ಕರ್ನಾಟಕದ ನೀರಾವರಿ ಯೋಜನೆಗಳಿಗೆ ಬಾಕಿ ಇರುವ ಅನುಮತಿ, ಅನುದಾನ ನೀಡಿ: ಕೇಂದ್ರಕ್ಕೆ ಡಿಕೆಶಿ ಮನವಿ

Date:

“ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯಕ್ಕೆ ಬಾಕಿ ಇರುವ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು” ಎಂದು ಕೇಂದ್ರ ಸರ್ಕಾರಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದರು.

ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ “2047ರಲ್ಲಿ ಭಾರತ ಜಲ ಸಮೃದ್ಧಿ ರಾಷ್ಟ್ರ” ಎಂಬ 2ನೇ ಅಖಿಲ ಭಾರತ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಮ್ಮೇಳನದಲ್ಲಿ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು.

“ಕರ್ನಾಟಕ ರಾಜ್ಯದ ಯೋಜನೆಗಳಿಗೆ ಕೇಂದ್ರ ಜಲಶಕ್ತಿ ಸಚಿವಾಲಯವು ಆದ್ಯತೆ ಮೇರೆಗೆ ಅಗತ್ಯ ಕ್ರಮ ಕೈಗೊಂಡು ಅನುಮತಿ ಕೊಡಿಸಬೇಕು. ಮೇಕೆದಾಟು ಯೋಜನೆಗೆ ಡಿಪಿಆರ್ ಪರಿಗಣಿಸಿ, ಅನುಮತಿ ನೀಡುವಂತೆ ಸಿಡಬ್ಲ್ಯೂಸಿಗೆ ನಿರ್ದೇಶನ ನೀಡಬೇಕು. ಇದರಿಂದ ತಮಿಳುನಾಡಿಗೆ ಪ್ರತಿ ತಿಂಗಳ ಲೆಕ್ಕಾಚಾರದ ನೀರು ನೀಡಬಹುದು. ಜತೆಗೆ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮತ್ತು ಬೆಂಗಳೂರಿನ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮೈಸೂರು | ಗ್ರಾಮಾಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ :ಕರ್ನಾಟಕ ರಾಜ್ಯ ರೈತ ಸಂಘದ ಬೆಂಬಲ

“2023-24ರ ಕೇಂದ್ರ ಬಜೆಟ್‌ನಲ್ಲಿ ಮಧ್ಯ ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಒದಗಿಸಲು ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದರೂ ಈವರೆಗೂ ಹಣ ಬಿಡುಗಡೆಯಾಗಿಲ್ಲ. ಹೀಗಾಗಿ ಶೀಘ್ರವೇ ಯೋಜನೆ ಪೂರ್ಣಗೊಳಿಸಲು ಹಣ ಬಿಡುಗಡೆ ಮಾಡುವಂತೆ ಸಚಿವಾಲಯಕ್ಕೆ ವಿನಂತಿಸುತ್ತೇನೆ” ಎಂದರು.

“2011ರ ಸೆಪ್ಟೆಂಬರ್ 16ರಂದು ನೀಡಿರುವ ತೀರ್ಪಿನಲ್ಲಿ ಕೆಲವು ಬದಲಾವಣೆ ಮಾಡಲು ಸರ್ವೋಚ್ಛ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಜತೆಗೆ ಕೃಷ್ಣಾ ಜಲ ವಿವಾದ ನ್ಯಾಯಮಂಡಳಿಯು (KWDT-II) 2010ರಲ್ಲಿ ನೀಡಿರುವ ತೀರ್ಪಿನ ಅನ್ವಯ ತನಗೆ ಮೀಸಲಾಗಿರುವ ನೀರನ್ನು ಕರ್ನಾಟಕ ಬಳಸಿಕೊಳ್ಳಲು ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ವಿನಂತಿಸಿಕೊಳ್ಳುತ್ತೇನೆ” ಎಂದು ಹೇಳಿದರು.

“ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಮೇಲೆ ಒತ್ತಡ ತಂದು, 2018ರ ಆಗಸ್ಟ್ ನಲ್ಲಿ ಮಹದಾಯಿ ಜಲ ವಿವಾದ ನ್ಯಾಯಮಂಡಳಿ ನೀಡಿದ ತೀರ್ಪಿನ ಅನ್ವಯ ಕಳಸಾ ನಾಲಾ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮತಿ ದೊರಕಿಸಿಕೊಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ಜಲಶಕ್ತಿ ಸಚಿವಾಲಯವು ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ಮೇಲೆ ಒತ್ತಡ ಹೇರಿ, ನದಿ ಜೋಡಣೆ ಯೋಜನೆಯಡಿ ಗೋದಾವರಿ- ಕಾವೇರಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯದ ಪಾಲನ್ನು ಮರುಪರಿಶೀಲನೆ ಮಾಡಬೇಕು. ಈ ಯೋಜನೆಯಡಿ ಪ್ರಸ್ತುತ ಕರ್ನಾಟಕಕ್ಕೆ ಕೇವಲ 15.891 ಟಿಎಂಸಿ (ಶೇ. 10.74) ನೀರನ್ನು ಮಾತ್ರ ಹಂಚಿಕೆ ಮಾಡಲಾಗಿದೆ” ಎಂದರು.

ಇದನ್ನು ಓದಿದ್ದೀರಾ? ಬೆಳಗಾವಿ | ಡಿಕೆಶಿ ಜೊತೆ ಸುರ್ಜೇವಾಲ ಪ್ರತ್ಯೆಕ ಸಭೆ!

“ನಮ್ಮ ದೇಶವು ಪ್ರಪಂಚದ ಶೇ.18 ರಷ್ಟು ಜನಸಂಖ್ಯೆ ಹೊಂದಿದೆ. ಆದರೆ ಶೇ. 4 ರಷ್ಟು ಮಾತ್ರ ಶುದ್ದ ಕುಡಿಯುವ ನೀರಿನ ಮೂಲವನ್ನು ಹೊಂದಿದೆ. ಹೀಗಾಗಿ ಮುಂಬರುವ ದಿನಗಳಲ್ಲಿ ದೇಶವು ಸಾಕಷ್ಟು ಸವಾಲು ಎದುರಿಸಬೇಕಿದೆ. ಕೃಷಿ ಅಗತ್ಯಗಳಿಗೆ, ಬೆಳೆಯುತ್ತಿರುವ ಜನಸಂಖ್ಯೆಗೆ, ನಗರಗಳ ವಿಸ್ತರಣೆಗೆ, ಕೈಗಾರಿಕೆಗಳಿಗೆ ನೀರು ಬೇಡಿಕೆ ಪೂರೈಸಲು ಈಗಿನಿಂದಲೇ ಸನ್ನದ್ಧವಾಗಿರಬೇಕು” ಎಂದು ಹೇಳಿದರು.

“ದೇಶದಲ್ಲಿ ಈವರೆಗೆ ಸುಮಾರು 253 ಶತಕೋಟಿ ಘನ ಮೀಟರ್ (ಬಿಸಿಎಂ) ನೀರಿನ ಸಂಗ್ರಹಣಾ ಸಾಮರ್ಥ್ಯವಿದೆ. ನಮ್ಮ ದೇಶವು ಸುಸ್ಥಿರ ಪ್ರಗತಿ ಸಾಧಿಸಲು ನೀರಿನ ಸಂಪನ್ಮೂಲ ಬಲಪಡಿಸುವ ಅಗತ್ಯವಿದೆ. ನೀರಿನ ಸಂಗ್ರಹ ಸಾಮರ್ಥ್ಯ ಮತ್ತು ಜಿಡಿಪಿ ಬೆಳವಣಿಗೆ ನಡುವೆ ನೇರ ಸಂಬಂಧವಿದೆ ಎಂದು ಅನೇಕ ತಜ್ಞರು ಹೇಳಿದ್ದಾರೆ” ಎಂದರು.

“ನೀರು ವಿಶಿಷ್ಟ ಸಂಪನ್ಮೂಲ. ಸುಸ್ಥಿರ ಆರ್ಥಿಕ ಬೆಳವಣಿಗೆಗೆ, ಮಾನವನ ಮೂಲಭೂತ ಅಗತ್ಯ ಪೂರೈಸಲು, ಪರಿಸರ ಸಮತೋಲನ ಕಾಯ್ದುಕೊಳ್ಳಲು ನೀರು ಮೂಲಾಧಾರ. ಹವಾಮಾನ ಬದಲಾವಣೆ, ಹೆಚ್ಚುತ್ತಿರುವ ನೀರಿನ ಮಾಲಿನ್ಯ ಮತ್ತು ವಿವಿಧ ವಲಯಗಳು ಅಥವಾ ಬಳಕೆದಾರರ ನಡುವಿನ ಸ್ಪರ್ಧೆಯಿಂದ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಸಿದ್ದರಾಮಯ್ಯರನ್ನು ಇಳಿಸಿದರೆ ಪಕ್ಷ ಮುಳುಗುತ್ತದೆ ಎಂಬ ಭಯವೇ: ಡಿಕೆಶಿಗೆ ಅಶೋಕ್‌ ಪ್ರಶ್ನೆ

“ಕರ್ನಾಟಕವು ಪರಿಣಾಮಕಾರಿ ನಿರ್ವಹಣೆ ಮತ್ತು ನೀರಿನ ಬಳಕೆಯ ದಕ್ಷತೆಯನ್ನು ಸಾಧಿಸಲು ಅನೇಕ ಸುಧಾರಣೆಗಳನ್ನು ಜಾರಿಗೆ ತಂದಿದೆ. ನೀರಾವರಿ ಮತ್ತು ಕುಡಿಯುವ ನೀರಿನ ಕಾಮಗಾರಿಗಳಿಂದ ಅಕ್ರಮವಾಗಿ ನೀರು ಬಳಸಿಕೊಳ್ಳುವುದನ್ನು ತಡೆಯಲು ಕರ್ನಾಟಕ ನೀರಾವರಿ ಕಾಯ್ದೆಗೆ 1965ಕ್ಕೆ, 2024ರ ಆಗಸ್ಟ್‌ನಲ್ಲಿ ತಿದ್ದುಪಡಿ ಮಾಡಲಾಯಿತು. ಕಾಲುವೆಗಳ ಮೂಲಕ ಅಕ್ರಮವಾಗಿ ನೀರು ಮೇಲೆತ್ತುವುದನ್ನು ತಪ್ಪಿಸಿ, ಕಾಲುವೆ ಕೊನೆ ಭಾಗದ ರೈತರಿಗೆ ನೀರು ಹೋಗುವಂತೆ ಮಾಡಲು ಈ ತಿದ್ದುಪಡಿ ಮಾಡಲಾಗಿದೆ. ಇದರ ವ್ಯಾಜ್ಯಗಳ ವಿಚಾರಣೆಗೆ ನೀರಾವರಿ ನ್ಯಾಯಾಲಯ ಸ್ಥಾಪನೆಗೆ ಅಗತ್ಯ ಸೆಕ್ಷನ್‌ಗಳನ್ನು ಕಾಯ್ದೆಯಲ್ಲಿ ಸೇರಿಸಲಾಗಿದೆ, ಅಕ್ರಮಗಳ ವಿಚಾರಣೆ ನಡೆಸಲು ಅಧಿಕಾರಿಗಳಿಗೆ ಸೂಕ್ತ ಅಧಿಕಾರ ನೀಡಲಾಗಿದ್ದು, ಪೊಲೀಸರನ್ನು ಒಳಗೊಂಡ ಕಾರ್ಯಪಡೆಗೆ ಅವಕಾಶ ನಿಡುವ ಕುರಿತು ಈ ತಿದ್ದುಪಡಿ ಮಾಡಲಾಗಿದೆ” ಎಂದು ತಿಳಿಸಿದರು.

“ನೀರಾವರಿ ವಲಯದ ಪರಿಣಾಮಕಾರಿ ನಿರ್ವಹಣೆಗೆ ಉತ್ತೇಜನ ನೀಡುವ ಉದ್ದೇಶದಿಂದ ನೂತನ ರಾಜ್ಯ ಜಲ ನೀತಿಯನ್ನು 2022ರಲ್ಲಿ ಜಾರಿಗೆ ತರಲಾಯಿತು. ಜಲ ಸಂರಕ್ಷಣೆ ಹಾಗೂ ಆರೋಗ್ಯ, ಆಹಾರ, ಇಂಧನ, ಪರಿಸರ ಉದ್ದೇಶಕ್ಕೆ ನೀರಿನ ಮೂಲಗಳ ಸಮರ್ಪಕ ಬಳಕೆಗೆ ಒತ್ತು ನೀಡಲು ಕೆಲವು ಕ್ರಮಗಳನ್ನು ಕೈಗೊಳ್ಳಬೇಕಿದೆ. ಅವುಗಳೆಂದರೆ, ಪ್ರಸ್ತುತ ಜಲ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 29 ವಿವಿಧ ಶಾಸನಗಳಿದ್ದು, ಆ ಪೈಕಿ 14 ಕೇಂದ್ರ ಸರ್ಕಾರ ಹಾಗೂ 15 ರಾಜ್ಯ ಸರ್ಕಾರಗಳ ಕಾಯ್ದೆಗಳಾಗಿವೆ. ಮುಂದಿನ ದಿನಗಳಲ್ಲಿ ನೀರಿನ ಪರಿಣಾಮಕಾರಿ ಬಳಕೆಗೆ ಇನ್ನಷ್ಟು ತಿದ್ದುಪಡಿ ಮಾಡುವುದರ ಜತೆಗೆ ಹೊಸ ಕಾಯ್ದೆಗಳನ್ನು ಜಾರಿಗೆ ತರಬೇಕು. ಅಧಿಕಾರಗಳು, ಪ್ರಾಧಿಕಾರಗಳು, ಸಿಬ್ಬಂದಿ ಮತ್ತು ಸಂಪನ್ಮೂಲಗಳೊಂದಿಗೆ ಹೊಸ ಆಡಳಿತ ಸಂಸ್ಥೆಗಳ ಸ್ಥಾಪನೆ ಮಾಡಬೇಕು. ಸರ್ಕಾರಿ ಇಲಾಖೆಗಳ, ಸಂಸ್ಥೆಗಳ ಪುನರ್‌ ರಚನೆ. ಇವುಗಳ ನಿರ್ವಹಣೆಗಾಗಿ ನೂತನ ನಿರ್ದಿಷ್ಟ ಕಾರ್ಯಾಚರಣಾ ಪ್ರಕ್ರಿಯೆಗಳ (Standard Operating Procedures) ಅಭಿವೃದ್ಧಿ ಮತ್ತು ಅಳವಡಿಕೆ ಮಾಡಿಕೊಳ್ಳಬೇಕಿದೆ” ಎಂದು ತಿಳಿಸಿದರು.

“ಕೇಂದ್ರ ಸಚಿವರು ಕರ್ನಾಟಕದ ಬಾಕಿ ಇರುವ ಸಮಸ್ಯೆಗಳನ್ನು ಪರಿಗಣಿಸಲು ಮತ್ತು ಪರಿಹರಿಸಬೇಕಾಗಿ ಮನವಿ ಮಾಡುತ್ತೇನೆ. ಉತ್ತಮ ಸಂದರ್ಭದಲ್ಲಿ ನೀರಿನ ಕುರಿತು ಜಲ ಸಮ್ಮೇಳನವನ್ನು ಆಯೋಜಿಸಿದ್ದಕ್ಕಾಗಿ ಜಲಶಕ್ತಿ ಸಚಿವಾಲಯಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...