ಸಹಪಾಠಿಗಳಿಂದಲೇ ಸಾಮೂಹಿಕ ಅತ್ಯಾಚಾರ; ವಿದ್ಯಾರ್ಥಿನಿ ಆತ್ಮಹತ್ಯೆ

Date:

11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಆಕೆಯ ಸಹಪಾಠಿಗಳೇ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಮತ್ತು ಆರೋಪಿಗಳ ಬ್ಲಾಕ್‌ಮೇಲ್‌ನಿಂದ ನೊಂದಿದ್ದ ಸಂತ್ರಸ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಕಳೆದ ಸೋಮವಾರ (ಡಿ.2) ತರಗತಿ ಮುಗಿದ ಬಳಿಕ ವಿದ್ಯಾರ್ಥಿನಿಯನ್ನು ಸಹಪಾಠಿಗಳು ಬಲವಂತವಾಗಿ ನಿರ್ಜನ ಸ್ಥಳಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಕೃತ್ಯವನ್ನು ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿಕೊಂಡು, ಅತ್ಯಾಚಾರದ ಬಗ್ಗೆ ಯಾರಿಗಾದರೂ ಹೇಳಿದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.

ತನ್ನ ಮೇಲಾದ ದೌರ್ಜನ್ಯದ ಬಗ್ಗೆ ವಿದ್ಯಾರ್ಥಿನಿ ಮಂಗಳವಾರ ತನ್ನ ತಾಯಿಗೆ ತಿಳಿಸಿದ್ದಳು. ಆದರೆ, ಕುಟುಂಬಸ್ಥರು ದೂರು ದಾಖಲಿಸಿರಲಿಲ್ಲ. ತನ್ನ ಮೇಲಾದ ದೌರ್ಜನ್ಯದಿಂದ ಎದೆಗುಂದದ ಬಾಲಕಿ ಶಾಲೆಗೆ ಹೋಗುತ್ತಿದ್ದರು. ಆದರೆ, ಆರೋಪಿ ಸಹಪಠಿಗಳು ಆಕೆಗೆ ಬ್ಲಾಕ್‌ಮೇಲ್ ಮಾಡಲು ಆರಂಭಿಸಿದ್ದರು. ಇದರಿಂದ ಬಾಲಕಿ ಮತ್ತಷ್ಟು ನೊಂದಿದ್ದರು. ಶುಕ್ರವಾರ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಗಳ ಸಾವಿನ ಬಳಿಕ, ಪೋಷಕರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಾಲ್ವರು ಆರೋಪಿ ಸಹಪಾಠಿಗಳ ವಿರುದ್ಧ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.

ವರದಿಯ ಪ್ರಕಾರ, ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣವನ್ನು ಆಕೆಯ ತಂದೆ ಗೌಪ್ಯವಾಗಿ ಪರಿಹರಿಸಲು ಪ್ರಯತ್ನಿಸಿದ್ದರು. ಅತ್ಯಾಚಾರವೆಸಗಿದ ಬಾಲಕರನ್ನು ಮನೆಗೆ ಕರೆಸಿ ಮಾತುಕತೆಗೂ ಮುಂದಾಗಿದ್ದರು. ಮಗಳಿಗೂ ಧೈರ್ಯ ತುಂಬಿದ್ದರು. ಆದರೆ, ಈ ನಡುವೆ ಆರೋಪಿ ಬಾಲಕರ ಉಪಟಳ ಹೆಚ್ಚಾಗಿದ್ದರಿಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

image 27

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...