ಅನುಕಂಪದ ಮೇಲೆ ಸರ್ಕಾರಿ ಉದ್ಯೋಗ ಪಡೆಯುವುದು ಸ್ಥಾಪಿತ ಹಕ್ಕಲ್ಲ: ಸುಪ್ರೀಂ ಕೋರ್ಟ್

Date:

ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಪಡೆಯುವುದು ಯಾವುದೇ ವ್ಯಕ್ತಿಯ ಸ್ಥಾಪಿತ ಹಕ್ಕಲ್ಲ. ಮಾತ್ರವಲ್ಲದೆ, ಸೇವೆಯಲ್ಲಿ ಇದ್ದಾಗಲೇ ಮೃತಪಡುವ ನೌಕರ ಹೊಂದಿರುವ ಸೇವಾ ಷರತ್ತು ಕೂಡ ಅಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

1997ರಲ್ಲಿ ಮೃತಪಟ್ಟ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರ ಪುತ್ರನಿಗೆ ಅನುಕಂಪ ಆಧಾರಿತ ಉದ್ಯೋಗ ನೀಡಲು ನಿರ್ದೇಶಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ನ್ಯಾಯಮೂರ್ತಿಗಳಾದ ಅಭಯ್‌ ಎಸ್‌.ಓಕಾ, ಅಹ್ಸಾನುದ್ದೀನ್ ಅಮಾನುಲ್ಲಾ ಹಾಗೂ ಆಗಸ್ಟಿನ್ ಜಾರ್ಜ್ ಮಸೀಹ್ ಅವರಿದ್ದ ಪೀಠವು ಅರ್ಜಿಯ ವಿಚಾರಣೆ ನಡೆಸಿದ್ದು ಅರ್ಜಿಯನ್ನು ವಜಾಗೊಳಿಸಿದೆ. “ಅನುಕಂಪದ ಆಧಾರದ ಮೇಲೆ ಉದ್ಯೋಗ ಪಡೆಯುವುದು ಸ್ಥಾಪಿತ ಹಕ್ಕಲ್ಲ. ನಿಗದಿತ ಸಮಯದೊಳಗೆ ಅರ್ಜಿ ಸಲ್ಲಿಸಿದರೆ ಮಾತ್ರ, ಅದನ್ನು ಪರಿಗಣಿಸಲಾಗುತ್ತದೆ” ಎಂದು ಹೇಳಿದೆ.

“ನೇಮಕಾತಿ ನೀತಿಗೆ ವಿರುದ್ದವಾಗಿ ಮತ್ತು ಕಾನೂನು ಬಾಹಿರವಾಗಿ ಒಬ್ಬರ ಪರವಾಗಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ಅನುಕಂಪ ಆಧಾರಿತ ನೇಮಕಾತಿಯು, ಮೃತರ ಕುಟುಂಬಕ್ಕೆ ಆ ಸಮಯದಲ್ಲಿ ತುರ್ತು ಆರ್ಥಿಕ ಸಹಾಯ ಮಾಡಲು ಇರುವುದೇ ಹೊರತು, ಅದು ಅವರ ಪರಿಪೂರ್ಣ ಹಕ್ಕಲ್ಲ” ಎಂದು ಪೀಠ ಸ್ಪಷ್ಟಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1997ರಲ್ಲಿ ಪಂಜಾಬ್‌ ಮೂಲದ ಜೈ ಪ್ರಕಾಶ್ ಎಂಬ ಪೊಲೀಸ್ ಕಾನ್‌ಸ್ಟೇಬಲ್ ಕರ್ತವ್ಯದ ವೇಳೆ ಸಾವನ್ನಪ್ಪಿದ್ದರು. ಆಗ ಅವರ ಮಗ ಟಿಂಕು ಕೇವಲ 7 ವರ್ಷದವನಾಗಿದ್ದ. ಪ್ರಕಾಶ್ ಪತ್ನಿ ಅನಕ್ಷರಸ್ಥೆಯಾಗಿದ್ದ ಕಾರಣ, ಅನುಕಂಪದ ಆಧಾರದಲ್ಲಿ ತನಗೆ ಉದ್ಯೋಗ ಕೊಡುವಂತೆ ಅವರು ಅರ್ಜಿ ಸಲ್ಲಿಸಿರಲಿಲ್ಲ. ಬದಲಾಗಿ, ಅಪ್ರಾಪ್ತ ಮಗ ವಯಸ್ಸಿಗೆ ಬಂದ ಬಳಿಕ ಆತನಿಗೆ ಉದ್ಯೋಗ ಕೊಡಬೇಕೆಂದು ಅರ್ಜಿ ಸಲ್ಲಿಸಲಾಗಿತ್ತು.

ಅವರ ಅರ್ಜಿಯನ್ನು ತಿರಸ್ಕರಿಸಿದ್ದ ಅಧಿಕಾರಿಗಳು, ‘ನೌಕರ ಸಾವನ್ನಪ್ಪಿದ 3 ವರ್ಷದೊಳಗೆ ಅರ್ಜಿ ಸಲ್ಲಿಸಬಹದು. ಆಗ ಮಾತ್ರವೇ ಪರಿಗಣಿಸಲಾಗುತ್ತದೆ’ ಎಂದಿದ್ದರು. ಸರ್ಕಾರ ಕೂಡ ಉದ್ಯೋಗ ಕೋರಿದ್ದ ಮನವಿ ತಿರಸ್ಕರಿಸಿತ್ತು. ಹಾಗಾಗಿ, ಕುಟುಂಬ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಸುಪ್ರೀಂ ಕೋರ್ಟ್ ಕೂಡ ಅರ್ಜಿಯನ್ನು ತಿರಸ್ಕರಿಸಿದೆ. ಆದಾಗ್ಯೂ, ಕುಟುಂಬಕ್ಕೆ ಆರ್ಥಿಕ ನೆರವು ಒದಗಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...