ಮತ್ತೆ ಒಡತಿ ಕೈ ಸೇರಿತು ಮೂರು ವರ್ಷಗಳ ಹಿಂದೆ ಕಾಗೆ ಹೊತ್ತೊಯ್ದಿದ್ದ ಚಿನ್ನದ ಬಳೆ!

Date:

ಸುಮಾರು ಮೂರು ವರ್ಷಗಳ ಹಿಂದೆ ಕಾಗೆ ಹೊತ್ತೊಯ್ದಿದ್ದ ಚಿನ್ನದ ಬಳೆ ಈಗ ಮತ್ತೆ ಒಡತಿ ಕೈ ಸೇರಿದೆ ಘಟನೆ ಕೇರಳದ ಮಲಪ್ಪುರಂನ ತ್ರಿಕ್ಕಲಗೊಂಡ್‌ನಲ್ಲಿ ನಡೆದಿದೆ. ಕಾಗೆ ಹೊತ್ತೊಯ್ದ ಬಳೆ ಸಿಗಲು ಸಾಧ್ಯವೇ ಇಲ್ಲ ಎಂದುಕೊಂಡಿದ್ದ ಕುಟುಂಬಕ್ಕೆ ಆಶ್ಚರ್ಯ ಉಂಟಾಗಿದೆ. ಅದೂ ಮೂರು ವರ್ಷಗಳ ಬಳಿಕ!

ರುಕ್ಮಿಣಿ ಎಂಬವರು ಮೂರು ವರ್ಷಗಳ ಹಿಂದೆ ಕೆಲಸ ಮಾಡುತ್ತಿರುವಾಗ ಒಂದೂವರೆ ಪವನ್ ಅಂದರೆ ಸುಮಾರು 12 ಗ್ರಾಂ ಚಿನ್ನದ ಬಳೆಯನ್ನು ತೆಗೆದು ಬದಿಗಿಟ್ಟು ಕೆಲಸ ಮಾಡುತ್ತಿದ್ದರು. ಆದರೆ ದಿಢೀರ್ ಆಗಿ ಬಂದ ಕಾಗೆ ಬಳೆಯನ್ನು ಹೊತ್ತು ಹಾರಿತ್ತು. ಕೆಲವು ದಿನಗಳ ಕಾಲ ಬಳೆಯ ಹುಡುಕಾಟ ನಡೆಸಿದ್ದ ರುಕ್ಮಿಣಿ ಕುಟುಂಬ ಇನ್ನು ಬಳೆ ನಮಗೆ ಸಿಗದು ಎಂದು ಕೈಚೆಲ್ಲಿತ್ತು.

ಇದನ್ನು ಓದಿದ್ದೀರಾ? ಚೀನಾ | ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಿಸಿದ ‘ಡ್ರೋನ್’ – ವಿಡಿಯೋ ವೈರಲ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಅದೇ ಚಿನ್ನದ ಬಳೆ ರುಕ್ಮಿಣಿ ಮನೆಯಿಂದ ಸುಮಾರು 50 ಮೀಟರ್ ದೂರದಲ್ಲಿರುವ ಅನ್ವರ್ ಸಾದತ್ ಎಂಬವರ ಮನೆಯ ಹಿತ್ತಲ ಮಾವಿನ ಮರದಲ್ಲಿದ್ದ ಕಾಗೆ ಗೂಡಿನಲ್ಲಿ ಸಿಕ್ಕಿದೆ. ಮಾವಿನ ಹಣ್ಣನ್ನು ಕೊಯ್ಯಲೆಂದು ಮರವನ್ನು ಕುಲುಕಿಸಿದಾಗ ಚಿನ್ನ ಕೆಳಕ್ಕೆ ಬಿದ್ದಿದೆ ಎಂದು ವರದಿಯಾಗಿದೆ.

ತಮಗೆ ಸಿಕ್ಕ ಈ ಚಿನ್ನವನ್ನು ಇಟ್ಟುಕೊಳ್ಳದೆ ಪ್ರಾಮಾಣಿಕತೆ ಮೆರೆದ ಅನ್ವರ್ ಸಾದತ್ ಕುಟುಂಬ ತ್ರಿಕ್ಕಲಂಗೋಡ್ ಸಾರ್ವಜನಿಕ ಗ್ರಂಥಾಲಯಕ್ಕೆ ನೀಡಿದ್ದಾರೆ. ಇದರ ಜಾಹೀರಾತು ನೋಡಿದ ರುಕ್ಮಿಣಿ ಪತಿಯೊಂದಿಗೆ ಗ್ರಂಥಾಲಯಕ್ಕೆ ಹೋಗಿ ಬಳೆ ತನ್ನದೇ ಎಂದು ಖಚಿತಪಡಿಸಿಕೊಂಡಿದ್ದಾರೆ.

ಚಿನ್ನ1

ಹಾಗೆಯೇ ಈ ಚಿನ್ನ ಪತ್ತೆಹಚ್ಚಿದವರ ಕೈಯಿಂದಲೇ ಪಡೆಯಬೇಕು ಎಂದು ಮನವಿ ಮೇರೆಗೆ ಊರಿನವರು ಅನ್ವರ್ ಸಾದತ್ ಕೈಯಿಂದಲೇ ರುಕ್ಮಿಣಿ ಅವರಿಗೆ ಬಳೆಯನ್ನು ಕೊಡಿಸಿದ್ದಾರೆ. ಬಳೆ ತುಂಡಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ರುಕ್ಮಿಣಿ, “ಈ ಬಳೆ ಮತ್ತೆ ನನಗೆ ಸಿಗುತ್ತದೆ ಎಂದು ನಾನು ಎಂದಿಗೂ ಭಾವಿಸಿರಲಿಲ್ಲ. ಇದು ಸಿನಿಮಾದಂತೆ ಸಂಭವಿಸಿದೆ” ಎಂದು ಹೇಳಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...