ಹೋಳಿ ಆಚರಣೆ ವೇಳೆ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ

Date:

ಹೋಳಿ ಹಬ್ಬದ ದಿನ ಮದ್ಯಪಾನ ಮಾಡಿ, ಹಬ್ಬ ಆಚರಿಸುತ್ತಿದ್ದ ವಿಕೃತ ದುಷ್ಕರ್ಮಿಗಳ ಗುಂಪೊಂದು ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಬಿಹಾರದ ದರ್ಭಾಂಗಾ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಹಳ್ಳಿಯೊಂದರಲ್ಲಿ ಮಾರ್ಚ್‌ 15ರಂದು ಘಟನೆ ನಡೆದಿದೆ. ಅಂದು ಹೋಳಿ ಹಬ್ಬ ಆಚರಿಸಲಾಗುತ್ತಿತ್ತು. ಅಂದಿನ ರಾತ್ರಿ ಸುಮಾರು 9 ಗಂಟೆಯ ಸಮಯದಲ್ಲಿ ಬಾಲಕಿ ಬಯಲು ಶೌಚಕ್ಕಾಗಿ ಮನೆಯಿಂದ ಹೊರ ಬಂದಿದ್ದಾಳೆ. ಆಗ, ಕಾಮುಕ ದುಷ್ಕರ್ಮಿಗಳ ಗುಂಪು ಆಕೆಯನ್ನು ಬಲವಂತವಾಗಿ ತೋಟಕ್ಕೆ ಎಳೆದೊಯ್ದು, ಸಾಮೂಹಿಕ ಅತ್ಯಾಚಾರ ಎಸಗಿದೆ. ಪ್ರಜ್ಞಾಹೀನಳಾಗಿದ್ದ ಬಾಲಕಿಯನ್ನು ಸ್ಥಳದಲ್ಲೇ ಬಿಟ್ಟು ಕಾಮುಕರು ಪರಾರಿಯಾಗಿದ್ದಾರೆ.

ಮರುದಿನ ಬೆಳಗ್ಗೆ ಆಕೆಯ ಕುಟುಂಬಸ್ಥರು ಆಕೆಯನ್ನು ಹುಡುಕಿದ್ದು, ತೋಟದಲ್ಲಿ ಪ್ರಜ್ಞಾಹೀನಳಾಗಿ ಆಕೆ ಬಿದ್ದಿರುವುದನ್ನು ಗಮನಿಸಿದ್ದಾರೆ. ಮನೆಗೆ ಕೊರೆದೊಯ್ದಿದ್ದಾರೆ. ಅತ್ಯಾಚಾರದ ಕೃತ್ಯವನ್ನು ಕಾಮುಕರು ವಿಡಿಯೋ ಮಾಡಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಬಾಲಕಿ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಟುಂಬಸ್ಥರು ಬಾಲಕಿಯನ್ನು ಸಂತೈಸಿದ್ದು, ಧೈರ್ಯ ತುಂಬಿದ್ದಾರೆ. ಬಳಿಕ, ಪೊಲೀಸ್‌ ಠಾಣೆಗೆ ಕರೆದೊಯ್ದು ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಆರೋಪಿಗಳ ಹೆಸರನ್ನು ಬಾಲಕಿ ಹೆಸರಿಸಿದ್ದಾರೆ.

“ಅವಮಾನಕ್ಕೆ ಹದರಿ ಘಟನೆ ನಡೆದ ದಿನ ನಾವು ಪೊಲೀಸರಿಗೆ ದೂರು ನೀಡಿರಲಿಲ್ಲ. ಆದರೆ, ಗ್ರಾಮದ ಹಲವರು ವಿಷಯ ತಿಳಿದ ಬಳಿಕ, ದೂರು ನೀಡುವಂತೆ ಸೂಚಿಸಿದರು. ಬಳಿಕ, ಬಹೆರಾ ಪೊಲೀಸ್ ಠಾಣೆಯಲ್ಲಿ 10 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ” ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ.

ಘಟನೆ ನಡೆದ ಒಂದು ವಾರದ ಬಳಿಕ, ಮಾರ್ಚ್ 25ರಂದು ದೂರು ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಪರಾಧದ ಸ್ಥಳವನ್ನು ಪರಿಶೀಲಿಸಿದ್ದು, ಸ್ಥಳದಲ್ಲಿ ರಕ್ತದ ಕಲೆಗಳು ಕಂಡುಬಂದಿವೆ ಎಂದು ವರದಿಯಾಗಿದೆ. ಇಬ್ಬರು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಈ ವರದಿ ಓದಿದ್ದೀರಾ?: ಸಾಮ್ರಾಜ್ಯಶಾಹಿ ಕ್ರೌರ್ಯ ಮತ್ತು ಮಾನಸಿಕ ಯುದ್ಧ ತಂತ್ರಗಳು

ಬಹೆರಾ ಪೊಲೀಸ್ ಠಾಣೆಯ ಅಧಿಕಾರಿ ಚಂದ್ರಕಾಂತ್ ಗೌಡ್ಡಿ, “ಘಟನೆಯ ಬಗ್ಗೆ ನಮಗೆ ಮಾಹಿತಿ ಬಂದ ತಕ್ಷಣ, ಎಫ್‌ಐಆರ್ ದಾಖಲಿಸಿದ್ದೇವೆ. ತನಿಖೆ ನಡೆಯುತ್ತಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ.

ದರ್ಭಾಂಗಾ ಗ್ರಾಮೀಣ ಎಸ್‌ಪಿ ಅಲೋಕ್ ಕುಮಾರ್, “ಪ್ರಕರಣವನ್ನು ಬಹಳ ತಡವಾಗಿ ದಾಖಲಿಸಲಾಗಿದೆ. ಆದ್ದರಿಂದ ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ. ತನಿಖೆ ನಡೆಯುತ್ತಿದೆ. ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತದೆ. ಯಾವುದೇ ಕಾರಣಕ್ಕೂ ಅಪರಾಧಿಗಳನ್ನು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...