ಗೋವಾ ನೈಟ್‌ಕ್ಲಬ್ ಅಗ್ನಿ ದುರಂತ: ಎಫ್‌ಐಆರ್ ದಾಖಲು; ಸರ್‌ಪಂಚ್ ಪೊಲೀಸ್ ವಶಕ್ಕೆ

Date:

ಗೋವಾ ನೈಟ್‌ಕ್ಲಬ್ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಇಬ್ಬರು ಮಾಲೀಕರು, ಅದರ ವ್ಯವಸ್ಥಾಪಕರು ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಹಾಗೆಯೇ ಈ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಅರ್ಪೋರಾ-ನಗೋವಾ ಪಂಚಾಯತ್‌ನ ಸರಪಂಚರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಉತ್ತರ ಗೋವಾದ ಅರ್ಪೋರಾ ಗ್ರಾಮದಲ್ಲಿರುವ ಜನಪ್ರಿಯ ನೈಟ್‌ಕ್ಲಬ್ ಬಿರ್ಚ್ ಬೈ ರೋಮಿಯೋ ಲೇನ್‌ನಲ್ಲಿ ಭಾನುವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದ್ದು ನಾಲ್ವರು ಪ್ರವಾಸಿಗರು ಮತ್ತು 14 ಸಿಬ್ಬಂದಿ ಸೇರಿದಂತೆ ಕನಿಷ್ಠ 25 ಮಂದಿ ಸಾವನ್ನಪ್ಪಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಈಗಾಗಲೇ ಅಗ್ನಿ ದುರಂತದ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

ಇದನ್ನು ಓದಿದ್ದೀರಾ? ಗೋವಾ ನೈಟ್‌ಕ್ಲಬ್‌ ಅಗ್ನಿ ಅವಘಡ | ಸಮಗ್ರ ತನಿಖೆಗೆ ಕಾಂಗ್ರೆಸ್ ಒತ್ತಾಯ; ಆಡಳಿತದ ವೈಫಲ್ಯ ಎಂದ ರಾಹುಲ್ ಗಾಂಧಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಪಿಟಿಐಗೆ ಮಾಹಿತಿ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಭಾರತೀಯ ನ್ಯಾಯ ಸಂಹಿತೆಯ ವಿವಿಧ ವಿಭಾಗಗಳ ಅಡಿಯಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಕ್ಲಬ್‌ನ ವ್ಯವಸ್ಥಾಪಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.

“2013ರಲ್ಲಿ ಈ ಕ್ಲಬ್‌ಗೆ ಪರವಾನಗಿ ನೀಡಿದ್ದ ಅರ್ಪೋರಾ-ನಗೋವಾ ಪಂಚಾಯತ್‌ನ ಸರಪಂಚ ರೋಶನ್ ರೆಡ್ಕರ್ ಅವರನ್ನೂ ಪೊಲೀಸರು ಬಂಧಿಸಿದ್ದಾರೆ. ಕ್ಲಬ್ ಅನ್ನು ಸೌರವ್ ಲುತ್ರಾ ನಡೆಸುತ್ತಿದ್ದರು. ಅವರು ತಮ್ಮ ಪಾಲುದಾರರೊಂದಿಗೆ ವಿವಾದ ಹೊಂದಿದ್ದರು ಎಂದು ರೆಡ್ಕರ್ ತಿಳಿಸಿದ್ದಾರೆ. ಪರಿಸ್ಪರ ದೂರು ದಾಖಲಿಸಿಕೊಂಡಿದ್ದಾರೆ. ನಾವು ಆವರಣವನ್ನು ಪರಿಶೀಲಿಸಿದ್ದೇವೆ ಮತ್ತು ಅವರು ಕ್ಲಬ್ ನಿರ್ಮಿಸಲು ಅನುಮತಿ ಹೊಂದಿಲ್ಲ ಎಂದು ತಿಳಿದುಬಂದಿದೆ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...