ಒಡಿಶಾ | ಅಪರಿಚಿತರು ಬೆಂಕಿ ಹಚ್ಚಿದ್ದ ಆರೋಪ: 15ರ ಬಾಲಕಿ ದೆಹಲಿ ಏಮ್ಸ್‌ನಲ್ಲಿ ಸಾವು

Date:

ಜುಲೈ 19ರಂದು ಒಡಿಶಾದ ಪುರಿ ಜಿಲ್ಲೆಯಲ್ಲಿ ಮೂವರು ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು ಎಂದು ಆರೋಪಿಸಲಾಗಿದ್ದ 15 ವರ್ಷದ ಬಾಲಕಿ ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ ಎಂದು ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಶನಿವಾರ ದೃಢಪಡಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಒಡಿಶಾ ಸಿಎಂ, “ಬಲಂಗ ಘಟನೆಯಲ್ಲಿ ಬಲಿಯಾದವರ ಸಾವಿನ ಸುದ್ದಿ ಕೇಳಿ ನನಗೆ ತುಂಬಾ ದುಃಖವಾಗಿದೆ. ಸರ್ಕಾರದ ಎಲ್ಲಾ ಪ್ರಯತ್ನಗಳು ಮತ್ತು ದೆಹಲಿಯ ಏಮ್ಸ್‌ನ ತಜ್ಞ ವೈದ್ಯಕೀಯ ತಂಡದ ನಿರಂತರ ಪ್ರಯತ್ನಗಳ ಹೊರತಾಗಿಯೂ ನಮಗೆ ಬಾಲಕಿಯ ಜೀವವನ್ನು ಉಳಿಸಲು ನಮಗೆ ಸಾಧ್ಯವಾಗಲಿಲ್ಲ” ಎಂದು ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ನವೀನ್ ಪಟ್ನಾಯಕ್ ಬಾಲಕಿಯ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ಇದನ್ನು ಓದಿದ್ದೀರಾ? ಒಡಿಶಾ | 15ರ ಬಾಲಕಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ಶೇ. 70ರಷ್ಟು ಸುಟ್ಟ ದೇಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ತಿಂಗಳ 19ರಂದು ಬಾಲಕಿ ತನ್ನ ಸ್ನೇಹಿತರ ಮನೆಯಿಂದ ಹಿಂತಿರುಗುತ್ತಿದ್ದಾಗ ಬಲಂಗಾ ಪೊಲೀಸ್ ಠಾಣೆಯ ಬಯಾಬರ್ ಗ್ರಾಮದ ಬಳಿಯ ಭಾರ್ಗಬಿ ನದಿಯ ದಡದಲ್ಲಿ ಮೋಟಾರ್ ಸೈಕಲ್‌ನಲ್ಲಿ ಬಂದ ಮೂವರು ಯುವಕರು ಬಾಲಕಿಯನ್ನು ಬಲವಂತವಾಗಿ ಭಾರ್ಗವಿ ನದಿಯ ದಡಕ್ಕೆ ಕರೆದೊಯ್ದು ಆಕೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಸ್ಥಳೀಯರು ಬಾಲಕಿಯ ಬೆಂಕಿ ನಂದಿಸಿ ಆಕೆಯನ್ನು ಪಿಪಿಲಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿಂದ ಆಕೆಯನ್ನು ಭುವನೇಶ್ವರದ ಏಮ್ಸ್‌ಗೆ ಸ್ಥಳಾಂತರಿಸಲಾಗಿತ್ತು. ಬಳಿಕ ದೆಹಲಿಯ ಏಮ್ಸ್ ಆಸ್ಪತ್ರೆಗೆ ಏರ್‌ಲಿಫ್ಟ್ ಮಾಡಲಾಗಿದೆ. ಆದರೆ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಇನ್ನು ಒಡಿಶಾ ಪೊಲೀಸರು ತಮ್ಮ ತನಿಖೆಯಲ್ಲಿ ಘಟನೆಯಲ್ಲಿ ಬೇರೆ ಯಾವುದೇ ವ್ಯಕ್ತಿಯ ಪಾತ್ರದ ಬಗ್ಗೆ ಪುರಾವೆಗಳು ಕಂಡುಬಂದಿಲ್ಲ ಎಂದು ಹೇಳಿದ್ದಾರೆ. “ಬಲಂಗಾ ಘಟನೆಯಲ್ಲಿ ಸಂತ್ರಸ್ತ ಬಾಲಕಿಯ ಸಾವಿನ ಸುದ್ದಿ ಕೇಳಿ ನಮಗೆ ತುಂಬಾ ದುಃಖವಾಗಿದೆ. ಪೊಲೀಸರು ಅತ್ಯಂತ ಪ್ರಾಮಾಣಿಕತೆಯಿಂದ ತನಿಖೆ ನಡೆಸಿದ್ದಾರೆ. ತನಿಖೆ ಅಂತಿಮ ಹಂತವನ್ನು ತಲುಪಿದೆ. ಇಲ್ಲಿಯವರೆಗೆ ನಡೆಸಿದ ತನಿಖೆಯ ಪ್ರಕಾರ, ಬೇರೆ ಯಾರೂ ಭಾಗಿಯಾಗಿಲ್ಲ ಎಂಬುದು ಸ್ಪಷ್ಟವಾಗಿದೆ. ಆದ್ದರಿಂದ ಈ ಘಟನೆ ಬಗ್ಗೆ ಯಾವುದೇ ಸೂಕ್ಷ್ಮ ಹೇಳಿಕೆಗಳನ್ನು ನೀಡದಂತೆ ನಾವು ಎಲ್ಲರನ್ನೂ ವಿನಂತಿಸುತ್ತೇವೆ” ಎಂದು ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಶುಕ್ರವಾರ, ಒಡಿಶಾ ಪೊಲೀಸರು ದೆಹಲಿಯ ಏಮ್ಸ್‌ನಲ್ಲಿ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

ಈ ನಡುವೆ “ನನ್ನ ಮಗಳ ಸಾವಿನ ಬಗ್ಗೆ ರಾಜಕೀಯ ಮಾಡಬೇಡಿ. ಸರ್ಕಾರ ಸಾಧ್ಯವಾದಷ್ಟು ಸಹಕರಿಸಿದೆ. ನನ್ನ ಮಗಳು ಮಾನಸಿಕ ಖಿನ್ನತೆಯಿಂದ ಪ್ರಾಣ ಕಳೆದುಕೊಂಡಿದ್ದಾಳೆ” ಎಂದು ಬಾಲಕಿಯ ತಂದೆ ಹೇಳಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...