13 ವರ್ಷದ ಬಾಲಕಿ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ಮೂವರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ.
ಇನ್‌ಸ್ಟಾಗ್ರಾಮ್‌ನಲ್ಲಿ ಬಾಲಕಿಗೆ ಪರಿಚಿತನಾಗಿದ್ದ ವ್ಯಕ್ತಿ ಮತ್ತು ಆತನ ಸ್ನೇಹಿತರು ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಮೂವರು ಆರೋಪಿಗಳಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
9ನೇ ತರಗತಿ ವಿದ್ಯಾರ್ಥಿನಿಯಾಗಿರುವ ಬಾಲಕಿ ಇನ್‌ಸ್ಟಾಗ್ರಾಮ್‌ನಲ್ಲಿ ಆರೋಪಿಯೊಬ್ಬನೊಂದಿಗೆ ಸ್ನೇಹ ಬೆಳೆಸಿ ಮತ್ತೊಬ್ಬ ವ್ಯಕ್ತಿಗೆ ಪರಿಚಯವಾಗಿದ್ದಳು. ಇಬ್ಬರೂ ಆಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಚಾಟ್ ಮಾಡುತ್ತಿದ್ದರು. ಜೂನ್ 1ರಂದು ಈ ಇಬ್ಬರು ಮತ್ತು ಇನ್ನೊಬ್ಬ ಆರೋಪಿ ಆಕೆಯನ್ನು ಭೇಟಿ ಮಾಡಲು ಆಕೆಯ ಹಳ್ಳಿಗೆ ತೆರಳಿದ್ದರು. ತಮ್ಮೊಂದಿಗೆ ಲಾಂಗ್‌ಡ್ರೈವ್‌ಗೆ ಬರುವಂತೆ ಬಾಲಕಿಯನ್ನು ಒತ್ತಾಯಿಸಿದ್ದರು” ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ನಿರಂಜನ್ ಶರ್ಮಾ ತಿಳಿಸಿದ್ದಾರೆ.
“ಅವರ ಬಲವಂತಕ್ಕೆ ಮಣಿದ ಬಾಲಕಿ ಅವರೊಂದಿಗೆ ಡ್ರೈವ್ ಹೋಗಲು ಒಪ್ಪಿಕೊಂಡಿದ್ದಾಳೆ. ಆಕೆಯನ್ನು ಕರೆದೊಯ್ದ ಆರೋಪಿಗಳಲ್ಲಿ ಓರ್ವ ಕಾಮುಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಒಬ್ಬ ಕಾರನ್ನು ಚಲಾಯಿಸಿದರೆ, ಮತ್ತೊಮ್ಮ ಕೃತ್ಯವನ್ನು ವಿಡಿಯೋ ಮಾಡಿಕೊಂಡಿದ್ದಾನೆ” ಆರೋಪಿಸಲಾಗಿದೆ.
ಕೃತ್ಯದ ವಿಡಿಯೋವನ್ನು ಇಟ್ಟುಕೊಂಡು ಬ್ಲಾಕ್‌ಮೇಲ್ ಮಾಡುತ್ತಿದ್ದ ಕಾಮುಕರು, ಪದೇ-ಪದೇ ಬಾಲಕಿಯನ್ನು ಭೇಟಿ ಮಾಡಲು ಕರೆಯುತ್ತಿದ್ದರು. ಭೇಟಿ ಮಾಡಲು ಬರಲಿದ್ದರೆ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಪೊಲೀರು ತಿಳಿಸಿದ್ದಾರೆ.
ಬಾಲಕಿ ಆರೋಪಿಗಳ ಬೆದರಿಕೆಗೆ ಮಣಿಯದಿದ್ದಾಗ, ಕೃತ್ಯದ ವಿಡಿಯೋವನ್ನು ಹರಿಬಿಡಲಾಗಿದೆ. ಬಳಿಕ, ಬಾಲಕಿಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಇಬ್ಬರನ್ನು ಬಂಧಿಸಿದ್ದು, ಮುರನೇ ಆರೋಪಿಗಾಗಿ ಶೋಧ ನಡೆಯುತ್ತಿದೆ ಎಂದು ವರದಿಯಾಗಿದೆ.
ಅಪರಾಧಕ್ಕೆ ಬಳಸಿದ್ದ ಮೊಬೈಲ್ ಫೋನ್ ಮತ್ತು ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.




