ಜೀವ ತೆಗೆದ ತಮಾಷೆ | ಯುವಕನ ಗುಪ್ತಾಂಗಕ್ಕೆ ಕಂಪ್ರೆಸರ್ ಪೈಪ್ ಇಟ್ಟ ಸ್ನೇಹಿತ; ಯುವಕ ಸಾವು

Date:

ತಮಾಷೆ ಮಾಡಲೆಂದು ಯುವಕ ಗುಪ್ತಾಂಗಕ್ಕೆ ಆತನ ಸ್ನೆಹಿತನೊಬ್ಬ ಕಂಪ್ರೆಸರ್ ಪೈಪ್ ಇಟ್ಟಿದ್ದು, ಯುವಕನ ದೇಹಕ್ಕೆ ಗಾಳಿ ತುಂಬಿಕೊಂಡು, ಆತನ ಸಾವನ್ನಪ್ಪಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ.

ಮೃತನನ್ನು ಪ್ರಕಾಶ್‌ ಎಂದು ಗುರುತಿಸಲಾಗಿದೆ. ಆತನ ಗುಪ್ತಾಂಗಕ್ಕೆ ಸ್ನೇಹಿತ ಅಲ್ಪೇಶ್ ಎಂಬಾತ ಕಂಪ್ರೆಸರ್ ಪೈಪ್ ಇಟ್ಟಿದ್ಧಾನೆ ಎಂದು ತಿಳಿದುಬಂದಿದೆ.

ಪ್ರಕಾಶ್‌ ಲೋಹದ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಪ್ರಕಾಶ್ ಮತ್ತು ಅವರ ಸಹೋದರ ಘೇವಾಬಾಯಿ ಅವರು ಅಲ್ಪೇಶ್‌ನನ್ನು ಭೇಟಿ ಮಾಡಲು ತೆರಳಿದ್ದರು. ಈ ವೇಳೆ, ಅಲ್ಪೇಶ್ ತಮಾಷೆಗಾಗಿ ಪ್ರಕಾಶ್‌ ಅವರ ಗುಪ್ತಾಂಗಕ್ಕೆ ಕಂಪ್ರೆಸರ್ ಪೈಪ್ ಇಟ್ಟಿದ್ದಾರೆ. ಕ್ಷಣಾರ್ಧದಲ್ಲೇ ಪ್ರಕಾಶ್ ದೇಹಕ್ಕೆ ಗಾಳಿ ತುಂಬಿಕೊಂಡಿದೆ. ವಾಂತಿಯಾಗಿ ಪ್ರಕಾಶ್ ಪ್ರಜ್ಞೆತಪ್ಪಿ ಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆ ಫಲಿಸದೆ ಪ್ರಕಾಶ್ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಲ್ಪೇಶ್‌ಗೆ ಕಂಪ್ರೆಸರ್ ಪೈಪ್‌ನಲ್ಲಿ ಗಾಳಿಯ ಒತ್ತಡ ಹೆಚ್ಚಿರುತ್ತದೆ ಎಂಬುದು ತಿಳಿದಿತ್ತು. ಆದರೂ, ಅದನ್ನು ಲೆಕ್ಕಿಸದೆ ಪ್ರಕಾಶ್‌ ಅವರ ಗುಪ್ತಾಂಗಕ್ಕೆ ಕಂಪ್ರೆಸರ್ ಪೈಪ್ ಇಟ್ಟಿದ್ದರು. ಇದೇ ಪ್ರಕಾಶ್ ಸಾವಿಗೆ ಕಾರಣ” ಎಂದು ಪ್ರಕಾಶ್ ಸಹೋದರ ಘೇವಾಬಾಯಿ ಹೇಳಿದ್ದಾರೆ.

ಘೇವಾಭಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.

ಆರಂಭಿಕ ತನಿಖೆಯಲ್ಲಿ, ಆರೋಪಿ ಅಲ್ಪೇಶ್‌ ಅವರಿಗೆ ಪ್ರಕಾಶ್‌ಗೆ ತೊಂದರೆ ಕೊಡುವ ಯಾವ ಉದ್ದೇಶವೂ ಇರಲಿಲ್ಲ. ತಮಾಷೆಗಾಗಿ ಮಾಡಿದ ಕೃತ್ಯ ಸಾವಿಗೆ ಕಾರಣವಾಗಿದೆ ಎಂದು ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...