ತಿರುಪತಿ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ; ಇಮೇಲ್‌ನಲ್ಲಿ ಉದಯನಿಧಿ ಸ್ಟಾಲಿನ್ ಪತ್ನಿ ಹೆಸರು ಉಲ್ಲೇಖ

Date:

ಆಂಧ್ರಪ್ರದೇಶದ ತಿರುಪತಿಯ ಎರಡು ಪ್ರಮುಖ ಹೋಟೆಲ್‌ಗಳಿಗೆ ಶನಿವಾರ ಹೊಸ ಬಾಂಬ್ ಬೆದರಿಕೆಗಳು ಬಂದಿವೆ. ಇದಾದ ಒಂದು ದಿನದ ನಂತರವೇ ತಿರುಪತಿಯ ಹಲವು ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಬಂದಿವೆ

ಪೊಲೀಸರು ಹೊಟೇಲ್‌ಗಳಲ್ಲಿ ಸಂಪೂರ್ಣ ಶೋಧ ನಡೆಸಿದ್ದು, ಇದು ಹುಸಿ ಬಾಂಬ್ ಬೆದರಿಕೆ ಎಂಬುದು ಖಚಿತವಾಗಿದೆ. ಇನ್ನು ಬಾಂಬ್ ಬೆದರಿಕೆ ಇಮೇಲ್‌ನಲ್ಲಿ ಉದಯನಿಧಿ ಸ್ಟಾಲಿನ್ ಪತ್ನಿ ಕಿರುತಿಗ ಉದಯನಿಧಿ ಹೆಸರು ಉಲ್ಲೇಖಿಸಲಾಗಿದೆ.

ಜೊತೆಗೆ ತಮಿಳುನಾಡಿನಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮತ್ತು ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ಮಾದಕ ವಸ್ತು ಕಳ್ಳಸಾಗಣೆ ಜಾಲದ ಆರೋಪಿ ಜಾಫರ್ ಸಾದಿಕ್ ಹೆಸರನ್ನು ಕೂಡಾ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಇಂಡಿಗೋ, ಏರ್ ಇಂಡಿಯಾ ಸೇರಿ ಮತ್ತೆ 85 ವಿಮಾನಗಳಿಗೆ ಬಾಂಬ್ ಬೆದರಿಕೆ

ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ಪತ್ನಿ ‘ಕಿರುತಿಗ ಉದಯನಿಧಿ ಅವರಿಂದ ಗಮನವನ್ನು ಬೇರೆಡೆಗೆ ಸೆಳೆಯಲು’ ಸ್ಫೋಟಗಳನ್ನು ನಡೆಸಲು ತಮಿಳುನಾಡಿನ ಉನ್ನತ ಪೋಲೀಸರು ಪಾಕ್‌ ಐಎಸ್‌ಐ ಜೊತೆ ಕೈ ಜೋಡಿಸಿದೆ’ ಎಂದು ಇಮೇಲ್‌ನಲ್ಲಿ ಅಸ್ಪಷ್ಟವಾಗಿ ಬರೆಯಲಾಗಿದೆ.

ರಾಜ್ ಪಾರ್ಕ್ ಮತ್ತು ಪೈ ವೈಸ್‌ರಾಯ್ ಹೋಟೆಲ್‌ಗಳಿಗೆ ಕಳುಹಿಸಿದ ಇಮೇಲ್‌ನಲ್ಲಿ, “ಬಿಡಿಡಿಎಸ್‌ ಬಿಟ್ಟಿರುವ ಹೋಟೆಲ್ ಪೈಪ್‌ಲೈನ್‌ಗಳಲ್ಲಿ ಸಲ್ಫರ್‌ ಆಧಾರಿತ ಸುಧಾರಿತ ಇಡಿಗಳನ್ನು ಇಡಲಾಗಿದೆ. 10.35ಗೆ ಅದನ್ನು ಸ್ಥಳಾಂತರಿಸಿ” ಎಂದು ಹೇಳಲಾಗಿದೆ.

ಶುಕ್ರವಾರದ ಬಾಂಬ್ ಬೆದರಿಕೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಐಎಸ್‌ಐ ಭಾಗಿಯಾಗಿರುವ ಬಗ್ಗೆ ಉಲ್ಲೇಖಿಸಲಾಗಿದೆ. “ಜಾಫರ್ ಸಾದಿಕ್ ಬಂಧನದಿಂದಾಗಿ ಅಂತಾರಾಷ್ಟ್ರೀಯ ಒತ್ತಡ ಅಧಿಕವಾಗಿದೆ. ಪ್ರಕರಣದಲ್ಲಿ ಎಂಕೆ ಸ್ಟಾಲಿನ್ ಅವರ ಕುಟುಂಬದ ಒಳಗೊಳ್ಳುವಿಕೆಯಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಶಾಲೆಗಳಲ್ಲಿ ಇಂತಹ ಸ್ಫೋಟಗಳು ಅಗತ್ಯವಾಗಿವೆ” ಎಂದು ಇಮೇಲ್ ಹೇಳಿದೆ.

ತಮಿಳು ಚಲನಚಿತ್ರ ನಿರ್ಮಾಪಕ ಮತ್ತು ಮಾಜಿ ಡಿಎಂಕೆ ಕಾರ್ಯಕರ್ತ ಜಾಫರ್ ಸಾದಿಕ್ ಅವರನ್ನು ಜುಲೈನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಪ್ರಕರಣದ ತನಿಖೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...