ಆಪರೇಷನ್ ಸಿಂಧೂರ್ ವೇಳೆ ಪಾಕಿಸ್ತಾನಕ್ಕೆ ಮಾಹಿತಿ ರವಾನೆ; ಗಗನ್‌ ದೀಪ್‌ ಅರೆಸ್ಟ್

Date:

ಆಪರೇಷನ್ ಸಿಂಧೂರ್ ಸಮಯದಲ್ಲಿ ಸೇನೆಯ ಚಲನವಲನಗಳಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಿ ಗುಪ್ತಚರ ಆಪರೇಟಿವ್ಸ್‌ಗೆ ಹಂಚಿಕೊಳ್ಳುತ್ತಿದ್ದ ಆರೋಪದ ಮೇಲೆ ಪಂಜಾಬ್‌ನ ತರಣ್ ತರಣ್ ಜಿಲ್ಲೆಯ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಇಂದು ತಿಳಿಸಿದ್ದಾರೆ.

ಪಾಕಿಸ್ತಾನಿ ಗುಪ್ತಚರ ಆಪರೇಟಿವ್ಸ್ (ಪಿಐಒ) ಜೊತೆ ಹಂಚಿಕೊಂಡ ಮಾಹಿತಿಯನ್ನು ಒಳಗೊಂಡ ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಜೊತೆಯಲ್ಲಿ ಆರೋಪಿಯು ಸಂಪರ್ಕದಲ್ಲಿದ್ದನೆಂದು ಆರೋಪಿಸಲಾಗಿದೆ. ಸೂಕ್ಷ್ಮ ಮಾಹಿತಿಯನ್ನು ರವಾನಿಸಲು ಹಣವನ್ನು ಸಹ ಪಡೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತರಣ್‌ ಜಿಲ್ಲೆಯ ಮೊಹಲ್ಲಾ ರೋಡುಪುರದ ನಿವಾಸಿ ಗಗನ್‌ದೀಪ್ ಸಿಂಗ್ ಅಲಿಯಾಸ್ ಗಗನ್ ಎಂದು ಆರೋಪಿಯನ್ನು ಗುರುತಿಸಿರುವುದಾಗಿ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ತಿಳಿಸಿದ್ದಾರೆ.

ಇದನ್ನೂ ಓದಿರಿ: ಪಹಲ್ಗಾಮ್‌ ದಾಳಿ ಬಳಿಕ ಕಳೆಗುಂದಿದ ಕಾಶ್ಮೀರದ ʼಖೀರ್‌ ಭವಾನಿ ಮೇಳʼ

ತರಣ್ ತರಣ್ ಜಿಲ್ಲಾ ಪೊಲೀಸರು ಮತ್ತು ಪೊಲೀಸ್ ಕೌಂಟರ್ ಇಂಟೆಲಿಜೆನ್ಸ್ ವಿಭಾಗದ ಜಂಟಿ ಕಾರ್ಯಾಚರಣೆಯ ವೇಳೆ ಆತನ ಸೆರೆಯಾಗಿದೆ.

“ಬಂಧಿತ ಆರೋಪಿಯು ಐಎಸ್ಐ ಮತ್ತು ಪಾಕಿಸ್ತಾನ ಮೂಲದ ಖಲಿಸ್ತಾನಿ ಬೆಂಬಲಿಗ ಗೋಪಾಲ್ ಸಿಂಗ್ ಚಾವ್ಲಾ ಎಂಬಾತನೊಂದಿಗೆ ಸಂಪರ್ಕದಲ್ಲಿದ್ದನು. ಆಪರೇಷನ್ ಸಿಂಧೂರ್ ಸಮಯದಲ್ಲಿ ಸೇನಾ ಚಲನವಲನಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡಿದ್ದನು” ಎಂದು ಡಿಜಿಪಿಯವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿರಿ: ಪಹಲ್ಗಾಮ್ ದುರಂತ; ವಿಶೇಷ ಅಧಿವೇಶನಕ್ಕೆ ಇಂಡಿಯಾ ಬಣ ಆಗ್ರಹ

ಸೇನಾ ನಿಯೋಜನೆ ಮತ್ತು ಕಾರ್ಯತಂತ್ರದ ಸ್ಥಳಗಳು ಸೇರಿದಂತೆ ವರ್ಗೀಕೃತ ವಿವರಗಳನ್ನು ಹಂಚಿಕೊಳ್ಳುವಲ್ಲಿ ಆರೋಪಿ ನಿರತನಾಗಿದ್ದ. ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟು ಮಾಡುವ ಕೃತ್ಯ ಇದಾಗಿದೆ ಎಂದು ತನಿಖೆಯಿಂದ ತಿಳಿದು ಬಂದಿದೆ.

ಗಗನ್‌ದೀಪ್ ಕಳೆದ ಐದು ವರ್ಷಗಳಿಂದ ಖಲಿಸ್ತಾನಿ ಬೆಂಬಲಿಗ ಗೋಪಾಲ್ ಸಿಂಗ್ ಚಾವ್ಲಾನೊಂದಿಗೆ ಸಂಪರ್ಕದಲ್ಲಿದ್ದನು, ಆತನ ಮೂಲಕ ಗಗನ್‌ಗೆ ಪಿಐಒಗಳ ಪರಿಚಯವಾಯಿತು ಎಂದು ವಿವರಿಸಿದ್ದಾರೆ.

ಪಾಕಿಸ್ತಾನ ಪರ ಬೇಹುಗಾರಿಕೆ ಮಾಡುತ್ತಿರುವವರನ್ನು ಬಂಧಿಸುವಲ್ಲಿ ಸರ್ಕಾರ ಸಕ್ರಿಯವಾಗಿದೆ. ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿ ಆರು ಜನರ ಬಂಧನವಾಗಿತ್ತು. ಆನಂತರ ವೇತನ್ ಲಕ್ಷ್ಮಣ, ಅಜಯ್ ರವಿ ಎಂಬವರನ್ನು ಸೇರಿ ಎಂಟು ಜನರ ಅರೆಸ್ಟ್ ಆಗಿತ್ತು. ಬೆಂಗಳೂರಿನ ಬಿಇಎಲ್‌ನಲ್ಲಿ ಉದ್ಯೋಗಿಯಾಗಿದ್ದ ರಾಜ್ ದೀಪ್ ಎಂಬಾತ ಸೆರೆ ಸಿಕ್ಕಿದ್ದ. ಹರ್ಯಾಣದಲ್ಲಿ ದೇವೇಂದ್ರ ಎಂಬಾತನ ಬಂಧನವಾಗಿತ್ತು. ಗುಜರಾತ್‌ನ ಸಹದೇವ್ ಗೋಹಿಲ್‌ ಅರೆಸ್ಟ್ ಆಗಿದ್ದ. ಪಾಕಿಸ್ತಾನ ಪರ ಪೋಸ್ಟ್ ಹಾಕಿರುವ ಆರೋಪದ ಮೇಲೆ ಈವರೆಗೂ ಸುಮಾರು 81ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...