ಯುವತಿಯ ಮೇಲೆ ಅತ್ಯಾಚಾರ; ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿದ ಸ್ನೇಹಿತರು

Date:

ಸುಮಾರು 19 ವರ್ಷದ ಯುವತಿಯ ಮೇಲೆ ಆಕೆಯ ಸ್ನೇಹಿತನೋರ್ವ ಅತ್ಯಾಚಾರ ಎಸಗಿದ್ದು, ಇನ್ನಿಬ್ಬರು ಸ್ನೇಹಿತರು ಅದರ ವಿಡಿಯೋವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಯುವತಿಯ 22 ವರ್ಷದ ಸ್ನೇಹಿತ, ಆಕೆಯ ಸ್ನೇಹಿತೆ ಮತ್ತು ಇನ್ನೋರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮಂಗಳವಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ರಾಯಚೂರು | ಮತ್ತೊಬ್ಬ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರ ಪ್ರಕಾರ ಈ ಘಟನೆಯು 2024ರ ಡಿಸೆಂಬರ್ 29ರಂದು ಭಿವಾಂಡಿಯ ಕಮಾತ್‌ಘರ್‌ ಪ್ರದೇಶದಲ್ಲಿ ನಡೆದಿದೆ. ಮಧ್ಯಾಹ್ನದ ವೇಳೆ ಯುವತಿಯ ಸ್ನೇಹಿತ ವಾಕಿಂಗ್‌ಗೆ ಬರುವಂತೆ ಒತ್ತಾಯಿಸಿದ್ದಾನೆ. ಬಳಿಕ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಯುವಕ ಅತ್ಯಾಚಾರ ಎಸಗುತ್ತಿದ್ದಾಗ ಇನ್ನಿಬ್ಬರು ಅದರ ವಿಡಿಯೋವನ್ನು ಮಾಡಿದ್ದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್ ಆದ ಬಳಿಕ ಯುವತಿ ಅತ್ಯಾಚಾರದ ಬಗ್ಗೆ ದೂರು ದಾಖಲಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

“ಯುವತಿಯ ದೂರಿನ ಆಧಾರದಲ್ಲಿ ನಾವು ಇಬ್ಬರು ಯುವಕರು ಮತ್ತು ಯುವತಿಯ ಸ್ನೇಹಿತೆಯನ್ನು ಬಂಧಿಸಿದ್ದೇವೆ. ಮೂವರನ್ನು ನ್ಯಾಯಾಲಯವು ಫೆಬ್ರವರಿ 12ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಕೃಷ್ಣದೇವ ಖರಾಡೆ ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...