ಬಿಲ್ಕಿಸ್‌ ಬಾನೊ ಪ್ರಕರಣ: ಗೋಧ್ರಾ ಜೈಲಿನ ಅಧಿಕಾರಿಗಳಿಗೆ ಶರಣಾದ ಎಲ್ಲ 11 ಅಪರಾಧಿಗಳು

Date:

ಸುಪ್ರೀಂ ಕೋರ್ಟ್ ವಿಧಿಸಿರುವ ಗಡುವಿಗೆ ಅನುಗುಣವಾಗಿ ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಗೋಧ್ರಾ ಉಪ ಜೈಲಿನ ಅಧಿಕಾರಿಗಳ ಮುಂದೆ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲ 11 ಮಂದಿ ಅಪರಾಧಿಗಳು ಭಾನುವಾರ ತಡರಾತ್ರಿ ಶರಣಾಗಿದ್ದಾರೆ ಎಂದು ಸ್ಥಳೀಯ ಅಪರಾಧ ವಿಭಾಗದ ಇನ್ಸ್‌ಪೆಕ್ಟರ್ ಎನ್‌ಎಲ್ ದೇಸಾಯಿ ಹೇಳಿದ್ದಾರೆ.

“ಅಪರಾಧಿಗಳಿಗೆ ಕ್ಷಮಾದಾನ ನೀಡುವ ಪ್ರಕ್ರಿಯೆಯಲ್ಲಿ ಗುಜರಾತ್ ಸರ್ಕಾರವು ತನ್ನ ವಿವೇಚನಾ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದೆ” ಎಂದು ಜನವರಿ 8ರಂದು ಚಾಟಿ ಬೀಸಿದ್ದ ಸುಪ್ರಿಂ ಕೋರ್ಟ್, “ಅಪರಾಧಿಗಳು ಮುಂದಿನ 2 ವಾರದೊಳಗೆ ಜೈಲಿಗೆ ಹಿಂದಿರುಗಬೇಕು” ಎಂದು ಆದೇಶ ಹೊರಡಿಸಿತ್ತು.

ಪೊಲೀಸರಿಗೆ ಶರಣಾಗಲು ನೀಡಲಾಗಿರುವ ಸಮಯಾವಕಾಶವನ್ನು ವಿಸ್ತರಿಸುವಂತೆ ಕೋರಿ ಕಳೆದ ಶುಕ್ರವಾರ (ಜನವರಿ 19) ಅಪರಾಧಿಗಳು ಸಲ್ಲಿಸಿದ್ದ ಅರ್ಜಿಯನ್ನೂ ಸುಪ್ರಿಂ ಕೋರ್ಟ್ ವಜಾಗೊಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾನುವಾರ ತಡರಾತ್ರಿ 11 ಅಪರಾಧಿಗಳಾದ, ಬಕಾಭಾಯಿ ವೋಹಾನಿಯಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೋಹಾನಿಯಾ, ಗೋವಿಂದ್ ನಾಯ್, ಜಸ್ವಂತ್ ನಾಯ್, ಮಿತೇಶ್ ಭಟ್, ಪ್ರದೀಪ್ ಮೋರ್ಧಿಯಾ, ರಾಧೇಶ್ಯಾಮ್ ಶಾ, ರಾಜುಭಾಯ್ ಸೋನಿ, ರಮೇಶ್ ಚಂದನಾ ಮತ್ತು ಶೈಲೇಶ್ ಭಟ್ ಜೈಲಿಗೆ ಶರಣಾಗಿದ್ದಾರೆ.

ಘಟನೆ ಹಿನ್ನೆಲೆ 

2002ರಲ್ಲಿ ಗೋಧ್ರಾ ರೈಲು ದುರಂತದ ಬಳಿಕ ಗುಜರಾತ್‌ನಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಸುರಕ್ಷಿತ ಜಾಗಕ್ಕೆ ತೆರಳುತ್ತಿದ್ದ ಬಿಲ್ಕಿಸ್‌ ಬಾನೊ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಅವರ ಮೂರು ವರ್ಷದ ಮಗಳೂ ಸೇರಿದಂತೆ, ಕುಟುಂಬದ 7 ಮಂದಿಯನ್ನು ಹತ್ಯೆ ಮಾಡಲಾಗಿತ್ತು. ಆಗ 21 ವರ್ಷದವರಾಗಿದ್ದ ಬಾನೊ, ಐದು ತಿಂಗಳ ಗರ್ಭಿಣಿಯೂ ಆಗಿದ್ದರು.

ಈ ಪ್ರಕರಣದ 11 ಅಪರಾಧಿಗಳಿಗೆ 2008ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಆದರೆ, ಗುಜರಾತ್ ಸರ್ಕಾರದ ಆದೇಶದ ಮೇರೆಗೆ ಎಲ್ಲ ಅಪರಾಧಿಗಳು 2022ರ ಆಗಸ್ಟ್‌ 15ರಂದು ಜೈಲಿನಿಂದ ಬಿಡುಗಡೆಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...