ವಂಚನೆ ಪ್ರಕರಣ: ಗೌತಮ್‌ ಗಂಭೀರ್‌ ವಿರುದ್ಧದ ತನಿಖೆಗೆ ನ್ಯಾಯಾಲಯ ಆದೇಶ

Date:

ಫ್ಲ್ಯಾಟ್ ಖರೀದಿದಾರರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಇತರರನ್ನು ಆರೋಪಮುಕ್ತಗೊಳಿಸಿದ್ದ ಆದೇಶವನ್ನು ರದ್ದು ಮಾಡಿರುವ ದೆಹಲಿ ನ್ಯಾಯಾಲಯ ಹೊಸದಾಗಿ ತನಿಖೆಗೆ ಆದೇಶಿಸಿದೆ.

ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶ ರದ್ದು ಮಾಡಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶಾಲ್ ಗೋಗ್ನೆ, ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಆದೇಶವು ಗಂಭೀರ್ ವಿರುದ್ಧದ ಆರೋಪಗಳನ್ನು ನಿರ್ಧರಿಸುವಲ್ಲಿ ಅಸಮರ್ಪಕ ಅಭಿವ್ಯಕ್ತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

‘ಗಂಭೀರ್ ಅವರ ಮೇಲೆ ಬಂದಿರುವ ಆರೋಪವು ವಂಚನೆಯಲ್ಲಿ ಅವರ ಪಾತ್ರದ ಬಗ್ಗೆ ತನಿಖೆಗೆ ಪುಷ್ಠಿ ಒದಗಿಸುತ್ತದೆ’ ಎಂದು ಆದೇಶದಲ್ಲಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಿಯಲ್ ಎಸ್ಟೇಟ್ ಕಂಪನಿಗಳಾದ ರುದ್ರಾ ಬಿಲ್ಡ್‌ವೆಲ್ ರಿಯಾಲ್ಟಿ ಪ್ರೈವೇಟ್ ಲಿಮಿಟೆಡ್, ಎಚ್‌ಆರ್‌ಐಪಿ ಲಿಮಿಟೆಡ್,ಯುಎಂಎಎಕೆ ಲಿಮಿಟೆಡ್ ಮತ್ತು ಕಂಪನಿಗಳ ಜಂಟಿ ಉದ್ಯಮದ ನಿರ್ದೇಶಕ ಮತ್ತು ಬ್ರಾಂಡ್ ಅಂಬಾಸಿಡರ್ ಆಗಿದ್ದ ಗಂಭೀರ್ ವಿರುದ್ಧ ವಂಚನೆ ಆರೋಪದಡಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಕುಟುಂಬದವರು ಮನೆಯಲ್ಲಿದ್ದಾಗಲೇ ಕ್ರಿಕೆಟಿಗ ಬೆನ್ ಸ್ಟೋಕ್ಸ್ ಮನೆ ದರೋಡೆ: ಅಪಾರ ವಸ್ತು ಕಳವು

ಬ್ರಾಂಡ್ ಅಂಬಾಸಿಡರ್ ಆಗಿ ಹೂಡಿಕೆದಾರರೊಂದಿಗೆ ನೇರ ಸಂಪರ್ಕ ಹೊಂದಿರುವ ಏಕೈಕ ಆರೋಪಿ ಗಂಭೀರ್ ಆಗಿದ್ದು, ಆದರೂ ಅವರನ್ನು ಆರೋಪದಿಂದ ಮುಕ್ತಗೊಳಿಸಲಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಗಂಭೀರ್ ಅವರನ್ನು ಆರೋಪದಿಂದ ಮುಕ್ತಗೊಳಿಸಿರುವ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶದಲ್ಲಿ, ಗಂಭೀರ್ ರುದ್ರಾ ಬಿಲ್ಡ್ವೆಲ್ ರಿಯಾಲ್ಟಿ ಪ್ರೈವೇಟ್‌ಗೆ ₹6 ಕೋಟಿ ಪಾವತಿಸಿರುವ ಮತ್ತು ಕಂಪನಿಯಿಂದ ₹4.85 ಕೋಟಿ ಪಡೆದಿರುವ ಬಗ್ಗೆ ಉಲ್ಲೇಖವಿಲ್ಲ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ನಡೆದಿರುವ ವಂಚನೆ, ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ (ಪಿಎಂಎಲ್‌ಎ) ಅಡಿಯಲ್ಲಿ ಅನುಸೂಚಿತ ಅಪರಾಧವಾಗಿರುವುದರಿಂದ, ಪ್ರಕರಣವನ್ನು ಇ.ಡಿ ತನಿಖೆ ಮಾಡಬೇಕಾದ ಅಗತ್ಯ ಬೀಳಬಹುದು ಎಂದು ನ್ಯಾಯಾಲಯ ಅಭಿಮತ ವ್ಯಕ್ತಪಡಿಸಿದೆ

ದೆಹಲಿಯ ರೌಸ್‌ ಅವೆನ್ಯೂ ನ್ಯಾಯಾಲಯದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವಿಚಾರಣಾ ನ್ಯಾಯಾಲಯ ನೀಡಿದ ಆದೇಶದ ವಿರುದ್ಧ ಮೂರು ಪರಿಶೀಲನಾ ಅರ್ಜಿಗಳನ್ನು ಅದೇ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...