ಗೋವಾ ನೈಟ್‌ ಕ್ಲಬ್‌ನಲ್ಲಿ ಭೀಕರ ಬೆಂಕಿ ದುರಂತ: 23 ಮಂದಿ ಜೀವಂತ ದಹನ

Date:

ಗೋವಾದ ನೈಟ್ ಕ್ಲಬ್‌ನಲ್ಲಿ ಶನಿವಾರ ತಡರಾತ್ರಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 23 ಮಂದಿ ಜೀವಂತ ಸುಟ್ಟುಹೋಗಿದ್ದಾರೆ. ಉತ್ತರ ಗೋವಾದ ಅರ್ಪೋರಾ ಪ್ರದೇಶದ ಬಾಗಾ ಬೀಜ್ ಬಳಿಯ ನೈಟ್ ಕ್ಲಬ್‌ ‘ಬಿರ್ಚ್ ಬೈ ರೋಮಿಯೋ ಲೇನ್‌’ನಲ್ಲಿ ಘಟನೆ ನಡೆದಿದೆ.

ಕ್ಲಬ್‌ನ ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದ್ದರಿಂದ ದುರಂತ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಕ್ಲಬ್ ಸಿಬ್ಬಂದಿ ಮತ್ತು ಪ್ರವಾಸಿಗರು ಸಾವನ್ನಪ್ಪಿದ್ದಾರೆ.

ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡಿದ್ದು, ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಮತ್ತು ವಾಹನಗಳನ್ನು ನಿಯೋಜಿಸಲಾಗಿದ್ದು, ಭಾನುವಾರ ಬೆಳಗಿನ ಜಾವದವರೆಗೂ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದುರ್ಘಟನೆಯ ವಿಡಿಯೋಗಳು ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಕಟ್ಟಡದಿಂದ ಬೆಂಕಿ ಹೊರಹೊಮ್ಮುತ್ತಿರುವುದು, ದಟ್ಟ ಹೊಗೆ ಆವರಿಸಿರುವುದು ಕಂಡುಬಂದಿದೆ.

ಮೃತರಲ್ಲಿ ಹೆಚ್ಚಿನವರು ಕ್ಲಬ್ ಸಿಬ್ಬಂದಿ, ಪ್ರವಾಸಿಗರು ಎಂದು ಪೊಲೀಸರು ಅಂದಾಜಿಸಿದ್ದಾರೆ. ಮೃತರಲ್ಲಿ ಹೆಚ್ಚಿನವರು ಅಡುಗೆ ಸಿಬ್ಬಂದಿಯ ಸದಸ್ಯರು ಮತ್ತು ಮೂವರು ಮಹಿಳೆಯರು ಸೇರಿದ್ದಾರೆ ಎಂದು ಗೋವಾ ಡಿಜಿಪಿ ಅಲೋಕ್ ಕುಮಾರ್ ದೃಢಪಡಿಸಿದ್ದಾರೆ.

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಡಿದ್ದಾರೆ. “ಮೃತರಲ್ಲಿ ಮೂರರಿಂದ ನಾಲ್ಕು ಪ್ರವಾಸಿಗರು ಕೂಡ ಇದ್ದಾರೆ. ಇದು ನಮಗೆಲ್ಲರಿಗೂ ತುಂಬಾ ನೋವಿನ ದಿನವಾಗಿದೆ. ಬೆಂಕಿಯ ನಿಖರವಾದ ಕಾರಣವನ್ನು ನಿರ್ಧರಿಸಲು ತನಿಖೆ ನಡೆಯುತ್ತಿದೆ. ಮಾತ್ರವಲ್ಲದೆ, ಕ್ಲಬ್‌ನಲ್ಲಿ ಅಗ್ನಿ ಸುರಕ್ಷತೆ ಮತ್ತು ಕಟ್ಟಡ ನಿಯಮಗಳನ್ನು ಪಾಲಿಸಲಾಗಿದೆಯೇ ಎಂಬುದರ ಕುರಿತೂ ತನಿಖೆಗೆ ಆದೇಶಿಸಲಾಗಿದೆ. ಯಾವುದೇ ನಿರ್ಲಕ್ಷ್ಯವಿದ್ದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...