ಜಂತರ್ ಮಂತರ್‌ಗೆ ಹೋಗಿ, ಮಹಿಳಾ ಕುಸ್ತಿಪಟುಗಳ ‘ಮನ್ ಕಿ ಬಾತ್’ ಆಲಿಸಿ; ಮೋದಿಗೆ ಕಪಿಲ್ ಸಿಬಲ್

Date:

ಜಂತರ್ ಮಂತರ್‌ಗೆ ಹೋಗಿ ಪ್ರತಿಭಟನಾ ನಿರತ ಮಹಿಳಾ ಕುಸ್ತಿಪಟುಗಳ ‘ಮನ್ ಕಿ ಬಾತ್’ ಆಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಸೋಮವಾರ ಒತ್ತಾಯಿಸಿದ್ದಾರೆ.

ಪ್ರಧಾನಿ ಮೋದಿ ಅವರು ಭಾನುವಾರ ತಮ್ಮ 100ನೇ ಸಂಚಿಕೆಯ ‘ಮನ್‌ ಕಿ ಬಾತ್’ ರೇಡಿಯೋ ಕಾರ್ಯಕ್ರಮವನ್ನು ಪ್ರಸಾರ ಮಾಡಿದ್ದಾರೆ. ಅವರ ಕಾರ್ಯಕ್ರಮದ ಬಗ್ಗೆ ಕಪಿಲ್ ಸಿಬಲ್ ಪ್ರತಿಕ್ರಿಯಿಸಿದ್ದು, “ಹೋರಾಟನಿರತ ಮಹಿಳಾ ಕುಸ್ತಿಪಟುಗಳ ‘ಮನ್‌ ಕಿ ಬಾತ್’ (ಮನದ ಮಾತು)ಅನ್ನು ಪ್ರಧಾನಿ ಕೇಳಬೇಕು. ಹೀಗೆ ಮಾಡುವುದರಿಂದ ಅವರ ನೋವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಮೋದಿ ಅವರು ಪ್ರಜೆಗಳ ನೋವನ್ನೂ ಅರಿಯಲು ಸಿದ್ದರಿದ್ದಾರೆ ಎಂಬುದನ್ನು ತೋರಿಸುತ್ತದೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿಬಲ್, “ಮೋದಿಜೀ: ನಿಮ್ಮ 100ನೇ ‘ಮನ್ ಕಿ ಬಾತ್’ ಗೆ ಅಭಿನಂದನೆಗಳು. ಮೋದಿಜೀ ನಿಮಗೆ ಸಮಯವಿದ್ದರೆ ದಯವಿಟ್ಟು ಜಂತರ್ ಮಂತರ್‌ಗೆ ಹೋಗಿ ಮತ್ತು ಪ್ರತಿಭಟನಾ ನಿರತ ಮಹಿಳಾ ಕುಸ್ತಿಪಟುಗಳ ‘ಮನ್ ಕಿ ಬಾತ್’ ಅನ್ನು ಆಲಿಸಿ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಪ್ರಧಾನಿ ಅವರ ನೋವನ್ನು ಅರ್ಥಮಾಡಿಕೊಳ್ಳಲು ಸಿದ್ಧರಿದ್ದಾರೆ ಎಂದು ಅದು ತೋರಿಸುತ್ತದೆ!” ಸಿಬಲ್ ಹೇಳಿದ್ದಾರೆ.

ಬಿಜೆಪಿ ಸಂಸದ, ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ತಮಗೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಎಂದು ಏಳು ಮಹಿಳಾ ಕುಸ್ತಿಪಟುಗಳು ಆರೋಪಿಸಿದ್ದಾರೆ. ಅವರನ್ನು ಬಂಧಿಸಿ, ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬ್ರಿಜ್ ಭೂಷಣ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲು ಮೊದಲು ನಿರಾಕರಿಸಿದ್ದ ಪೊಲೀಸರು ಶುಕ್ರವಾರ ಎರಡು ಎಫ್‌ಐಆರ್‌ ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಂದ ಪ್ರತಿಭಟನಾನಿರತ ಕುಸ್ತಿಪಟುಗಳ ಭೇಟಿ | ತಬ್ಬಿ ಸಂತೈಸಿದ ನಾಯಕಿ

ಮೊದಲ ಎಫ್‌ಐಆರ್ ಅಪ್ರಾಪ್ತ ಕುಸ್ತಿಪಟುವಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ದಾಖಲಾಗಿದೆ. ಮಹಿಳೆಯರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಭಾರತೀಯ ದಂಡ ಸಂಹಿತೆ ವಿವಿಧ ಸೆಕ್ಷನ್‌ಗಳ ಅಡಿ ಎರಡನೇ ಎಫ್‌ಐಆರ್‌ ದಾಖಲಾಗಿದೆ.

ಸಿಂಗ್ ಅವರನ್ನು ಬಂಧಿಸುವವರೆಗೂ ಪ್ರತಿಭಟನೆಯನ್ನು ಕೈಬಿಡುವುದಿಲ್ಲ ಎಂದು ಕುಸ್ತಿಪಟುಗಳು ಪಟ್ಟುಹಿಡಿದಿದ್ದಾರೆ. ಮಹಿಳಾ ಕ್ರೀಡಾಪಟುಗಳ ಹೋರಾಟಕ್ಕೆ ದೇಶದ ಹಲವಾರು ಅಂತಾರಾಷ್ಟ್ರೀಯ ಕ್ರಿಡಾಪಟುಗಳು ಬೆಂಬಲ ನೀಡಿದ್ದಾರೆ. “ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ತನಿಖೆ ನಡೆಸಬೇಕು. ತನಿಖಾ ವರದಿಯನ್ನು ಸರ್ಕಾರ ಸಾರ್ವಜನಿಕಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...