಫೋನ್ ಕೂಡ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಲಬುರಗಿ | ಕಳ್ಳತನವಾಗಿದ್ದ 672 ಮೊಬೈಲ್ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

ಇನ್ನು ಇತ್ತೀಚೆಗೆ ಮುಂಬೈನಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ, ಪೊಲೀಸರು 127 ಕಾಣೆಯಾದ ಮೊಬೈಲ್ ಫೋನ್‌ಗಳನ್ನು ಪತ್ತೆಹಚ್ಚಿ ಅದನ್ನು ಮಾಲೀಕರಿಗೆ ಹಿಂದಿರುಗಿಸಿದ್ದಾರೆ. ದೇಶದ ವಿವಿಧ ಭಾಗಗಳಲ್ಲಿ ಈ 127 ಮೊಬೈಲ್ ಫೋನ್‌ಗಳನ್ನು ಪತ್ತೆ ಹಚ್ಚಲಾಗಿದೆ.

ಅಂಧೇರಿ ಪೊಲೀಸ್ ಅಧಿಕಾರಿಗಳ ಪ್ರಕಾರ, ಭಯೋತ್ಪಾದನಾ ನಿಗ್ರಹ ದಳ (ಎಟಿಸಿ) 19 ಲಕ್ಷ ರೂಪಾಯಿ ಮೌಲ್ಯದ ಫೋನ್‌ಗಳನ್ನು ಪತ್ತೆ ಮಾಡಿದೆ. ಕಳೆದ ಎರಡು ವರ್ಷಗಳಲ್ಲಿ ಈ ಮೊಬೈಲ್ ಫೋನ್‌ಗಳು ಕಳ್ಳತನವಾಗಿತ್ತು. ಈ ಮೊಬೈಲ್ ಫೋನ್‌ಗಳನ್ನು ಕರ್ನಾಟಕ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ರಾಜಸ್ಥಾನದಲ್ಲಿ ವಶಪಡಿಸಿಕೊಳ್ಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...