ಸಂಸತ್ತಿನ ಆವರಣದಲ್ಲಿರುವ ಗಾಂಧಿ, ಅಂಬೇಡ್ಕರ್, ಶಿವಾಜಿ ಪುತ್ಥಳಿ ಸ್ಥಳಾಂತರ: ಕಾಂಗ್ರೆಸ್ ಆಕ್ರೋಶ

Date:

ಸಂಸತ್ತಿನ ಆವರಣದಲ್ಲಿರುವ ಮಹಾತ್ಮ ಗಾಂಧಿ, ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಛತ್ರಪತಿ ಶಿವಾಜಿ ಪುತ್ಥಳಿಗಳು ಅವುಗಳ ನಿಯೋಜಿತ ಸ್ಥಳಗಳಲ್ಲಿ ಇರುವುದಿಲ್ಲ ಮಾತ್ರವಲ್ಲದೇ ಸಂಸತ್ತಿನ ಭದ್ರತಾ ಸಿಬ್ಬಂದಿಯ ಬದಲು ಅಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ ಕಾಣಿಸಿಕೊಳ್ಳಲಿದ್ದಾರೆ. ಈ ಬದಲಾವಣೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಹಲವು ವರ್ಷಗಳಿಂದ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದ ಸ್ಥಳದಲ್ಲಿ ಇದ್ದ 16 ಅಡಿ ಎತ್ತರದ ಕಂಚಿನ ಪ್ರತಿಮೆ ಆಕರ್ಷಣೆಯ ಕೇಂದ್ರ ಬಿಂದುವಾಗಿತ್ತು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕೂಡಾ ಇದನ್ನು ವಿರೋಧಿಸಿ “ಈ ಪ್ರತಿಮೆಗಳನ್ನು ಪ್ರಧಾನ ಸ್ಥಳವಾದ ಮುಂಭಾಗದಿಂದ ಸ್ಥಳಾಂತರಿಸಿರುವುದು ದುಷ್ಟ ಕ್ರಮ” ಎಂದು ಎಕ್ಸ್ ಪೋಸ್ಟ್‌ನಲ್ಲಿ ಟೀಕಿಸಿದ್ದಾರೆ.

ಈ ಕ್ರಮವನ್ನು ಅಮೇಥಿಯ ನೂತನ ಸಂಸದ ಕೆ.ಎಲ್.ಶರ್ಮಾ ತೀವ್ರವಾಗಿ ವಿರೋಧಿಸಿದ್ದಾರೆ. ಇದು ತೀರಾ ಕ್ಷುಲ್ಲಕ ಕ್ರಮ ಎಂದು ಅವರು ಎಕ್ಸ್ ಪೋಸ್ಟ್‌ನಲ್ಲಿ ಆಕ್ಷೇಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನರೊಂದಿಗೆ ನೊಂದು ಬೆಂದು ಬಂಗಾರವಾದ ರಾಹುಲ್ ಗಾಂಧಿ

ಹಿರಿಯ ಕಾಂಗ್ರೆಸ್ ಮುಖಂಡ ಪವನ್ ಖೇರಾ ಕೂಡಾ “ಬಿಜೆಪಿಗೆ ಮಹಾರಾಷ್ಟ್ರದಲ್ಲಿ ಜನ ಮತ ಹಾಕಿಲ್ಲ ಎಂಬ ಕಾರಣಕ್ಕೆ ಅಂಬೇಡ್ಕರ್ ಮತ್ತು ಶಿವಾಜಿ ಪುತ್ಥಳಿಯನ್ನು ಸ್ಥಳಾಂತರಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಸ್ಥಳಾಂತರವಾಗುವ ಪುತ್ಥಳಿಗಳು ಸಂಸತ್ ಸಂಕೀರ್ಣದ ಹಿಂಭಾಗದ ಪ್ರೇರಣ ಸ್ಥಳದಲ್ಲಿ ಸ್ಥಾಪನೆಯಾಗಲಿವೆ ಎಂದು ಲೋಕಸಭಾ ಸೆಕ್ರೆಟ್ರಿಯೇಟ್ ಪ್ರಕಟಣೆ ಹೇಳಿದೆ.

“ಸಂಸತ್ ಸಂಕೀರ್ಣದಲ್ಲಿ ಶ್ರೇಷ್ಠ ನಾಯಕರ ಮತ್ತು ಸ್ವಾತಂತ್ರ ಯೋಧರ ಪುತ್ಥಳಿಗಳನ್ನು ಬೇರೆ ಕಡೆಗಳಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ಸಂಕೀರ್ಣದ ಬೇರೆ ಸ್ಥಳಗಳಲ್ಲಿ ಇವುಗಳನ್ನು ಪ್ರತಿಷ್ಠಾಪನೆ ಮಾಡಿರುವ ಕಾರಣದಿಂದ, ಭೇಟಿ ನೀಡಿದವರು ಇದನ್ನು ಸುಲಭವಾಗಿ ನೋಡಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದ ಈ ಎಲ್ಲ ಪುತ್ಥಳಿಗಳನ್ನು ಗೌರವಯುತವಾಗಿ ಭವ್ಯ ಪ್ರೇರಣಾ ಸ್ಥಳದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ” ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

 

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...