ಅಪ್ರಾಪ್ತ ಬಾಲಕರಿಂದ ಸಾಮೂಹಿಕ ಅತ್ಯಾಚಾರ; ಬಾಲಕಿ ಆತ್ಮಹತ್ಯೆ

Date:

ಮೂವರು ಅಪ್ರಾಪ್ತ ಬಾಲಕರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 14 ವರ್ಷದ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ, ಅಮಾನುಷ ಘಟನೆ ಉತ್ತರ ಪ್ರದೇಶದ ಬುಲಂದರ್‌ಶಾ ಜಿಲ್ಲೆಯಲ್ಲಿ ನಡೆದಿದೆ.

ಅತ್ಯಾಚಾರ ಎಸಗಿದ್ದ ಆರೋಪಿಗಳ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ತಲೆ ಮರೆಸಿಕೊಂಡಿದ್ದಾರೆ. ಆರೋಪಿಗಳು 13 ರಿಂದ 17 ವರ್ಷದವರು ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ಕೃತ್ಯವು ಜೂನ್ 28ರಂದು ನಡೆದಿದೆ. ಆರೋಪಿಗಳು ಸಂತ್ರಸ್ತೆ ಬಾಲಕಿಯನ್ನು ಮತ್ತು ಆಕೆಯ ಎಳೆ ವಯಸ್ಸಿನ ತಮ್ಮನನ್ನು ಬೈಕ್‌ ಸವಾರಿಗಾಗಿ ಕರೆದೊಯ್ದಿದ್ದಾರೆ. ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಮತ್ತೆ ಬಂದ ನಾರಾಯಣ ಮೂರ್ತಿ; 70 ಗಂಟೆ ಆಯ್ತು, ಈಗ 100 ಗಂಟೆ ಕೆಲಸದ ಸರದಿ

ಮನೆಗೆ ಮರಳಿದ ಸಂತ್ರಸ್ತೆ, ತನ್ನ ಮೇಲಾದ ದೌರ್ಜನ್ಯದ ಬಗ್ಗೆ ತನ್ನ ತಾಯಿಯ ಬಳಿ ಹೇಳಿಕೊಂಡಿದ್ದಾಳೆ. ಬಳಿಕ, ಸಂತ್ರಸ್ತೆಯ ತಾಯಿಯು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ವಿರುದ್ಧ ಬಿಎನ್‌ಎಸ್‌ ಸೆಕ್ಷನ್ 70(2) ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 5/6 ಅನ್ವಯ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ತನಿಖೆ ನಡೆಯುತ್ತಿದೆ. ಆದರೆ, ಸಂತ್ರಸ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. “ಅತ್ಯಾಚಾರದ ಬಳಿಕ ಆಘಾತಕ್ಕೆ ಒಳಗಾಗಿದ್ದ ಬಾಲಕಿ ಹಲವು ದಿನಗಳಿಂದ ಮೌನವಾಗಿದ್ದಳು. ಆಕೆ ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದಳು” ಎಂದು ಸಂಬಂಧಿಗಳು ತಿಳಿಸಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...