ಜಾತಿ ದೌರ್ಜನ್ಯ | ದಲಿತ ಮಹಿಳೆಯರಿಗೆ ತೆಂಗಿನ ಚಿಪ್ಪಿನಲ್ಲಿ ಚಹಾ ಕೊಟ್ಟ ಸವರ್ಣೀಯರು

Date:

ದಲಿತ ಮಹಿಳೆಯರಿಗೆ ತೆಂಗಿನ ಚಿಪ್ಪಿನಲ್ಲಿ ಚಹಾ ಕೊಟ್ಟಿರುವ ಘಟನೆ ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಸಂಬಂಧ ಇಬ್ಬರು ಮಹಿಳೆಯರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಧರ್ಮಪುರಿ ಜಿಲ್ಲೆಯ ಗೋಪಿನಾಥಂಪಟ್ಟಿಯಲ್ಲಿ ಘಟನೆ ನಡೆದ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಗೋಪಿನಾಥಂಪಟ್ಟಿಯಲ್ಲಿನ ಪ್ರಬಲ ಜಾತಿಯ ವ್ಯಕ್ತಿಯೊಬ್ಬರಿಗೆ ಸೇರಿದ ಜಮೀನಿನಲ್ಲಿ ಜಾತಿ ಶೋಷಣೆಯ ಕೃತ್ಯ ನಡೆದಿದೆ ಎಂದು ಕಂಬೈನಲ್ಲೂರು ಪೊಲೀಸರು ತಿಳಿಸಿದ್ದಾರೆ.

ಪೋಲಯಂಪಲ್ಲಿ ಗ್ರಾಮದ ನಾಲ್ವರು ದಲಿತ ಮಹಿಳೆಯರು – ಆರ್ ಶ್ರೀಪ್ರಿಯಾ (38), ವಿ ವೀರಮ್ಮಳ್ (55), ಕೆ ಮರಿಯಮ್ಮಳ್ (60) ಮತ್ತು ಜಿ ಸೆಲ್ವಿ (50) – ಗುರುವಾರ ಸವರ್ಣೀಯರ ಜಮೀನಿನಲ್ಲಿ ಕೆಲಸ ಮಾಡಲು ತೆರಳಿದ್ದರು. ಈ ವೇಳೆ, ಜಮೀನು ಮಾಲೀಕರ ತಾಯಿ ಎಸ್ ಚಿನ್ನತಾಯಿ ಮತ್ತು ಪತ್ನಿ ಬಿ ಧರಣಿ (35) ಕೆಲಸ ಮಾಡುತ್ತಿದ್ದ ಮಹಿಳೆಯರಿಗೆ ಚಹಾ ತಂದಿದ್ದಾರೆ. ಆದರೆ, ಅವರು ಲೋಟಗಳನ್ನು ತರದೆ, ತೆಂಗಿನ ಚಿಪ್ಪುಗಳನ್ನು ತಂದಿದ್ದರು. ಅವುಗಳಲ್ಲಿಯೇ ಚಹಾ ನೀಡಿದ್ದರುಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಜಾತಿ ದೌರ್ಜನ್ಯವನ್ನು ಕಂಡ ಯುವಕರು ತಮ್ಮ ಮೊಬೈಲ್‌ನಲ್ಲಿ ಘಟನೆಯನ್ನು ವಿಡಿಯೋ ಮಾಡಿದ್ದು, ಘಟನೆಯನ್ನು ಖಂಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ತೆಂಗಿನ ಚಿಪ್ಪಿನಲ್ಲಿ ಚಹಾ ಸ್ವೀಕರಿಸಿದ ನಾಲ್ವರಲ್ಲಿ ಒಬ್ಬರಾದ ಸೆಲ್ವಿ, “ಇಂತಹ ಘಟನೆಗಳು ನಮಗೆ ಹೊಸದಲ್ಲ. ಕೆಲಸ ಮಾಡುವಾಗ ಅನೇಕ ಕಡೆಗಳಲ್ಲಿ ಇಂತಹ ಪರಿಸ್ಥಿತಿಗಳನ್ನು ಎದುರಿದ್ದೇವೆ. ಅವೆಲ್ಲವೂ ಮರೆತುಹೋಗಿವೆ. ಇಂತಹ ಘಟನೆಗಳು ನಮಗೆ ಆಘಾತ ಉಂಟುಮಾಡುತ್ತವೆ. ಅವರು ತೆಂಗಿನ ಚಿಪ್ಪಿನಲ್ಲಿ ಚಹಾ ಕೊಡುತ್ತಾರೆಂದು ನಮಗೆ ತಿಳಿದಿದ್ದರೆ, ನಾವು ಅಲ್ಲಿ ಕೆಲಸಕ್ಕೆ ಹೋಗುತ್ತಿರಲಿಲ್ಲ. ಅವರ ಬಳಿ ಪ್ಲಾಸ್ಟಿಕ್ ಕಪ್ ಇದೆಯೇ ಎಂದು ನಾನು ಅವರನ್ನು ಕೇಳಿದೆ. ಆದರೆ, ಅವರು ಉತ್ತರಿಸಲಿಲ್ಲ” ಎಂದು ಹೇಳಿದ್ದಾರೆ.

ಚಿನ್ನತಾಯಿ ಮತ್ತು ಧರಣಿ – ಇಬ್ಬರೂ ತಾವು ಜಾತಿ ದೌರ್ಜನ್ಯ ಎಸಗಿದ್ದಾಗಿ ಒಪ್ಪಿಕೊಂಡಿದ್ದಾರೆ. ಅವರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ತಿದ್ದುಪಡಿ ಕಾಯ್ದೆ-2015ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...