ಜಾತಿ ತಿಳಿದ ನಂತರ ಸ್ನೇಹಿತರ ವರ್ತನೆಯಲ್ಲಿ ಬದಲಾವಣೆ; ಐಐಟಿ ವಿದ್ಯಾರ್ಥಿ ತಾಯಿ ಹೇಳಿಕೆ ಆರೋಪಪಟ್ಟಿಯಲ್ಲಿ ದಾಖಲು

Date:

ತನ್ನ ಜಾತಿ ತಿಳಿದ ನಂತರ ಸ್ನೇಹಿತರ ವರ್ತನೆಯಲ್ಲಿ ಬದಲಾವಣೆಯಾಗಿರುವ ಬಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದ ಬಾಂಬೆ ಐಐಟಿ ವಿದ್ಯಾರ್ಥಿ ದರ್ಶನ್ ಸೋಲಂಕಿ ತನ್ನ ತಾಯಿಗೆ ತಿಳಿಸಿದ್ದರು. ಈ ಮೂಲಕ ಕ್ಯಾಂಪಸ್‌ನಲ್ಲಿ ಜಾತಿ ಆಧಾರಿತ ತಾರತಮ್ಯ ಅಸ್ತಿತ್ವದಲ್ಲಿದೆ ಎಂದು ಹೇಳಿದ್ದರು ಎಂದು ಪೊಲೀಸರು ಪ್ರಕರಣದಲ್ಲಿ ಸಲ್ಲಿಸಿದ ಆರೋಪಪಟ್ಟಿಯಲ್ಲಿ ತಿಳಿಸಿದ್ದಾರೆ.

ಸಹ ವಿದ್ಯಾರ್ಥಿಗಳು ತಮ್ಮ ಜಾತಿಯ ಬಗ್ಗೆ ತಿಳಿದಾಗ ಅವರ ನಡವಳಿಕೆಯಲ್ಲಿ ಬದಲಾಗಿದೆ ಎಂದು ದೂರವಾಣಿ ಸಂಭಾಷಣೆಯ ಸಮಯದಲ್ಲಿ ಅವರು ತನ್ನ ತಾಯಿಗೆ ಹೇಳಿದ್ದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ವಿಶೇಷ ನ್ಯಾಯಾಲಯಕ್ಕೆ ಮಂಗಳವಾರ ನಗರ ಪೊಲೀಸರು ಸಲ್ಲಿಸಿದ ಆರೋಪಪಟ್ಟಿಯಲ್ಲಿ ಸೋಲಂಕಿ ಅವರ ತಾಯಿಯ ಹೇಳಿಕೆಯು ಒಂದು ಭಾಗವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಗಿರುವ ಸಹ ವಿದ್ಯಾರ್ಥಿ ಅರ್ಮಾನ್ ಖತ್ರಿ ಎಂದು ಆರೋಪಪಟ್ಟಿಯಲ್ಲಿ ಹೆಸರಿಸಲಾಗಿದೆ.

ಅಹಮದಾಬಾದ್ ಮೂಲದ ರಾಸಾಯನಿಕ ಶಾಸ್ತ್ರ ವಿಭಾಗದ ಬಿಟೆಕ್ ಪ್ರಥಮ ವರ್ಷದ ವಿದ್ಯಾರ್ಥಿ ದರ್ಶನ್ ಸೋಲಂಕಿ, ಫೆಬ್ರವರಿ 12, 2023 ರಂದು ಮುಂಬೈನ ಪೊವೈ ಪ್ರದೇಶದ ಐಐಟಿ ಕ್ಯಾಂಪಸ್‌ನಲ್ಲಿರುವ ಹಾಸ್ಟೆಲ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ಸಾವನಪ್ಪಿದ್ದರು. ಆಗಷ್ಟೆ ಸೆಮಿಸ್ಟರ್ ಪರೀಕ್ಷೆಗಳು ಮುಗಿದಿದ್ದವು.

ಧರ್ಮದ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡಿದ ನಂತರ ವಿದ್ಯಾರ್ಥಿ ಖತ್ರಿ, ಸೋಲಂಕಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಣಿಪುರ ಹಿಂಸಾಚಾರ: ವಿಶೇಷ ಸಿಬಿಐ ತಂಡದೊಂದಿಗೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ

ಸೋಲಂಕಿ ಅವರ ತಾಯಿ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಡಿಸೆಂಬರ್ 2022 ರಲ್ಲಿ ದೂರವಾಣಿ ಸಂಭಾಷಣೆಯ ಸಮಯದಲ್ಲಿ, ಸೋಲಂಕಿ ತನ್ನ ಸಹೋದರಿಗೆ ಪ್ರತಿಷ್ಠಿತ ಸಂಸ್ಥೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಹೇಳಿರುವ ಬಗ್ಗೆ ದಾಖಲಾಗಿದೆ.

ವಿದ್ಯಾರ್ಥಿಯ ಜಾತಿಯ ಬಗ್ಗೆ ಸ್ನೇಹಿತರು ತಿಳಿದುಕೊಂಡಾಗ ಅವರ ವರ್ತನೆಯಲ್ಲಿ ಬದಲಾವಣೆಯಾಗಿದೆ ಎಂದು ಸೋಲಂಕಿ ಅವರ ತಾಯಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜನವರಿ 2023 ರಲ್ಲಿ ಮಕರ ಸಂಕ್ರಾಂತಿ ರಜೆಯ ಸಮಯದಲ್ಲಿ ಸೋಲಂಕಿ ಅವರು ತಮ್ಮ ಸಹೋದರಿಯನ್ನು ಭೇಟಿ ಮಾಡಿದಾಗ ಈ ಬಗ್ಗೆ ಮತ್ತೊಮ್ಮೆ ಮಾತನಾಡಿದ್ದಾರೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

ಫೆಬ್ರವರಿ 12 ರಂದು, ಅವರು ಮಧ್ಯಾಹ್ನ 12.20ರ ಸುಮಾರಿಗೆ ತನ್ನ ತಾಯಿಯೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದಾರೆ ಮತ್ತು ಫೆಬ್ರವರಿ 14 ರಂದು ಮನೆಗೆ ಭೇಟಿ ನೀಡುವುದಾಗಿ ಮತ್ತು ಅವರು ತಮ್ಮ ಎಲ್ಲ ಸಂಬಂಧಿಕರನ್ನು ಒಟ್ಟಿಗೆ ಆಹ್ವಾನಿಸಬೇಕು ಎಂದು ಹೇಳಿದರು ಎಂದು ದರ್ಶನ್‌ ಅವರ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.

ಸೋಲಂಕಿ ಅವರ ಸಹೋದರಿ ಮತ್ತು ಚಿಕ್ಕಮ್ಮ ಕೂಡ ತಮ್ಮ ಹೇಳಿಕೆಗಳಲ್ಲಿ, ಅವರು ತಾರತಮ್ಯವನ್ನು ಎದುರಿಸುತ್ತಿದ್ದಾರೆ ಮತ್ತು ಅವರ ಜಾತಿಯ ಬಗ್ಗೆ ತಿಳಿದಾಗ ಇತರ ವಿದ್ಯಾರ್ಥಿಗಳ ವರ್ತನೆಯಲ್ಲಿ ಬದಲಾವಣೆ ಗಮನಿಸಿದ್ದಾರೆ ಎಂದು ಹೇಳಿದ್ದಾರೆ.

ಆರೋಪಪಟ್ಟಿಯಲ್ಲಿ ಕೆಲವು ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಸೇರಿದಂತೆ 55 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...